ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟಿ20 ಪಂದ್ಯದಲ್ಲಿ 6 ರನ್ಗಳಿಂದ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 160 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಪೂರ್ಣ ಓವರ್ ಆಡಿ 8 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕುವುದಕಷ್ಟೇ ಶಕ್ತವಾಯಿತು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟಿ20 ಪಂದ್ಯದಲ್ಲಿ 6 ರನ್ಗಳಿಂದ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿದೆ.
ಆರ್ಷದೀಪ್ ಸಿಂಗ್ 20ನೇ ಓವರ್‌ನ ಮೂರನೇ ಎಸೆತದಲ್ಲಿ ಮ್ಯಾಥ್ಯೂ ವೇಡ್‌ಗೆ ಪೆವಿಲಿಯನ್ ಹಾದಿ ತೋರಿಸಿದರು.ಈಗ ಕೊನೆಯ ಮೂರು ಎಸೆತಗಳಲ್ಲಿ ಆಸ್ಟ್ರೇಲಿಯಾ ಗೆಲುವಿಗೆ 10 ರನ್‌ಗಳ ಅಗತ್ಯವಿದೆ.
ಮಕುಶ್ ಕುಮಾರ್ 17ನೇ ಓವರ್‌ನಲ್ಲಿ ಸತತ ಎರಡು ಎಸೆತಗಳಲ್ಲಿ 2 ವಿಕೆಟ್ ಕಬಳಿಸಿದ್ದಾರೆ. ಅವರು ಮ್ಯಾಥ್ಯೂ ಶಾರ್ಟ್ ಮತ್ತು ಬೆನ್ ದ್ವಾರ್ಶುಯಿಸ್ ಅವರನ್ನು ವಜಾಗೊಳಿಸಿದ್ದಾರೆ. ಆಸ್ಟ್ರೇಲಿಯಾ 17 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 129 ರನ್ ಗಳಿಸಿದೆ.
ಅರ್ಧಶತಕ ಬಾರಿಸಿದ ಬೆನ್ ಮೆಕ್‌ಡರ್ಮಾಟ್ ಅವರನ್ನು ಅರ್ಷದೀಪ್ ಸಿಂಗ್ ಔಟ್ ಮಾಡಿದ್ದಾರೆ. ರಿಂಕು ಸಿಂಗ್ ಉತ್ತಮ ಕ್ಯಾಚ್ ಪಡೆದರು. 15 ಓವರ್‌ಗಳಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿದೆ.
ಅಕ್ಷರ್ ಪಟೇಲ್, ಟಿಮ್ ಡೇವಿಡ್ಗೆ ಪೆವಿಲಿಯನ್ ಹಾದಿ ತೋರಿಸಿದ್ದಾರೆ. ಆಸ್ಟ್ರೇಲಿಯಾ ತಂಡದ ನಾಲ್ಕು ವಿಕೆಟ್‌ಗಳು ಪತನಗೊಂಡಿವೆ. ಟಿಮ್ ಡೇವಿಡ್ 17 ರನ್ ಕೊಡುಗೆ ನೀಡಿದರು.
13 ಓವರ್‌ಗಳ ನಂತರ ಆಸ್ಟ್ರೇಲಿಯಾ ತಂಡ 3 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿದೆ. ಬೆನ್ ಮೆಕ್‌ಡರ್ಮಾಟ್ 45 ರನ್ ಮತ್ತು ಟಿಮ್ ಡೇವಿಡ್ 17 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
10 ಓವರ್‌ಗಳ ನಂತರ ಆಸ್ಟ್ರೇಲಿಯಾ ತಂಡ 3 ವಿಕೆಟ್ ನಷ್ಟಕ್ಕೆ 70 ರನ್ ಗಳಿಸಿದೆ. ಬೆನ್ ಮೆಕ್‌ಡರ್ಮಾಟ್ 25 ರನ್ ಮತ್ತು ಟಿಮ್ ಡೇವಿಡ್ 6 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ಟೀಂ ಇಂಡಿಯಾ ಮೂರನೇ ವಿಕೆಟ್ ಪಡೆದಿದೆ. ಆರನ್ ಹಾರ್ಡಿಯನ್ನು ಔಟ್ ಮಾಡುವ ಮೂಲಕ ರವಿ ಬಿಷ್ಣೋಯ್ ಕಾಂಗರೂಗಳಿಗೆ ಮೂರನೇ ಹೊಡೆತ ನೀಡಿದ್ದಾರೆ. ಆಸ್ಟ್ರೇಲಿಯಾ 3 ವಿಕೆಟ್‌ಗೆ 55 ರನ್ ಕಲೆಹಾಕಿದೆ.
ಆಸ್ಟ್ರೇಲಿಯಾ ತಂಡ 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿದೆ. ಕ್ರೀಸ್‌ನಲ್ಲಿ ಆರನ್ ಹಾರ್ಡಿ 1 ರನ್ ಮತ್ತು ಬೆನ್ ಮೆಕ್‌ಡರ್ಮಾಟ್ 14 ರನ್ ಗಳಿಸಿ ಆಡುತಿದ್ದಾರೆ.
ಆಸ್ಟ್ರೇಲಿಯಾ ತಂಡ 3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿದೆ. ಕ್ರೀಸ್‌ನಲ್ಲಿರುವ ಬೆನ್ ಮೆಕ್‌ಡರ್ಮಾಟ್ 6 ರನ್, ಟ್ರಾವಿಸ್ ಹೆಡ್ 17 ರನ್ ಗಳಿಸಿ ಆಡುತ್ತಿದ್ದಾರೆ.
ಭಾರತಕ್ಕೆ ಮೊದಲ ವಿಕೆಟ್ ಸಿಕ್ಕಿದೆ. ಮೂರನೇ ಓವರ್‌ನ ಮೂರನೇ ಎಸೆತದಲ್ಲಿ ಮುಕೇಶ್ ಕುಮಾರ್ ಜೋಶ್ ಫಿಲಿಪ್ ಅವರನ್ನು ಬೌಲ್ಡ್ ಮಾಡಿದರು.
ಅರ್ಷದೀಪ್ ಸಿಂಗ್ ಮೊದಲ ಓವರ್‌ನಲ್ಲಿ 14 ರನ್ ನೀಡಿದರು. ಈ ಓವರ್‌ನಲ್ಲಿ ಹೆಡ್ ಹ್ಯಾಟ್ರಿಕ್ ಫೋರ್ ಬಾರಿಸಿದರು.
ಆಸ್ಟ್ರೇಲಿಯಾ ಬ್ಯಾಟಿಂಗ್ ಆರಂಭಿಸಿದೆ. ಆರಂಭಿಕ ಜೋಡಿ ಟ್ರಾವಿಸ್ ಹೆಡ್ ಮತ್ತು ಜೋಶ್ ಫಿಲಿಪ್ ಮೈದಾನಕ್ಕೆ ಬಂದಿದ್ದಾರೆ. ಟೀಂ ಇಂಡಿಯಾ ಆಸ್ಟ್ರೇಲಿಯಾಕ್ಕೆ 160 ರನ್‌ಗಳ ಸವಾಲನ್ನು ನೀಡಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 160 ರನ್ ಗಳಿಸಿದೆ. ಭಾರತದ ಪರ ಶ್ರೇಯಸ್ ಅಯ್ಯರ್ 53 ರನ್‌ಗಳ ಗರಿಷ್ಠ ಇನ್ನಿಂಗ್ಸ್ ಆಡಿದರೆ, ಜಿತೇಶ್ ಶರ್ಮಾ 24 ರನ್ ಮತ್ತು ಅಕ್ಷರ್ ಪಟೇಲ್ 31 ರನ್ ಕೊಡುಗೆ ನೀಡಿದರು. ಯಶಸ್ವಿ ಜೈಸ್ವಾಲ್ 21 ರನ್ ಮತ್ತು ರಿತುರಾಜ್ ಗಾಯಕ್ವಾಡ್ 10 ರನ್ ಕೊಡುಗೆ ನೀಡಿದರು.
ಆಸ್ಟ್ರೇಲಿಯಾ ವಿರುದ್ಧ ಶ್ರೇಯಸ್ ಅಯ್ಯರ್ ಭರ್ಜರಿ ಅರ್ಧಶತಕ ಗಳಿಸಿದರು. ಅವರಿಂದಲೇ ಟೀಂ ಇಂಡಿಯಾ ಗೌರವಾನ್ವಿತ ಸ್ಕೋರ್ ತಲುಪಲು ಸಾಧ್ಯವಾಯಿತು. ಅವರು 53 ರನ್‌ಗಳ ಇನಿಂಗ್ಸ್ ಆಡಿದರು.
ಆಸ್ಟ್ರೇಲಿಯಾ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಭಾರತ ತಂಡಕ್ಕೆ ಅಕ್ಷರ್ ಪಟೇಲ್ ರೂಪದಲ್ಲಿ ಆರನೇ ಹೊಡೆತ ಬಿದ್ದಿದೆ. ಈ ಪಂದ್ಯದಲ್ಲಿ ಅಕ್ಷರ್ 31 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. 19 ಓವರ್‌ಗಳ ಅಂತ್ಯಕ್ಕೆ ಭಾರತ ತಂಡ 6 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿದೆ.
14 ಓವರ್‌ಗಳಲ್ಲಿ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿದೆ. ಅಕ್ಷರ್ ಪಟೇಲ್ 1 ರನ್ ಮತ್ತು ಶ್ರೇಯಸ್ ಅಯ್ಯರ್ 29 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ಟೀಂ ಇಂಡಿಯಾಕ್ಕೆ ಐದನೇ ಹೊಡೆತ ಬಿದ್ದಿದೆ. ಜಿತೇಶ್ ಶರ್ಮಾ 16 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರು. ಹೀಗಾಗಿ ಟೀಂ ಇಂಡಿಯಾ ಸ್ಕೋರ್ 5 ವಿಕೆಟ್ ನಷ್ಟಕ್ಕೆ 97 ಆಗಿದೆ.
10 ಓವರ್‌ಗಳಲ್ಲಿ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 61 ರನ್ ಗಳಿಸಿದೆ. ಜಿತೇಶ್ ಶರ್ಮಾ 5 ಹಾಗೂ ಶ್ರೇಯಸ್ ಅಯ್ಯರ್ 11 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಪರ ದೊಡ್ಡ ಇನ್ನಿಂಗ್ಸ್ ಆಡಿದ್ದ ರಿಂಕು ಸಿಂಗ್ ಈ ಪಂದ್ಯದಲ್ಲಿ 6 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.
8 ಓವರ್‌ಗಳಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 49 ರನ್ ಗಳಿಸಿದೆ. ಟೀಂ ಇಂಡಿಯಾ ಪರ ರಿಂಕು ಸಿಂಗ್ 1 ರನ್ ಹಾಗೂ ಶ್ರೇಯಸ್ ಅಯ್ಯರ್ 9 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಭಾರತ ತಂಡ 7 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 46 ರನ್ ಗಳಿಸಿದೆ. ಕ್ರೀಸ್‌ನಲ್ಲಿ ರಿಂಕು ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಇದ್ದಾರೆ.
ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೇವಲ 5 ರನ್ ಗಳಿಸಿ ಔಟಾಗಿದ್ದಾರೆ.
ಟೀಂ ಇಂಡಿಯಾ ಬ್ಯಾಕ್ ಟು ಬ್ಯಾಕ್ 2 ವಿಕೆಟ್ ಕಳೆದುಕೊಂಡಿದೆ. ಟೀಂ ಇಂಡಿಯಾದ ಆರಂಭಿಕ ಜೋಡಿ ಪೆವಿಲಿಯನ್‌ಗೆ ಮರಳಿದೆ. ಯಶಸ್ವಿ ಜೈಸ್ವಾಲ್ ನಂತರ ರುತುರಾಜ್ ಗಾಯಕ್ವಾಡ್ ಕೂಡ ಔಟ್ ಆಗಿದ್ದಾರೆ. ಯಶಸ್ವಿ 21 ಮತ್ತು ರುತುರಾಜ್ 10 ರನ್ ಗಳಿಸಿದರು.
ಆಸ್ಟ್ರೇಲಿಯಾ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು, ಆದರೆ ಅವರು 15 ಎಸೆತಗಳಲ್ಲಿ 21 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ನಾಲ್ಕು ಓವರ್‌ಗಳಲ್ಲಿ ಟೀಂ ಇಂಡಿಯಾ ಒಂದು ವಿಕೆಟ್ ನಷ್ಟಕ್ಕೆ 33 ರನ್ ಗಳಿಸಿದೆ.
ಹಾರ್ಡಿ ತಮ್ಮ ಎರಡನೇ ಓವರ್‌ನಲ್ಲಿ ಸ್ಟ್ರಾಂಗ್ ಲೆಂಗ್ತ್ನಲ್ಲಿ ಬೌಲಿಂಗ್ ಮಾಡುತ್ತಿದ್ದಾರೆ. ಭಾರತದ ಈವರೆಗಿನ ಆರಂಭ ಕೊಂಚ ನಿಧಾನವಾಗಿದೆ.
ಒಂದು ಓವರ್ ನಂತರ ಭಾರತ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 5 ರನ್ ಗಳಿಸಿದೆ. ರುತುರಾಜ್ ಗಾಯಕ್ವಾಡ್ 4 ರನ್ ಮತ್ತು ಯಶಸ್ವಿ ಜೈಸ್ವಾಲ್ 1 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಟ್ರಾವಿಸ್ ಹೆಡ್, ಜೋಶ್ ಫಿಲಿಪ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ), ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ.
ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್, ಅರ್ಶ್ದೀಪ್ ಸಿಂಗ್.
ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
Published On - 6:32 pm, Sun, 3 December 23