
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭವಾಗಲಿದೆ. ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಗುಲಾಬಿ ಬಣ್ಣದ ಚೆಂಡಿನೊಂದಿಗೆ ಆಡಲಾಗುತ್ತದೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 295 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಭಾರತ ತಂಡ ಪ್ರಸ್ತುತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 1-0 ಮುನ್ನಡೆಯಲ್ಲಿದೆ. ತಂಡಕ್ಕೆ ಖಾಯಂ ನಾಯಕ ರೋಹಿತ್ ಶರ್ಮಾ ವಾಪಸಾಗಿದ್ದು, ಶುಭ್ಮನ್ ಗಿಲ್ ಕೂಡ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆಗಳಾಗುವುದು ಖಚಿತ. ಆದರೆ ಅದಕ್ಕೂ ಮುನ್ನ ಈ ಟೆಸ್ಟ್ ಭಾರತೀಯ ಕಾಲಮಾನದ ಪ್ರಕಾರ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ? ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 6 ರಿಂದ ಡಿಸೆಂಬರ್ 10 ರವರೆಗೆ ನಡೆಯಲಿದೆ. ಆಸ್ಟ್ರೇಲಿಯನ್ ಕಾಲಮಾನದ ಪ್ರಕಾರ, ಈ ಟೆಸ್ಟ್ ಪಂದ್ಯ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಗಲಿದೆ. ಅಂದರೆ ಭಾರತೀಯ ಕಾಲಮಾನದ ಪ್ರಕಾರ, ಈ ಟೆಸ್ಟ್ ಪಂದ್ಯವು ಬೆಳಿಗ್ಗೆ 9:30 ರಿಂದ ಪ್ರಾರಂಭವಾಗಲಿದ್ದು, ಬೆಳಿಗ್ಗೆ 9 ಗಂಟೆಗೆ ಟಾಸ್ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಅಡಿಲೇಡ್‌ನ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿದೆ.
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2 ನೇ ಟೆಸ್ಟ್ ಪಂದ್ಯದ ನೇರ ಪ್ರಸಾರ ಲಭ್ಯವಿರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.
ಅಡಿಲೇಡ್ ಟೆಸ್ಟ್‌ನ ಮೊದಲ ಸೆಷನ್ ಭಾರತೀಯ ಕಾಲಮಾನ ಬೆಳಿಗ್ಗೆ 9:30 ರಿಂದ 11:30 ರವರೆಗೆ ನಡೆಯಲಿದ್ದು, ನಂತರ ಭೋಜನ ವಿರಾಮವಿರುತ್ತದೆ. 40 ನಿಮಿಷಗಳ ವಿರಾಮದ ನಂತರ ಎರಡೂ ತಂಡಗಳು 12 ಗಂಟೆಗೆ ಎರಡನೇ ಸೆಷನ್ ಆರಂಭಿಸಲಿವೆ. ಎರಡನೇ ಸೆಷನ್ ಮಧ್ಯಾಹ್ನ 2:10 ರವರೆಗೆ ನಡೆಯಲಿದ್ದು, ಆ ನಂತರ 20 ನಿಮಿಷಗಳ ಚಹಾ ವಿರಾಮ ಇರುತ್ತದೆ. ಕೊನೆಯ ಸೆಷನ್ 2:30 ರಿಂದ ಪ್ರಾರಂಭವಾಗಲಿದ್ದು, 4:30 ಕ್ಕೆ ದಿನದಾಟವನ್ನು ಕೊನೆಗೊಳಿಸಲಾಗುತ್ತದೆ. ಪಂದ್ಯದ ವೇಳೆ ಮಳೆ ಬಂದರೆ, ಅಥವಾ ಬೇರೆ ಕಾರಣಗಳಿಂದ ಪಂದ್ಯವನ್ನು ನಿಲ್ಲಿಸಬೇಕಾದರೆ, ಅಂತಹ ಪರಿಸ್ಥಿತಿಯಲ್ಲಿ ಸೆಷನ್ ಸಮಯದಲ್ಲಿ ಬದಲಾವಣೆಯಾಗಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:41 pm, Thu, 5 December 24