IND vs AUS: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

India vs Australia Border-Gavaskar Trophy 2024: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ನವೆಂಬರ್ 23 ರಿಂದ ಆರಂಭವಾಗಲಿದೆ. ಐದು ಪಂದ್ಯಗಳ ಈ ಸರಣಿಯು ಭಾರತಕ್ಕೆ 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಅತ್ಯಂತ ಮುಖ್ಯ. ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ಪಂದ್ಯಗಳು ನಡೆಯಲಿವೆ.

IND vs AUS: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?
ಭಾರತ- ಆಸ್ಟ್ರೇಲಿಯಾ
Follow us
ಪೃಥ್ವಿಶಂಕರ
|

Updated on: Nov 18, 2024 | 7:56 PM

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ನವೆಂಬರ್ 23 ರಿಂದ ಆರಂಭವಾಗಲಿದೆ. ಉಭಯ ತಂಡಗಳ ನಡುವಿನ ಈ ಐದು ಟೆಸ್ಟ್ ಪಂದ್ಯಗಳು ಕ್ರಮವಾಗಿ ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿವೆ. ಈ ಸರಣಿಯ ಕಳೆದೆರಡು ಪ್ರವಾಸಗಳಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾವನ್ನು ಮಣಿಸಿ ಇತಿಹಾಸ ನಿರ್ಮಿಸಿತ್ತು. ಹೀಗಾಗಿ ಈ ಬಾರಿಯೂ ಅದೇ ಗೆಲುವಿನ ಓಟವನ್ನು ಮುಂದುವರೆಸಲು ಟೀಂ ಇಂಡಿಯಾ ಬಯಸಿದೆ. ಇದೆಲ್ಲದರ ಹೊರತಾಗಿ 2025 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ಗೆ ಅರ್ಹತೆ ಪಡೆಯಬೇಕೆಂದರೆ ಭಾರತವು, ಆಸ್ಟ್ರೇಲಿಯಾ ವಿರುದ್ಧದ ಈ ಟೆಸ್ಟ್ ಸರಣಿಯನ್ನು 4-0 ಅಂತರದಲ್ಲಿ ಗೆಲ್ಲಬೇಕಾಗಿದೆ. ಹೀಗಾಗಿ ಡಬ್ಲ್ಯುಟಿಸಿ ಫೈನಲ್ ದೃಷ್ಟಿಯಿಂದ ಈ ಸರಣಿಯ ಗೆಲುವು ಭಾರತಕ್ಕೆ ಅತ್ಯವಶ್ಯಕವಾಗಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿ ಅಡಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರೆಗೆ 16 ಟೆಸ್ಟ್ ಸರಣಿಗಳು ನಡೆದಿವೆ. ಈ ಪೈಕಿ 10 ಟೆಸ್ಟ್ ಸರಣಿಗಳನ್ನು ಭಾರತ ಗೆದ್ದಿದ್ದರೆ, ಆಸ್ಟ್ರೇಲಿಯಾ 5 ಟೆಸ್ಟ್ ಸರಣಿಗಳನ್ನು ಗೆದ್ದಿದೆ. ಉಳಿದಂತೆ 1 ಟೆಸ್ಟ್ ಸರಣಿ ಮಾತ್ರ ಡ್ರಾದಲ್ಲಿ ಅಂತ್ಯಗೊಂಡಿದೆ. ಇನ್ನು ಉಭಯ ತಂಡಗಳ ನಡೆಯಲ್ಲಿರುವ ಮೊದಲ ಟೆಸ್ಟ್ ಪಂದ್ಯದ ಬಗ್ಗೆ ಹೇಳುವುದಾದರೆ..

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ನವೆಂಬರ್ 22 ರಿಂದ 26 ರವರೆಗೆ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 22 ರಂದು (ಶುಕ್ರವಾರ) ಭಾರತೀಯ ಕಾಲಮಾನ ಬೆಳಿಗ್ಗೆ 7:50 ರಿಂದ ಆರಂಭವಾಗಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಟಿವಿಯಲ್ಲಿ ಯಾವ ಚಾನಲ್‌ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಯಾವ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ನೀವು ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ‘ಡಿಸ್ನಿ + ಹಾಟ್‌ಸ್ಟಾರ್’ ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಮೀಸಲು: ಮುಖೇಶ್ ಕುಮಾರ್, ನವದೀಪ್ ಸೈನಿ, ಖಲೀಲ್ ಅಹ್ಮದ್.

ಮೊದಲ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಜೋಶ್ ಹೇಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್ ಮತ್ತು ಮಿಚೆಲ್ ಸ್ಟಾರ್ಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್