AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಪಂದ್ಯದ 5 ದಿನವೂ ಭಾರಿ ಮಳೆ..! ಟೀಂ ಇಂಡಿಯಾ ಕನಸಿಗೆ ವರುಣನ ಅವಕೃಪೆ

India vs Australia 3rd Test, Brisbane Weather Report: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ಆರಂಭವಾಗಲಿದೆ. ಆದರೆ, ಐದು ದಿನಗಳ ಕಾಲ ಮಳೆಯ ಮುನ್ಸೂಚನೆಯಿದೆ. ಇದು ಭಾರತ ತಂಡದ WTC ಫೈನಲ್‌ಗೆ ಹೋಗುವ ಭರವಸೆಗಳ ಮೇಲೆ ಗಂಭೀರ ಪರಿಣಾಮ ಬೀರಬಹುದು. ಮಳೆಯಿಂದ ಪಂದ್ಯ ರದ್ದಾದರೆ, ಭಾರತ ಕಡಿಮೆ ಅಂಕಗಳನ್ನು ಪಡೆಯುತ್ತದೆ, ಮತ್ತು ಫೈನಲ್‌ಗೆ ಅರ್ಹತೆ ಪಡೆಯುವುದು ಕಷ್ಟವಾಗುತ್ತದೆ.

IND vs AUS: ಪಂದ್ಯದ 5 ದಿನವೂ ಭಾರಿ ಮಳೆ..! ಟೀಂ ಇಂಡಿಯಾ ಕನಸಿಗೆ ವರುಣನ ಅವಕೃಪೆ
ಗಾಬಾ ಹವಾಮಾನ
ಪೃಥ್ವಿಶಂಕರ
|

Updated on: Dec 13, 2024 | 8:42 PM

Share

ಪರ್ತ್‌ ಟೆಸ್ಟ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದ ಟೀಂ ಇಂಡಿಯಾ ಅಡಿಲೇಡ್‌ನಲ್ಲಿ ಅವಮಾನಕರ ಸೋಲನ್ನು ಎದುರಿಸಬೇಕಾಯಿತು. ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಇದೀಗ ಮತ್ತೊಮ್ಮೆ ರೆಡ್ ಬಾಲ್​ ಟೆಸ್ಟ್​ಗೆ ಸನ್ನದ್ಧವಾಗಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಾಳೆಯಿಂದ ಆರಂಭವಾಗಲಿದೆ. ಡಬ್ಲ್ಯುಟಿಸಿ ಫೈನಲ್​ಗೇರಬೇಕೆಂದರೆ ಟೀಂ ಇಂಡಿಯಾ ಈ ಸರಣಿ ಗೆಲ್ಲುವುದು ಅನಿವಾರ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬ್ರಿಸ್ಬೇನ್ ಪಂದ್ಯ ರೋಹಿತ್ ಪಡೆಗೆ ಮಹತ್ವದ್ದಾಗಿದೆ. ಆದರೆ ಈ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದ್ದು, ಐದು ದಿನಗಳಲ್ಲೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಎಲ್ಲಾ ಐದು ದಿನ ಮಳೆಯ ಮುನ್ಸೂಚನೆ

ಪರ್ತ್ ಮತ್ತು ಅಡಿಲೇಡ್ ನಂತರ ಈಗ ಭಾರತ ತಂಡಕ್ಕೆ ಗಾಬಾ ಸವಾಲು ಎದುರಾಗಿದೆ. ಆದರೆ ಹವಾಮಾನ ಇಲಾಖೆಯು ಡಿಸೆಂಬರ್ 14 ರ ಶನಿವಾರದಿಂದ ಪ್ರಾರಂಭವಾಗುವ ಈ ಪಂದ್ಯದ ಎಲ್ಲಾ ಐದು ದಿನಗಳು ಅಂದರೆ ಡಿಸೆಂಬರ್ 18 ರವರೆಗೆ ಮಳೆಯ ಮುನ್ಸೂಚನೆ ನೀಡಿದೆ. ಬ್ರಿಸ್ಬೇನ್ ಟೆಸ್ಟ್‌ನ ಮೊದಲ ದಿನ ಅಂದರೆ ಶನಿವಾರ 80%, ಎರಡನೇ ದಿನ 50%, ಮೂರನೇ, ನಾಲ್ಕನೇ ಮತ್ತು ಐದನೇ ದಿನ 70% ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಬೆಳಿಗ್ಗೆ ಮತ್ತು ಮಧ್ಯಾಹ್ನ ಮಳೆ ಬೀಳಬಹುದು ಎಂದು ವರದಿಯಾಗಿದೆ.

ಅಲ್ಲದೆ, ಈ ಐದು ದಿನಗಳಲ್ಲಿ ಮಿಂಚು ಮತ್ತು ಚಂಡಮಾರುತದೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ. ಆದಾಗ್ಯೂ, ಇದು ಪಂದ್ಯದ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಅಡಿಲೇಡ್ ಟೆಸ್ಟ್‌ನಲ್ಲೂ ಇದೇ ರೀತಿಯ ಭವಿಷ್ಯ ಹೇಳಲಾಗಿತ್ತು ಆದರೆ ಮಳೆ ಬರಲಿಲ್ಲ. ಆದರೆ ಮಳೆಯಿಂದಾಗಿ ಪಂದ್ಯ ರದ್ದಾಗಿ ಡ್ರಾದಲ್ಲಿ ಅಂತ್ಯಗೊಂಡರೆ ಡಬ್ಲ್ಯುಟಿಸಿ ಫೈನಲ್‌ಗೆ ಭಾರತದ ಹಾದಿ ಭಾಗಶಃ ಮುಚ್ಚಲಿದೆ.

ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿ

ಟೀಂ ಇಂಡಿಯಾ ಪ್ರಸ್ತುತ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ 57.29 ಶೇಕಡಾ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ನೇರವಾಗಿ ಫೈನಲ್ ಪ್ರವೇಶಿಸಬೇಕಾದರೆ ಕನಿಷ್ಠ 3-2 ಅಥವಾ 2-1 ಅಂತರದಿಂದ ಸರಣಿ ಗೆಲ್ಲಲೇಬೇಕು. ಈ ಪಂದ್ಯ ರದ್ದಾದರೆ ಟೀಂ ಇಂಡಿಯಾ 12 ಅಂಕಗಳ ಬದಲಿಗೆ ಕೇವಲ 4 ಅಂಕಗಳನ್ನು ಪಡೆಯಬೇಕಾಗುತ್ತದೆ. ಆ ಬಳಿಕ ಯಾವುದೇ ಬಲೆ ತೆತ್ತಾದರೂ ಮುಂದಿನ ಎರಡು ಪಂದ್ಯಗಳನ್ನು ಗೆಲ್ಲುವುದು ತಂಡಕ್ಕೆ ಅನಿವಾರ್ಯವಾಗುತ್ತದೆ. ಆಸ್ಟ್ರೇಲಿಯಾದ ಪರಿಸ್ಥಿತಿಗಳಲ್ಲಿ ಇದನ್ನು ಸಾಧಿಸುವುದು ಕಷ್ಟದ ಕೆಲಸ.

ಇದನ್ನು ಬಿಟ್ಟರೆ ಭಾರತ ತಂಡ ಡಬ್ಲ್ಯುಟಿಸಿ ಫೈನಲ್‌ಗೂ ಮುನ್ನ ಯಾವುದೇ ಸರಣಿಯನ್ನು ಹೊಂದಿಲ್ಲ. ಮತ್ತೊಂದೆಡೆ, ಈ ಸರಣಿಯ ಹೊರತಾಗಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಹೀಗಾಗಿ ಆಸ್ಟ್ರೇಲಿಯಾಕ್ಕೆ ಇನ್ನೊಂದು ಅವಕಾಶ ಸಿಗಲಿದೆ.

ಭಾರತ ಗೆದ್ದರೆ ಏನಗಲಿದೆ?

ಬ್ರಿಸ್ಬೇನ್‌ ಟೆಸ್ಟ್​ಗೆ ಮಳೆ ಅಡ್ಡಿ ಪಡಿಸದೆ, 2021ರಂತೆಯೇ ಗಾಬಾದಲ್ಲಿ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಗೆದ್ದರೆ, ಅದು ಶೇಕಡಾ 59.80 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರುತ್ತದೆ. ಆಸ್ಟ್ರೇಲಿಯಾ ಶೇ.56.67 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಜಾರಲಿದೆ. ಆಸ್ಟ್ರೇಲಿಯ ಗೆದ್ದರೆ ಸದ್ಯದ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸುನಿ
ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸುನಿ
ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ
ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ
ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ
ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?