
India vs Australia, ICC World Cup 2023 Final: ಏಕದಿನ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ನಾಯಕ ರೋಹಿತ್ ಶರ್ಮಾ 47 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 54 ರನ್ಗಳ ಕೊಡುಗೆ ನೀಡಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ 66 ರನ್ ಬಾರಿಸಿದ್ದರು. ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 50 ಓವರ್ಗಳಲ್ಲಿ 240 ರನ್ಗಳಿಸಿ ಟೀಮ್ ಇಂಡಿಯಾ ಆಲೌಟ್ ಆಯಿತು.
241 ರನ್ಗಳ ಸುಲಭ ಗುರಿ ಪಡೆದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಯಶಸ್ವಿಯಾಗಿದ್ದರು. ತಂಡದ ಮೊತ್ತ 47 ರನ್ ಆಗುವಷ್ಟರಲ್ಲಿ ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ ಹಾಗೂ ಸ್ಟೀವ್ ಸ್ಮಿತ್ ಪೆವಿಲಿಯನ್ ಸೇರಿದ್ದರು. ಈ ಹಂತದಲ್ಲಿ ಜೊತೆಗೂಡಿದ ಟ್ರಾವಿಸ್ ಹೆಡ್ ಹಾಗೂ ಮಾರ್ನಸ್ ಲಾಬುಶೇನ್ ಭರ್ಜರಿ ಜೊತೆಯಾಟ ಪ್ರದರ್ಶಿಸಿದರು.
ಟ್ರಾವಿಸ್ ಹೆಡ್ 120 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 15 ಫೋರ್ಗಳೊಂದಿಗೆ 137 ರನ್ ಬಾರಿಸಿದರು. ಅಲ್ಲದೆ 4ನೇ ವಿಕೆಟ್ಗೆ ಮಾರ್ನಸ್ ಲಾಬುಶೇನ್ (58) ಜೊತೆಗೂಡಿ 192 ರನ್ಗಳ ಜೊತೆಯಾಟವಾಡಿದರು. ಪರಿಣಾಮ ಕೇವಲ 43 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ತಂಡ 241 ರನ್ಗಳ ಗುರಿ ಮುಟ್ಟಿತು.
ಈ ಮೂಲಕ 6 ವಿಕೆಟ್ಗಳ ಜಯ ಸಾಧಿಸಿದ ಆಸ್ಟ್ರೇಲಿಯಾ ತಂಡವು 6ನೇ ಬಾರಿಗೆ ಏಕದಿನ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ. ಇತ್ತ 3ನೇ ಬಾರಿಗೆ ವಿಶ್ವಕಪ್ ಗೆಲ್ಲುವ ನಿರೀಕ್ಷೆಯಲ್ಲಿದ್ದ ಟೀಮ್ ಇಂಡಿಯಾ ಸೋಲಿನೊಂದಿಗೆ ವಿಶ್ವಕಪ್ ಅಭಿಯಾನವನ್ನು ಅಂತ್ಯಗೊಳಿಸಿದೆ.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆ್ಯಡಂ ಝಂಪಾ, ಜೋಶ್ ಹ್ಯಾಝಲ್‌ವುಡ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.
6 ವಿಕೆಟ್ಗಳ ಭರ್ಜರಿ ಜಯದೊಂದಿಗೆ 6ನೇ ಬಾರಿಗೆ ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯನ್ನರು.
6 ವಿಕೆಟ್ಗಳ ಭರ್ಜರಿ ಜಯದೊಂದಿಗೆ 6ನೇ ಬಾರಿಗೆ ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯನ್ನರು.
120 ಎಸೆತಗಳಲ್ಲಿ 15 ಫೋರ್ ಹಾಗೂ 4 ಭರ್ಜರಿ ಸಿಕ್ಸ್ ಸಿಡಿಸಿದ ಆಸ್ಟ್ರೇಲಿಯಾ ತಂಡದ ಎಡಗೈ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ಗೆ ಒಲಿದ ಪಂದ್ಯ ಶ್ರೇಷ್ಠ ಪ್ರಶಸ್ತಿ.
💯#CWC23 pic.twitter.com/hArXyCPJkU
— cricket.com.au (@cricketcomau) November 19, 2023
6 ವಿಕೆಟ್ಗಳ ಭರ್ಜರಿ ಜಯದೊಂದಿಗೆ 6ನೇ ಬಾರಿಗೆ ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯನ್ನರು.
ಟೀಮ್ ಇಂಡಿಯಾ ನೀಡಿದ 241 ರನ್ಗಳ ಗುರಿಯನ್ನು ಕೇವಲ 43 ಓವರ್ಗಳಲ್ಲಿ ಚೇಸ್ ಮಾಡಿದ ಆಸ್ಟ್ರೇಲಿಯಾ.
ಆಸ್ಟ್ರೇಲಿಯಾ ತಂಡಕ್ಕೆ 6 ವಿಕೆಟ್ಗಳ ಭರ್ಜರಿ ಜಯ.
6ನೇ ಬಾರಿ ಏಕದಿನ ವಿಶ್ವಕಪ್ ಗೆದ್ದುಕೊಂಡ ಆಸ್ಟ್ರೇಲಿಯಾ ತಂಡ.
ಆಸ್ಟ್ರೇಲಿಯಾ ಪರ 137 ರನ್ ಬಾರಿಸಿ ಅಬ್ಬರಿಸಿದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್.
ಮೊಹಮ್ಮದ್ ಸಿರಾಜ್ ಎಸೆದ 43ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ ಬೌಂಡರಿಯಲ್ಲಿ ಶುಭ್ಮನ್ ಗಿಲ್ಗೆ ಕ್ಯಾಚ್ ನೀಡಿದ ಟ್ರಾವಿಸ್ ಹೆಡ್.
120 ಎಸೆತಗಳಲ್ಲಿ 137 ರನ್ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದ ಟ್ರಾವಿಸ್ ಹೆಡ್.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಬ್ಯಾಟಿಂಗ್.
ಮೊಹಮ್ಮದ್ ಸಿರಾಜ್ ಎಸೆದ 41ನೇ ಓವರ್ನ 3ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಮಾರ್ನಸ್ ಲಾಬುಶೇನ್.
41 ಓವರ್ಗಳಲ್ಲಿ 230 ರನ್ ಗಳಿಸಿರುವ ಆಸ್ಟ್ರೇಲಿಯಾ ತಂಡಕ್ಕೆ ಇನ್ನು ಕೇವಲ 11 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಜಸ್ಪ್ರೀತ್ ಬುಮ್ರಾ ಎಸೆದ 40ನೇ ಓವರ್ನ ಕೊನೆಯ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಮಾರ್ನಸ್ ಲಾಬುಶೇನ್.
ಈ ಫೋರ್ನೊಂದಿಗೆ 99 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಮಾರ್ನಸ್ ಲಾಬುಶೇನ್.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಆಸ್ಟ್ರೇಲಿಯಾ ಗೆಲುವಿಗೆ ಕೇವಲ 16 ರನ್ಗಳ ಅವಶ್ಯಕತೆ.
ಆಸ್ಟ್ರೇಲಿಯಾ ತಂಡದ ಗೆಲುವಿಗೆ 66 ಎಸೆತಗಳಲ್ಲಿ ಕೇವಲ 22 ರನ್ಗಳ ಅವಶ್ಯಕತೆ.
39 ಓವರ್ಗಳಲ್ಲಿ 219 ರನ್ ಕಲೆಹಾಕಿರುವ ಆಸ್ಟ್ರೇಲಿಯಾ.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
22 ರನ್ಗಳ ಒಳಗೆ 7 ವಿಕೆಟ್ ಕಬಳಿಸಿದರೆ ಮಾತ್ರ ಟೀಮ್ ಇಂಡಿಯಾ ಜಯ ಸಾಧಿಸಬಹುದು.
ಕುಲ್ದೀಪ್ ಯಾದವ್ ಎಸೆದ 38ನೇ ಓವರ್ನ ಮೂರನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಟ್ರಾವಿಸ್ ಹೆಡ್.
38 ಓವರ್ಗಳ ಮುಕ್ತಾಯದ ವೇಳೆಗೆ 214 ರನ್ ಕಲೆಹಾಕಿದ ಆಸ್ಟ್ರೇಲಿಯಾ.
ಆಸ್ಟ್ರೇಲಿಯಾ ತಂಡದ ಗೆಲುವಿಗೆ 72 ಎಸೆತಗಳಲ್ಲಿ ಕೇವಲ 27 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಮೊಹಮ್ಮದ್ ಸಿರಾಜ್ ಎಸೆದ 37ನೇ ಓವರ್ನ 3ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಟ್ರಾವಿಸ್ ಹೆಡ್.
ಈ ಸಿಕ್ಸ್ನೊಂದಿಗೆ ದ್ವಿಶತಕ ಪೂರೈಸಿದ ಆಸ್ಟ್ರೇಲಿಯಾ.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ರವೀಂದ್ರ ಜಡೇಜಾ ಎಸೆದ 35ನೇ ಓವರ್ನ ಮೊದಲ ಎಸೆತದಲ್ಲೇ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಟ್ರಾವಿಸ್ ಹೆಡ್.
35 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 192 ರನ್ಗಳು.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಆಸ್ಟ್ರೇಲಿಯಾಗೆ 241 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
ಕುಲ್ದೀಪ್ ಯಾದವ್ ಎಸೆದ 34ನೇ ಓವರ್ನ ಮೊದಲೆರಡು ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಟ್ರಾವಿಸ್ ಹೆಡ್.
95 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ ಶತಕ ಪೂರೈಸಿದ ಟ್ರಾವಿಸ್ ಹೆಡ್.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
4ನೇ ವಿಕೆಟ್ಗೆ 125 ರನ್ಗಳ ಭರ್ಜರಿ ಜೊತೆಯಾಟವಾಡಿದ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್.
32 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 172 ರನ್ಗಳು.
ಆಸ್ಟ್ರೇಲಿಯಾ ತಂಡದ ಗೆಲುವಿಗೆ ಕೇವಲ 69 ರನ್ಗಳ ಅವಶ್ಯಕತೆ.
ಆಸ್ಟ್ರೇಲಿಯಾಗೆ 241 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
30 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 167 ರನ್ಗಳು.
ಕೇವಲ 3 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿರುವ ಟೀಮ್ ಇಂಡಿಯಾ ಬೌಲರ್ಗಳು,
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ (37) ಹಾಗೂ ಟ್ರಾವಿಸ್ ಹೆಡ್ (87) ಬ್ಯಾಟಿಂಗ್.
ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ ಹಾಗೂ ಸ್ಟೀವ್ ಸ್ಮಿತ್ ಔಟ್.
ಜಸ್ಪ್ರೀತ್ ಬುಮ್ರಾ ಎಸೆದ 28ನೇ ಓವರ್ನ ಮೊದಲ ಎಸೆತದಲ್ಲೇ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಟ್ರಾವಿಸ್ ಹೆಡ್.
3ನೇ ಎಸೆತದಲ್ಲಿ ಹೆಡ್ ಬ್ಯಾಟ್ನಿಂದ ಸ್ಟ್ರೈಟ್ ಡ್ರೈವ್ ಬೌಂಡರಿ.
ಕೊನೆಯ ಎಸೆತದಲ್ಲಿ ಲೆಗ್ ಸೈಡ್ನತ್ತ ಮತ್ತೊಂದು ಫೋರ್.
ಜಸ್ಪ್ರೀತ್ ಬುಮ್ರಾ ಓವರ್ನಲ್ಲಿ 14 ರನ್ ಕಲೆಹಾಕಿದ ಟ್ರಾವಿಸ್-ಮಾರ್ನಸ್.
120 ಎಸೆತಗಳಲ್ಲಿ 101 ರನ್ಗಳ ಭರ್ಜರಿ ಜೊತೆಯಾಟ ಪ್ರದರ್ಶಿಸಿದ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್.
4ನೇ ವಿಕೆಟ್ಗೆ ಶತಕದ ಜೊತೆಯಾಟದೊಂದಿಗೆ ಆಸ್ಟ್ರೇಲಿಯಾ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದ ಹೆಡ್-ಮಾರ್ನಸ್.
ಆಸ್ಟ್ರೇಲಿಯಾ ತಂಡದ ಗೆಲುವಿಗೆ ಕೇವಲ 93 ರನ್ಗಳ ಅವಶ್ಯಕತೆ.
ಮೊಹಮ್ಮದ್ ಶಮಿ ಎಸೆದ 26ನೇ ಓವರ್ನ ಮೊದಲ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ ಫೋರ್ ಬಾರಿಸಿದ ಮಾರ್ನಸ್ ಲಾಬುಶೇನ್.
ಕೊನೆಯ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಸಿಡಿಸಿದ ಟ್ರಾವಿಸ್ ಹೆಡ್.
ಆಸ್ಟ್ರೇಲಿಯಾ ಗೆಲುವಿಗೆ 24 ಓವರ್ಗಳಲ್ಲಿ ಕೇವಲ 97 ರನ್ಗಳ ಅವಶ್ಯಕತೆ.
ರವೀಂದ್ರ ಜಡೇಜಾ ಎಸೆದ 25ನೇ ಓವರ್ನ ಮೊದಲ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಟ್ರಾವಿಸ್ ಹೆಡ್.
25 ಓವರ್ಗಳ ಮುಕ್ತಾಯದ ವೇಳೆಗೆ 135 ರನ್ ಕಲೆಹಾಕಿದ ಆಸ್ಟ್ರೇಲಿಯಾ.
ಕೇವಲ 3 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿರುವ ಟೀಮ್ ಇಂಡಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ (31) ಹಾಗೂ ಟ್ರಾವಿಸ್ ಹೆಡ್ (65) ಬ್ಯಾಟಿಂಗ್.
ಮೊಹಮ್ಮದ್ ಶಮಿ ಎಸೆದ 24ನೇ ಓವರ್ನ ಮೊದಲ ಎಸೆತದಲ್ಲೇ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಟ್ರಾವಿಸ್ ಹೆಡ್.
4ನೇ ವಿಕೆಟ್ಗೆ 80 ರನ್ಗಳ ಜೊತೆಯಾಟದೊಂದಿಗೆ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಹೆಡ್-ಮಾರ್ನಸ್.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
58 ಎಸೆತಗಳಲ್ಲಿ 6 ಫೋರ್ ಹಾಗೂ 1 ಸಿಕ್ಸ್ನೊಂದಿಗೆ ಅರ್ಧಶತಕ ಪೂರೈಸಿದ ಟ್ರಾವಿಸ್ ಹೆಡ್.
22 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 117 ರನ್ಗಳು.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಆಸ್ಟ್ರೇಲಿಯಾಗೆ 241 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
20 ಓವರ್ಗಳಲ್ಲಿ ಶತಕ ಪೂರೈಸಿದ ಆಸ್ಟ್ರೇಲಿಯಾ ತಂಡ.
ಕೇವಲ 3 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿರುವ ಟೀಮ್ ಇಂಡಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ (17) ಹಾಗೂ ಟ್ರಾವಿಸ್ ಹೆಡ್ (44) ಬ್ಯಾಟಿಂಗ್.
30 ಓವರ್ಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ 137 ರನ್ ಗಳ ಅವಶ್ಯಕತೆ.
70 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟವಾಡಿದ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್.
19 ಓವರ್ಗಳಲ್ಲಿ 99 ರನ್ ಕಲೆಹಾಕಿದ ಆಸ್ಟ್ರೇಲಿಯಾ.
ವಿಕೆಟ್ ಪಡೆಯಲು ಟೀಮ್ ಇಂಡಿಯಾ ಬೌಲರ್ಗಳ ಹರಸಾಹಸ.
ಆಸ್ಟ್ರೇಲಿಯಾಗೆ 241 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
ಮೊಹಮ್ಮದ್ ಸಿರಾಜ್ ಎಸೆದ 17ನೇ ಓವರ್ನ 4ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕವಾಗಿ ಫೋರ್ ಬಾರಿಸಿದ ಎಡಗೈ ದಾಂಡಿಗ ಟ್ರಾವಿಸ್ ಹೆಡ್.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಆಸ್ಟ್ರೇಲಿಯಾಗೆ 241 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
ಕುಲ್ದೀಪ್ ಯಾದವ್ ಎಸೆದ 16ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಟ್ರಾವಿಸ್ ಹೆಡ್.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಔಟಾದ ಬ್ಯಾಟರ್ಗಳು: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ ಹಾಗೂ ಸ್ಟೀವ್ ಸ್ಮಿತ್.
15 ಓವರ್ಗಳ ಮುಕ್ತಾಯದ ವೇಳೆಗೆ 78 ರನ್ ಕಲೆಹಾಕಿರುವ ಆಸ್ಟ್ರೇಲಿಯಾ ಬ್ಯಾಟರ್ಗಳು.
3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಟೀಮ್ ಇಂಡಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಆಸ್ಟ್ರೇಲಿಯಾಗೆ 241 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
12 ಓವರ್ಗಳಲ್ಲಿ ಕೇವಲ 68 ರನ್ ನೀಡಿ 3 ವಿಕೆಟ್ ಕಬಳಿಸಿರುವ ಟೀಮ್ ಇಂಡಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಬಲಗೈ ಬ್ಯಾಟರ್ ಮಾರ್ನಸ್ ಲಾಬುಶೇನ್ ಹಾಗೂ ಎಡಗೈ ದಾಂಡಿಗ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಆಸ್ಟ್ರೇಲಿಯಾಗೆ 241 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
ಮೊಹಮ್ಮದ್ ಶಮಿ ಎಸೆದ 10ನೇ ಓವರ್ನ 3ನೇ ಮತ್ತು 4ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಟ್ರಾವಿಸ್ ಹೆಡ್.
10 ಓವರ್ಗಳ ಮುಕ್ತಾಯದ ವೇಳೆಗೆ 60 ರನ್ ಕಲೆಹಾಕಿದ ಆಸ್ಟ್ರೇಲಿಯಾ.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಔಟಾದ ಬ್ಯಾಟರ್ಗಳು: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ ಹಾಗೂ ಸ್ಟೀವ್ ಸ್ಮಿತ್.
ಜಸ್ಪ್ರೀತ್ ಬುಮ್ರಾ ಎಸೆದ 5ನೇ ಎಸೆತವನ್ನು ಹಿಡಿಯುವಲ್ಲಿ ವಿಫಲರಾದ ವಿಕೆಟ್ ಕೀಪರ್ ಕೆಎಲ್ ರಾಹುಲ್…ಚೆಂಡು ಬೌಂಡರಿ ಲೈನ್ ದಾಟಿ ಫೋರ್.
ಈ ಫೋರ್ನೊಂದಿಗೆ ಅರ್ಧಶತಕ ಪೂರೈಸಿದ ಆಸ್ಟ್ರೇಲಿಯಾ ತಂಡ.
ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಜಸ್ಪ್ರೀತ್ ಬುಮ್ರಾ ಎಸೆದ 7ನೇ ಓವರ್ನ 4ನೇ ಎಸೆತದಲ್ಲಿ ಆಕರ್ಷಕ ಸ್ಟ್ರೈಡ್ ಡ್ರೈವ್ ಫೋರ್ ಬಾರಿಸಿದ ಸ್ಟೀವ್ ಸ್ಮಿತ್.
ಕೊನೆಯ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ನಿರ್ಗಮಿಸಿದ ಸ್ಟೀವ್ ಸ್ಮಿತ್ (4).
ಟೀಮ್ ಇಂಡಿಯಾಗೆ ಮೂರನೇ ಯಶಸ್ಸು ತಂದುಕೊಟ್ಟ ಜಸ್ಪ್ರೀತ್ ಬುಮ್ರಾ.
6 ಓವರ್ಗಳ ಮುಕ್ತಾಯದ ವೇಳೆಗೆ ಕೇವಲ 42 ರನ್ ನೀಡಿದ ಟೀಮ್ ಇಂಡಿಯಾ ಬೌಲರ್ಗಳು.
ಡೇವಿಡ್ ವಾರ್ನರ್ (7) ಹಾಗೂ ಮಿಚೆಲ್ ಮಾರ್ಷ್ (15) ಔಟ್.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಆಸ್ಟ್ರೇಲಿಯಾಗೆ 241 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
ಜಸ್ಪ್ರೀತ್ ಬುಮ್ರಾ ಎಸೆದ 5ನೇ ಓವರ್ನ 3ನೇ ಎಸೆತದಲ್ಲಿ ವಿಕೆಟ್ ಕೀಪರ್ ಕೆಎಲ್ ರಾಹುಲ್ಗೆ ಕ್ಯಾಚ್ ನೀಡಿದ ಮಿಚೆಲ್ ಮಾರ್ಷ್.
15 ಎಸೆತಗಳಲ್ಲಿ 15 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಮಿಚೆಲ್ ಮಾರ್ಷ್.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಮೊಹಮ್ಮದ್ ಶಮಿ ಎಸೆದ 4ನೇ ಓವರ್ನ ಮೂರನೇ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಮಿಚೆಲ್ ಮಾರ್ಷ್.
ಕ್ರೀಸ್ನಲ್ಲಿ ಮಿಚೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಉತ್ತಮ ಬ್ಯಾಟಿಂಗ್.
ಡೇವಿಡ್ ವಾರ್ನರ್ (7) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಮೊಹಮ್ಮದ್ ಶಮಿ.
3ನೇ ಓವರ್ನಲ್ಲಿ ಕೇವಲ 1 ರನ್ ನೀಡಿದ ಜಸ್ಪ್ರೀತ್ ಬುಮ್ರಾ.
3 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ಸ್ಕೋರ್ 29 ರನ್ಗಳು.
ಕ್ರೀಸ್ನಲ್ಲಿ ಮಿಚೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಆಸ್ಟ್ರೇಲಿಯಾಗೆ 241 ರನ್ಗಳ ಗುರಿ ನೀಡಿರುವ ಟೀಮ್ ಇಂಡಿಯಾ.
ಮೊಹಮ್ಮದ್ ಶಮಿ ಎಸೆದ 2ನೇ ಓವರ್ನ 2ನೇ ಎಸೆತದಲ್ಲಿ ಸ್ಲಿಪ್ನಲ್ಲಿದ್ದ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ ಡೇವಿಡ್ ವಾರ್ನರ್.
3 ಎಸೆತಗಳಲ್ಲಿ 7 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ದಾಂಡಿಗ ವಾರ್ನರ್.
ಕ್ರೀಸ್ನಲ್ಲಿ ಮಿಚೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಜಸ್ಪ್ರೀತ್ ಬುಮ್ರಾ ಎಸೆದ ಮೊದಲ ಓವರ್ನ ಮೊದಲ ಎಸೆತದಲ್ಲೇ ಸ್ಲಿಪ್ ಮೂಲಕ ಫೋರ್ ಬಾರಿಸಿದ ಡೇವಿಡ್ ವಾರ್ನರ್. ಗೊಂದಲದಲ್ಲಿ ಕ್ಯಾಚ್ ಹಿಡಿಯುವ ಅವಕಾಶವನ್ನು ಕೈಚೆಲ್ಲಿಕೊಂಡ ವಿರಾಟ್ ಕೊಹ್ಲಿ-ಶುಭ್ಮನ್ ಗಿಲ್.
4ನೇ ಎಸೆತದಲ್ಲಿ ಮಿಡ್ ಆಫ್ನತ್ತ ಫೋರ್ ಬಾರಿಸಿದ ಟ್ರಾವಿಸ್ ಹೆಡ್.
6ನೇ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಟ್ರಾವಿಸ್ ಬ್ಯಾಟ್ನಿಂದ ಮತ್ತೊಂದು ಫೋರ್.
ಕ್ರೀಸ್ನಲ್ಲಿ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟಿಂಗ್.
ಜೋಶ್ ಹ್ಯಾಝಲ್‌ವುಡ್ ಎಸೆದ ಕೊನೆಯ ಓವರ್ನ 2ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಮೊಹಮ್ಮದ್ ಸಿರಾಜ್.
ಕೊನೆಯ ಎಸೆತದಲ್ಲಿ 2 ರನ್ ಓಡುವ ವೇಳೆ ರನೌಟ್ ಆದ ಕುಲ್ದೀಪ್ ಯಾದವ್.
50 ಓವರ್ಗಳಲ್ಲಿ 240 ರನ್ಗಳಿಸಿ ಆಲೌಟ್ ಆದ ಟೀಮ್ ಇಂಡಿಯಾ.
ಆಸ್ಟ್ರೇಲಿಯಾ ತಂಡಕ್ಕೆ 241 ರನ್ಗಳ ಗುರಿ ನೀಡಿದ ಭಾರತ.
49 ಓವರ್ಗಳಲ್ಲಿ 232 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕೊನೆಯ ಓವರ್ನಲ್ಲಿ ಕೊನೆಯ ವಿಕೆಟ್ನ ಜೊತೆಯಾಟ.
ಟೀಮ್ ಇಂಡಿಯಾವನ್ನು ಆಲೌಟ್ ಮಾಡುವ ವಿಶ್ವಾಸದಲ್ಲಿ ಆಸ್ಟ್ರೇಲಿಯಾ ತಂಡ.
ಕ್ರೀಸ್ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಬ್ಯಾಟಿಂಗ್.
ಜೋಶ್ ಹ್ಯಾಝಲ್‌ವುಡ್ ಎಸೆದ 48ನೇ ಓವರ್ನ 3ನೇ ಎಸೆತದಲ್ಲಿ ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ಗೆ ಸುಲಭ ಕ್ಯಾಚ್ ನೀಡಿದ ಸೂರ್ಯಕುಮಾರ್ ಯಾದವ್.
28 ಎಸೆತಗಳಲ್ಲಿ 18 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಸೂರ್ಯಕುಮಾರ್.
ಕ್ರೀಸ್ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಬ್ಯಾಟಿಂಗ್.
10 ಓವರ್ಗಳಲ್ಲಿ 55 ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿದ ಮಿಚೆಲ್ ಸ್ಟಾರ್ಕ್.
ಕೊನೆಯ 4 ಓವರ್‌ಗಳು ಬಾಕಿ. 24 ಎಸೆತಗಳಲ್ಲಿ ಸ್ಪರ್ಧಾತ್ಮಕ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಕುಲ್ದೀಪ್ ಯಾದವ್ ಬ್ಯಾಟಿಂಗ್.
ಆ್ಯಡಂ ಝಂಪಾ ಎಸೆದ 45ನೇ ಓವರ್ನ 5ನೇ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದ ಜಸ್ಪ್ರೀತ್ ಬುಮ್ರಾ (1).
45 ಓವರ್ಗಳ ಮುಕ್ತಾಯದ ವೇಳೆಗೆ 215 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಕುಲ್ದೀಪ್ ಯಾದವ್ ಬ್ಯಾಟಿಂಗ್.
43ನೇ ಓವರ್ನಲ್ಲಿ ಕೇವಲ 4 ರನ್ ನೀಡಿದ ಪ್ಯಾಟ್ ಕಮಿನ್ಸ್.
ಮಿಚೆಲ್ ಸ್ಟಾರ್ಕ್ ಎಸೆದ 44ನೇ ಓವರ್ನ 4ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಮೊಹಮ್ಮದ್ ಶಮಿ (6).
ಆಸ್ಟ್ರೇಲಿಯಾ ತಂಡಕ್ಕೆ 7ನೇ ಯಶಸ್ಸು.
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ಬ್ಯಾಟಿಂಗ್.
ಮಿಚೆಲ್ ಸ್ಟಾರ್ಕ್ ಎಸೆದ 42ನೇ ಓವರ್ನ 3ನೇ ಎಸೆತದಲ್ಲಿ ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ಗೆ ಕ್ಯಾಚ್ ನೀಡಿದ ಕೆಎಲ್ ರಾಹುಲ್.
107 ಎಸೆತಗಳಲ್ಲಿ 66 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಕೆಎಲ್ ರಾಹುಲ್.
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಮೊಹಮ್ಮದ್ ಶಮಿ ಬ್ಯಾಟಿಂಗ್.
41 ಓವರ್ಗಳ ಮುಕ್ತಾಯದ ವೇಳೆಗೆ 200 ರನ್ ಪೂರೈಸಿದ ಟೀಮ್ ಇಂಡಿಯಾ.
ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ರವೀಂದ್ರ ಜಡೇಜಾ ಔಟ್.
ಕೊನೆಯ 9 ಓವರ್ಗಳಲ್ಲಿ ಸ್ಪರ್ಧಾತ್ಮಕ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್.
40 ಓವರ್ಗಳ ಮುಕ್ತಾಯದ ವೇಳೆಗೆ ಭಾರತ ತಂಡದ ಸ್ಕೋರ್ 197 ರನ್ಗಳು.
5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಆಸ್ಟ್ರೇಲಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಕೆಎಲ್ ರಾಹುಲ್ (64) ಹಾಗೂ ಸೂರ್ಯಕುಮಾರ್ ಯಾದವ್ (8) ಬ್ಯಾಟಿಂಗ್.
ಔಟಾದ ಬ್ಯಾಟರ್ಗಳು:
ಆ್ಯಡಂ ಝಂಪಾ ಎಸೆದ 39ನೇ ಓವರ್ನ ಕೊನೆಯ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಸೂರ್ಯಕುಮಾರ್ ಯಾದವ್.
8 ಓವರ್ಗಳಲ್ಲಿ ಕೇವಲ 39 ರನ್ ನೀಡಿದ ಆ್ಯಡಂ ಝಂಪಾ.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್.
38 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 182 ರನ್ಗಳು.
ಟೀಮ್ ಇಂಡಿಯಾ ರನ್ ಗಳಿಕೆಯನ್ನು 4.79 ಸರಾಸರಿಗೆ ಇಳಿಸಿದ ಆಸ್ಟ್ರೇಲಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್.
ಕೊನೆಯ 12 ಓವರ್ಗಳಲ್ಲಿ ಸ್ಪರ್ಧಾತ್ಮಕ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ.
ಜೋಶ್ ಹ್ಯಾಝಲ್‌ವುಡ್ ಎಸೆದ 36ನೇ ಓವರ್ನ 5ನೇ ಎಸೆತದಲ್ಲಿ ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ಗೆ ಕ್ಯಾಚ್ ನೀಡಿದ ರವೀಂದ್ರ ಜಡೇಜಾ.
22 ಎಸೆತಗಳಲ್ಲಿ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ದಾಂಡಿಗ ರವೀಂದ್ರ ಜಡೇಜಾ.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್.
86 ಎಸೆತಗಳಲ್ಲಿ 1 ಫೋರ್ನೊಂದಿಗೆ ಅರ್ಧಶತಕ ಪೂರೈಸಿದ ಕೆಎಲ್ ರಾಹುಲ್.
35 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾದ ಸ್ಕೋರ್ 173 ರನ್ಗಳು.
ಕ್ರೀಸ್ನಲ್ಲಿ ಕೆಎಲ್ ರಾಹುಲ್ (50) ಹಾಗೂ ರವೀಂದ್ರ ಜಡೇಜಾ (9) ಬ್ಯಾಟಿಂಗ್.
ಔಟಾದ ಬ್ಯಾಟರ್ಗಳು:
80 ಎಸೆತಗಳಲ್ಲಿ 47 ರನ್ ಬಾರಿಸಿ ಅರ್ಧಶತಕದತ್ತ ಮುನ್ನಡೆಯುತ್ತಿರುವ ಕೆಎಲ್ ರಾಹುಲ್.
33 ಓವರ್ಗಳಲ್ಲಿ 165 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಆಸ್ಟ್ರೇಲಿಯಾ ವೇಗಿಗಳಿಂದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್.
30 ಓವರ್ಗಳ ಮುಕ್ತಾಯದ ವೇಳೆಗೆ 150 ರನ್ ಪೂರೈಸಿದ ಟೀಮ್ ಇಂಡಿಯಾ.
4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಆಸ್ಟ್ರೇಲಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್.
ಔಟಾದ ಬ್ಯಾಟರ್ಗಳು:
ಪ್ಯಾಟ್ ಕಮಿನ್ಸ್ ಎಸೆದ 29ನೇ ಓವರ್ನ 3ನೇ ಎಸೆತದಲ್ಲಿ ಬ್ಯಾಟ್ ಇನ್ಸೈಡ್ ಎಡ್ಜ್ ಆಗಿ ಬೌಲ್ಡ್ ಆದ ವಿರಾಟ್ ಕೊಹ್ಲಿ.
63 ಎಸೆತಗಳಲ್ಲಿ 54 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ವಿರಾಟ್ ಕೊಹ್ಲಿ.
ಆಸ್ಟ್ರೇಲಿಯಾ ತಂಡಕ್ಕೆ ಅತ್ಯಮೂಲ್ಯ ಯಶಸ್ಸು ತಂದುಕೊಟ್ಟ ನಾಯಕ ಪ್ಯಾಟ್ ಕಮಿನ್ಸ್.
ಗ್ಲೆನ್ ಮ್ಯಾಕ್ಸ್‌ವೆಲ್ ಎಸೆದ 27ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಕೆಎಲ್ ರಾಹುಲ್.
ಇದು 97 ಎಸೆತಗಳ ಬಳಿಕ ಟೀಮ್ ಇಂಡಿಯಾ ಕಡೆಯಿಂದ ಮೂಡಿಬಂದ ಮೊದಲ ಬೌಂಡರಿ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್.
56 ಎಸೆತಗಳಲ್ಲಿ 4 ಫೋರ್ಗಳೊಂದಿಗೆ ಅರ್ಧ ಶತಕ ಪೂರೈಸಿದ ವಿರಾಟ್ ಕೊಹ್ಲಿ
ಇದು ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿಯ 72ನೇ ಹಾಫ್ ಸೆಂಚುರಿ.
4ನೇ ವಿಕೆಟ್ಗೆ ಅರ್ಧ ಶತಕದ ಜೊತೆಯಾಟವಾಡಿದ ಕಿಂಗ್ ಕೊಹ್ಲಿ- ಕೆಎಲ್ ರಾಹುಲ್.
25 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾದ ಸ್ಕೋರ್ 131 ರನ್ಗಳು.
10.2 ಓವರ್ಗಳಲ್ಲಿ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಆಸ್ಟ್ರೇಲಿಯಾ ತಂಡ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ (49) ಹಾಗೂ ಕೆಎಲ್ ರಾಹುಲ್ (25) ಬ್ಯಾಟಿಂಗ್.
ಔಟಾದ ಬ್ಯಾಟರ್ಗಳು:
10 ಓವರ್ಗಳ ಮುಕ್ತಾಯದ ವೇಳೆಗೆ 8.0 ಇದ್ದ ರನ್ ಸರಾಸರಿಯನ್ನು 22ನೇ ಓವರ್ ವೇಳೆಗೆ 5.54 ಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿರುವ ಆಸ್ಟ್ರೇಲಿಯಾ ಬೌಲರ್ಗಳು.
22 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 121 ರನ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್.
20 ಓವರ್ಗಳಲ್ಲಿ 115 ರನ್ ಕಲೆಹಾಕಿರುವ ಟೀಮ್ ಇಂಡಿಯಾ ಬ್ಯಾಟರ್ಗಳು.
3 ವಿಕೆಟ್ ಕಬಳಿಸಿ ಉತ್ತಮ ದಾಳಿ ಸಂಘಟಿಸುತ್ತಿರುವ ಆಸ್ಟ್ರೇಲಿಯಾ ಬೌಲರ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ (39) ಹಾಗೂ ಕೆಎಲ್ ರಾಹುಲ್ (19) ಬ್ಯಾಟಿಂಗ್.
ಶುಭ್ಮನ್ ಗಿಲ್ (4), ರೋಹಿತ್ ಶರ್ಮಾ (47) ಹಾಗೂ ಶ್ರೇಯಸ್ ಅಯ್ಯರ್ (4) ಔಟ್.
ಟೀಮ್ ಇಂಡಿಯಾ ರನ್ ಸರಾಸರಿಯಲ್ಲಿ 6 ರನ್ಗಳೊಳಗೆ ತರುವಲ್ಲಿ ಯಶಸ್ವಿಯಾಗಿರುವ ಆಸ್ಟ್ರೇಲಿಯಾ ಬೌಲರ್ಗಳು.
19 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿರುವ ಟೀಮ್ ಇಂಡಿಯಾ.
ಕ್ರೀಸ್ ನಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್.
16 ಓವರ್ಗಳಲ್ಲಿ ಶತಕ ಪೂರೈಸಿದ ಟೀಮ್ ಇಂಡಿಯಾ.
ಪ್ತತಿ ಓವರ್ಗೆ 6.31 ಸರಾಸರಿಯಲ್ಲಿ ರನ್ ಪೇರಿಸುತ್ತಿರುವ ಭಾರತೀಯ ಬ್ಯಾಟರ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್.
ಕೊಹ್ಲಿ-ರಾಹುಲ್ ನಡುವೆ 4ನೇ ವಿಕೆಟ್ಗೆ 20 ರನ್ಗಳ ಜೊತೆಯಾಟ.
15 ಓವರ್ಗಳ ಮುಕ್ತಾಯದ ವೇಳೆಗೆ 97 ರನ್ ಕಲೆಹಾಕಿದ ಟೀಮ್ ಇಂಡಿಯಾ ಬ್ಯಾಟರ್ಗಳು.
3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಆಸ್ಟ್ರೇಲಿಯಾ ಬೌಲರ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ (32) ಹಾಗೂ ಕೆಎಲ್ ರಾಹುಲ್ (8) ಬ್ಯಾಟಿಂಗ್.
ಶುಭ್ಮನ್ ಗಿಲ್ (3), ರೋಹಿತ್ ಶರ್ಮಾ (47) ಹಾಗೂ ಶ್ರೇಯಸ್ ಅಯ್ಯರ್ (4) ಔಟ್.
2 ಓವರ್ಗಳನ್ನು ಬೌಲಿಂಗ್ ಮಾಡಿರುವ ಸ್ಪಿನ್ನರ್ ಆ್ಯಡಂ ಝಂಪಾ ಕೇವಲ 10 ರನ್ ಮಾತ್ರ ನೀಡಿದ್ದಾರೆ.
14 ಓವರ್ಗಳ ಮುಕ್ತಾಯದ ವೇಳೆಗೆ 94 ರನ್ ಕಲೆಹಾಕಿರುವ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಬಲಗೈ ಬ್ಯಾಟರ್ಗಳಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್.
ಪ್ಯಾಟ್ ಕಮಿನ್ಸ್ ಎಸೆದ 10ನೇ ಓವರ್ನ 2ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಶ್ರೇಯಸ್ ಅಯ್ಯರ್.
3 ಎಸೆತಗಳಲ್ಲಿ 4 ರನ್ ಬಾರಿಸಿ ನಿರ್ಗಮಿಸಿದ ಶ್ರೇಯಸ್ ಅಯ್ಯರ್.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್.
ಗ್ಲೆನ್ ಮ್ಯಾಕ್ಸ್‌ವೆಲ್ ಎಸೆದ 10ನೇ ಓವರ್ನ 4ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾದ ರೋಹಿತ್ ಶರ್ಮಾ. ಅದ್ಭುತ ರನ್ನಿಂಗ್ ಕ್ಯಾಚ್ ಹಿಡಿದ ಟ್ರಾವಿಸ್ ಹೆಡ್.
31 ಎಸೆತಗಳಲ್ಲಿ 47 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ರೋಹಿತ್ ಶರ್ಮಾ. ಆಸ್ಟ್ರೇಲಿಯಾ ತಂಡಕ್ಕೆ 2ನೇ ಯಶಸ್ಸು.
ಮಿಚೆಲ್ ಸ್ಟಾರ್ಕ್ ಎಸೆದ 7ನೇ ಓವರ್ನ ಮೊದಲ ಎಸೆತವನ್ನು ಡೀಪ್ ಮಿಡ್ ಆನ್ನತ್ತ ಫೋರ್ ಬಾರಿಸಿದ ವಿರಾಟ್ ಕೊಹ್ಲಿ.
2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಕೊಹ್ಲಿ ಬ್ಯಾಟ್ನಿಂದ ಆಕರ್ಷಕ ಫೋರ್.
3ನೇ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಮತ್ತೊಂದು ಬೌಂಡರಿ.
ಈ ಹ್ಯಾಟ್ರಿಕ್ ಫೋರ್ಗಳೊಂದಿಗೆ 6.3 ಓವರ್ಗಳಲ್ಲಿ ಅರ್ಧಶತಕ ಪೂರೈಸಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ಮಿಚೆಲ್ ಸ್ಟಾರ್ಕ್ ಎಸೆದ 5ನೇ ಓವರ್ನ 2ನೇ ಎಸೆತದಲ್ಲಿ ಮಿಡ್ ಆನ್ನಲ್ಲಿದ್ದ ಆ್ಯಡಂ ಝಂಪಾಗೆ ಕ್ಯಾಚ್ ನೀಡಿದ ಶುಭ್ಮನ್ ಗಿಲ್.
7 ಎಸೆತಗಳಲ್ಲಿ ಕೇವಲ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಶುಭ್ಮನ್ ಗಿಲ್. ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಯಶಸ್ಸು.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ಜೋಶ್ ಹ್ಯಾಝಲ್‌ವುಡ್ ಎಸೆದ 4ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ರೋಹಿತ್ ಶರ್ಮಾ.
ಕೊನೆಯ ಎಸೆತದಲ್ಲಿ ರೋಹಿತ್ ಬ್ಯಾಟ್ನಿಂದ ಲಾಂಗ್ ಆನ್ನತ್ತ ಆಕರ್ಷಕ ಫೋರ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಮಿಚೆಲ್ ಸ್ಟಾರ್ಕ್ ತಮ್ಮ 2ನೇ ಓವರ್ನಲ್ಲಿ ಕೇವಲ 5 ರನ್ ಮಾತ್ರ ನೀಡಿದ್ದಾರೆ.
ಕ್ರೀಸ್ ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾ.
ಜೋಶ್ ಹ್ಯಾಝಲ್‌ವುಡ್ ಎಸೆದ 2ನೇ ಓವರ್ನ 2ನೇ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಭರ್ಜರಿ ಬೌಂಡರಿ ಬಾರಿಸಿದ ರೋಹಿತ್ ಶರ್ಮಾ.
3ನೇ ಎಸೆತದಲ್ಲಿ ಹಿಟ್ಮ್ಯಾನ್ ಬ್ಯಾಟ್ನಿಂದ ಲೆಗ್ ಸೈಡ್ನತ್ತ ಮತ್ತೊಂದು ಫೋರ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಮೊದಲ ಓವರ್ ನಲ್ಲಿ ಕೇವಲ 3 ರನ್ ನೀಡಿದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್.
6 ಎಸೆತಗಳಲ್ಲಿ 3 ರನ್ ಕಲೆಹಾಕಿದ ಟೀಮ್ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿರುವ ಆಸ್ಟ್ರೇಲಿಯಾ.
ಟೀಮ್ ಇಂಡಿಯಾ ಇನಿಂಗ್ಸ್ ಆರಂಭ.
ಭಾರತ ತಂಡದ ಆರಂಭಿಕರು:- ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್.
ಆಸ್ಟ್ರೇಲಿಯಾ ಪರ ಮೊದಲ ಓವರ್: ಎಡಗೈ ವೇಗಿ ಮಿಚೆಲ್ ಸ್ಟಾರ್ಕ್.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆ್ಯಡಂ ಝಂಪಾ, ಜೋಶ್ ಹ್ಯಾಝಲ್‌ವುಡ್.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
These Two ☺️
Follow the match ▶️ https://t.co/uVJ2k8mWSt#TeamIndia | #CWC23 | #MenInBlue | #Final | #INDvAUS pic.twitter.com/lBqZiZFYp4
— BCCI (@BCCI) November 19, 2023
ಭಾರತಕ್ಕೆ ವಿಶ್ವಕಪ್ ಗೆದ್ದು ಕೊಡುವ ಹುಮ್ಮಸ್ಸಿನಲ್ಲಿದ್ದಾರೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.
ಏಕದಿನ ವಿಶ್ವಕಪ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಒಟ್ಟು 13 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 8 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದರೆ, 5 ಮ್ಯಾಚ್ಗಳಲ್ಲಿ ಭಾರತ ತಂಡ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಐಸಿಸಿ ಎಲ್ಲಾ ವಿಶ್ವಕಪ್ ವಿಜೇತ ತಂಡಗಳ ನಾಯಕರನ್ನು 2023 ರ ಫೈನಲ್ ವೀಕ್ಷಿಸಲು ಆಹ್ವಾನಿಸಿದೆ. ಇವರೆಲ್ಲರು ವಿಶ್ವಕಪ್‌ನ ಥೀಮ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಒಂದೇ ರೀತಿಯ ಬ್ಲೇಜರ್ ಅನ್ನು ಧರಿಸಿ ಪರೇಡ್ ನಡೆಸಲಿದ್ದಾರೆ.
ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗೆ ಆಸ್ಟ್ರೇಲಿಯಾ ತಂಡದ ಅಭಿಮಾನಿಗಳು ಕೂಡ ನರೇಂದ್ರ ಮೋದಿ ಸ್ಟೇಡಿಯಂಗೆ ಬಂದಿದ್ದಾರೆ.
Australian fans making their presence felt at #CWC23 🇦🇺#INDvAUS pic.twitter.com/1EnlVOkpgh
— ICC (@ICC) November 19, 2023
ಕೆಲ ಹೊತ್ತಿನಲ್ಲೇ ಭಾರತ, ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ಶುರುವಾಗಲಿದೆ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಭಾರತ ತಂಡಕ್ಕೆ ಶುಭಕೋರಿದ್ದಾರೆ. ನಿಮ್ಮ ಗೆಲುವಿಗಾಗಿ 140 ಕೋಟಿ ಭಾರತೀಯರು ಪ್ರಾರ್ಥಿಸುತ್ತಿದ್ದಾರೆ. ಫೈನಲ್ಸ್‌ನಲ್ಲಿ ಉತ್ತಮವಾಗಿ ಆಡಿ ಹಾಗೂ ಕ್ರೀಡಾ ಮನೋಭಾವ ಎತ್ತಿ ಹಿಡಿಯಿರಿ ಎಂದು ಹೇಳಿದ್ದಾರೆ.
All the best Team India!
140 crore Indians are cheering for you.
May you shine bright, play well and uphold the spirit of sportsmanship. https://t.co/NfQDT5ygxk
— Narendra Modi (@narendramodi) November 19, 2023
ಭಾರತೀಯ ವಾಯುಪಡೆಯ ಸೂರ್ಯಕಿರಣ್ ಅಕ್ರೋಬ್ಯಾಟಿಕ್ ತಂಡದಿಂದ 15 ನಿಮಿಷಗಳ ಏರ್ ಶೋ ಕಾರ್ಯಕ್ರಮ ಟಾಸ್ ಬಳಿಕ ಮಧ್ಯಾಹ್ನ 1:35ಕ್ಕೆ ಶುರುವಾಗಲಿದೆ. ತಂಡದ ಫ್ಲೈಟ್ ಕಮಾಂಡರ್ ಮತ್ತು ಡೆಪ್ಯುಟಿ ಟೀಮ್ ಲೀಡರ್ ವಿಂಗ್ ಕಮಾಂಡರ್ ಸಿದ್ದೇಶ್ ಕಾರ್ತಿಕ್ ನೇತೃತ್ವದಲ್ಲಿ ಈ ಏರ್ ಶೋ ನಡೆಯಲಿದೆ. ಸೂರ್ಯಕಿರಣ್ ಅಕ್ರೋಬ್ಯಾಟಿಕ್ ತಂಡವು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟು ನರೇಂದ್ರ ಮೋದಿ ಕ್ರೀಡಾಂಗಣದ ಮೇಲೆ ವರ್ಟಿಕಲ್ ಏರ್ ಶೋ ಆಯೋಜಿಸಲಾಗಿದೆ.
ವಿಶ್ವಕಪ್ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲ್ಲಲಿ ಎಂದು ಅನೇಕ ಕಡೆಗಳಲ್ಲಿ ಹೋಮಗಳು ನಡೆಯುತ್ತಿದೆ. ಇದರ ನಡುವೆ ಪುಣೆಯಲ್ಲಿ ಅಭಿಮಾನಿಗಳು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಪೋಸ್ಟರ್ಗೆ ಹಾಲಿನ ಅಭಿಷೇಕ ಮಾಡಿ ಶುಭಕೋರಿದ್ದಾರೆ.
Cricket fans in Pune offering milk to the posters of Rohit & Kohli. 🇮🇳🏆pic.twitter.com/IoUosB8yeT
— Johns. (@CricCrazyJohns) November 19, 2023
ಟೀಂ ಇಂಡಿಯಾ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇದುವರೆಗೆ 19 ಪಂದ್ಯಗಳನ್ನು ಆಡಿದೆ. ಇದರಲ್ಲಿ 11 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದ್ದರೆ, 8 ಪಂದ್ಯಗಳಲ್ಲಿ ಸೋಲಿನ ಶಾಕ್ ಎದುರಿಸಿದೆ. ಇನ್ನು ಈ ಮೈದಾನದಲ್ಲಿ ಭಾರತ ಮೂರು ಏಕದಿನ ವಿಶ್ವಕಪ್ ಪಂದ್ಯಗಳನ್ನು ಆಡಿದ್ದು, ಆಡಿರುವ ಅಷ್ಟೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಕೂಡ ಅಹಮದಾಬಾದ್‌ನಲ್ಲಿ ಇದುವರೆಗೆ ಆರು ಪಂದ್ಯಗಳನ್ನು ಆಡಿದೆ. ಇದರಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಆಸೀಸ್ ಎರಡು ಪಂದ್ಯಗಳಲ್ಲಿ ಮಾತ್ರ ಸೋಲನುಭವಿಸಿದೆ.
ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಇಲ್ಲಿರುವ ಕಪ್ಪು ಮಣ್ಣಿನ ಪಿಚ್‌ಗಳು ಉತ್ತಮ ಬೌನ್ಸ್‌ನೊಂದಿಗೆ ಬೌಲರ್‌ಗಳಿಗೆ ಯೋಗ್ಯವಾಗಿದೆ. ಬ್ಯಾಟರ್‌ಗಳಿಗೆ ಆರಂಭಿಕ ಓವರ್‌ಗಳು ಸವಾಲಾಗಿರಬಹುದು. ಆಟಗಾರರು ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವುದರಿಂದ, ಪಿಚ್ ಸ್ವಲ್ಪಮಟ್ಟಿಗೆ ಬ್ಯಾಟಿಂಗ್ ಸ್ವರ್ಗವಾಗಿ ಬದಲಾಗುತ್ತದೆ.
ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ ವೀಕ್ಷಿಸಲು ಅನೇಕ ಬಾಲಿವುಡ್ ತಾರೆಯರು ಆಗಮಿಸುತ್ತಿದ್ದಾರೆ. ಸದ್ಯ ರಣವೀರ್ ಸಿಂಗ್ ಹಾಗೂ ದೀಪಕಾ ಪಡುಕೋಣೆ ಸ್ಟೇಡಿಯಂ ಒಳಗೆ ಪ್ರವೇಶಿಸಿದ್ದಾರೆ.
#WATCH | Mumbai: Actors Ranveer Singh and Deepika Padukone leave for Ahmedabad to watch the ICC World Cup final match between India and Australia. pic.twitter.com/0HMRPsxr8V
— ANI (@ANI) November 19, 2023
ಟೀಮ್ ಇಂಡಿಯಾ ಬೆಂಬಲಿಗ ಹಾಗೂ ಸಚಿನ್ ತೆಂಡೂಲ್ಕರ್ ಅವರ ಕಟ್ಟಾ ಅಭಿಮಾನಿ ಸುಧೀರ್ ಕುಮಾರ್ ಚೌಧರಿ ಕೂಡ ಅಹಮದಾಬಾದ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ಆಗಮನಿಸಿದ್ದು. 2011ರಂತೆಯೇ ಈ ಬಾರಿಯೂ ಭಾರತ ತಂಡ ತವರಿನಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ.
ಟೀಮ್ ಇಂಡಿಯಾ ಆಟಗಾರರು ಹೋಟೆಲ್ನಿಂದ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ.
The craze for Indian team in Ahmedabad 🇮🇳🔥pic.twitter.com/3NZwE3YbdR
— Johns. (@CricCrazyJohns) November 19, 2023
ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗೆ ನರೇಂದ್ರ ಮೋದಿ ಸ್ಟೇಡಿಯಂ ಎದುರು 1 ಲಕ್ಷಕ್ಕೂ ಅಧಿಕ ಮಂದಿ ಬಂದಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ.
Cricket world reduces to Narendra Modi Stadium today. 🔥
– Crazy crazy atmosphere….!!!!pic.twitter.com/cBuZSMPkUi
— Johns. (@CricCrazyJohns) November 19, 2023
ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಆಡುವ ಬಳಗ ಹೇಗಿರಬಹುದು?.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ ನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ವಿಡಿಯೋ ಒಂದನ್ನು ಶೇರ್ ಮಾಡಿದ್ದಾರೆ. ಇದರಲ್ಲಿ ನರೇಂದ್ರ ಮೋದಿ ಕ್ರೀಡಾಂಗಣದ ಈಗ ಹೇಗಿದೆ ಎಂದು ತೋರಿಸಿದ್ದಾರೆ.
Best wishes Team India 🇮🇳#INDvsAUSfinal pic.twitter.com/g789vzV7ni
— Mohammad Kaif (@MohammadKaif) November 18, 2023
ಫೈನಲ್ ಪಂದ್ಯಕ್ಕಾಗಿ ಪ್ರೇಕ್ಷಕರು ತುಂಬಾ ಉತ್ಸುಕರಾಗಿದ್ದಾರೆ. ಪ್ರೇಕ್ಷಕರು ಕ್ರೀಡಾಂಗಣಕ್ಕೆ ಬರಲಾರಂಭಿಸಿದ್ದಾರೆ. ಇತ್ತ ಕೆಲವೇ ನಿಮಿಷಗಳಲ್ಲಿ ಭಾರತ ತಂಡ ಕೂಡ ನರೆಂದ್ರ ಮೋದಿ ಕ್ರೀಡಾಂಗಣಕ್ಕೆ ಆಗಮಿಸಲಿದೆ.
ಟೀಮ್ ಇಂಡಿಯಾಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಭಾರತದ ಕ್ರಿಕೆಟ್ ದಿಗ್ಗಜರು, ಟೀಮ್ ಇಂಡಿಯಾ ಆಟಗಾರರ ಕುಟುಂಬದವರು, ಬಾಲಿವುಡ್, ಸ್ಯಾಂಡಲ್ವುಡ್ ನಟ-ನಟಿಯರು ಭಾರತ ಗೆಲ್ಲಲಿ ಎಂದು ಶುಭಕೋರಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾ ಜಯಕ್ಕೆ ಹೋಮ-ಹವನಗಳು ನಡೆಯುತ್ತಿದೆ.
ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯಕ್ಕೆ ಇನ್ನೇನು ಕೆಲವೇ ಸಮಯ ಬಾಕಿಯಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವ ಭಾರತ ಹಾಗೂ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ಮುಖಾಮುಖಿ ಆಗಲಿವೆ.
Published On - 12:00 pm, Sun, 19 November 23