ವಿಶ್ವಕಪ್ ಫೈನಲ್​ ಪಂದ್ಯಕ್ಕೆ ಕ್ಷಣಗಣನೆ: ಭಾರತ ತಂಡವನ್ನು ಹುರಿದುಂಬಿಸಿದ ಸದ್ಗುರು

India vs Australia Final: ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್​ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯ ನಡೆಯಲಿದೆ ಈಶ ಫೌಂಡೇಶನ್ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್​ ಅವರು ಸಂದೇಶ ನೀಡುವ ಮೂಲಕ ಭಾರತ ತಂಡವನ್ನು ಹುರಿದುಂಬಿಸಿದ್ದಾರೆ. 

Follow us
|

Updated on:Nov 18, 2023 | 7:26 PM

ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್ (World Cup Finals) ​ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯ ನಡೆಯಲಿದೆ. ಕಾಂಗರೂ ಪಡೆಯನ್ನು ಕಟ್ಟಿಹಾಕುವುದಕ್ಕೆ ಅಭೇದ್ಯ ಭಾರತ ಸಜ್ಜಾಗಿದೆ. ಈ ಸಲ ಕಪ್ ನಮ್ದೇ ಅಂತಿರುವ ಟೀಮ್ ಇಂಡಿಯಾ ನಾಳೆಯ ಪಂದ್ಯಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಕ್ರಿಕೆಟ್​ ದಿಗ್ಗಜರು ಈಗಾಗಲೇ ಭಾರತ ತಂಡಕ್ಕೆ ಶುಭಕೋರಿದ್ದಾರೆ. ಅದೇ ರೀತಿಯಾಗಿ ಈಶ ಫೌಂಡೇಶನ್ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್​ ಅವರು ಸಂದೇಶ ನೀಡುವ ಮೂಲಕ ಭಾರತ ತಂಡವನ್ನು ಹುರಿದುಂಬಿಸಿದ್ದಾರೆ.

ಈ ಕುರಿತಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ಸದ್ಗುರು, ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಹತ್ತಕ್ಕೆ ಹತ್ತು ಪಂದ್ಯಗಳನ್ನು ಗೆಲ್ಲುವ ಮೂಲಕ ನಮ್ಮ ತಂಡವು ಆಟವನ್ನು ಸಂಪೂರ್ಣವಾಗಿ ಹೊಸ ದಿಕ್ಕಿನೆಡೆಗೆ ಕೊಂಡೊಯ್ದಿದೆ. ನಾಯಕತ್ವ ಮತ್ತು ವೈಯಕ್ತಿಕ ಆಟಗಾರರ ಅದ್ಭುತ ಪ್ರದರ್ಶನ, ದಾಖಲೆಗಳು , ಈ ಅಸಾಧಾರಣ ತಂಡವು ಫೈನಲ್​​ವರೆಗೂ ತಂದು ನಿಲ್ಲಿಸಿದೆ ಎಂದು ಹೇಳಿದ್ದಾರೆ.

ಸದ್ಗುರು ಭಾರತ ತಂಡಕ್ಕೆ ನೀಡಿದ ಸಲಹೆ ಏನು?

ತಂಡಕ್ಕೆ ತಮ್ಮ ಸಲಹೆಯನ್ನು ನೀಡಿರುವ ಸದ್ಗುರು, ‘ಮುಖ್ಯವಾದ ವಿಷಯವೆಂದರೆ, ನಾವು ಎಂದಿಗೂ ವಿರೋಧವನ್ನು ಲಘುವಾಗಿ ಪರಿಗಣಿಸುವುದಿಲ್ಲ ಅಥವಾ ಅವರು ಯಾರೆಂಬುದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಆಟವನ್ನು ಪೂರ್ಣವಾಗಿ ಆಡುವುದು ಹೇಗೆ ಎಂಬುದು ನಮ್ಮ ಕಾಳಜಿ, ಮತ್ತು ನಮ್ಮ ಹುಡುಗರು ಅದನ್ನೇ ಮಾಡುತ್ತಾರೆ, ಇಡೀ ದೇಶಕ್ಕೆ ಹೆಮ್ಮೆ ಮತ್ತು ಸಂತೋಷವನ್ನು ತರುತ್ತಾರೆ ಎಂದು ನನಗೆ ವಿಶ್ವಾಸವಿದೆ’ ಎಂದಿದ್ದಾರೆ.

ಇದನ್ನೂ ಓದಿ: ‘ಕಪ್ ಗೆಲ್ಲಲು ಪ್ರಯತ್ನಿಸಬೇಡಿ, ಚೆಂಡನ್ನು ಹೊಡೆಯಿರಿ’: ಭಾರತ ತಂಡಕ್ಕೆ ಸದ್ಗುರು ಸಲಹೆ

‘ಫೈನಲ್​​ ಪಂದ್ಯದಲ್ಲಿ ಗೆಲ್ಲುವ ಮೂಲಕ 1.4 ಶತಕೋಟಿಗೂ ಹೆಚ್ಚು ಜನರನ್ನು ನೀವು ಸಂತೋಷ ಪಡಿಸಬಹುದು. ಅದನ್ನು ಮರೆಯಬೇಡಿ, ಆದರೆ ಅದನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಳ್ಳಬೇಡಿ. ನಿಮ್ಮ ಆಟವನ್ನು ನೀವು ಆಡಿ, ವಿಕೆಟ್‌ಗಳನ್ನು ಉರುಳಿಸಿ ಅಷ್ಟೇ. ಉಳಿದದ್ದು ಸಂಭವಿಸುತ್ತದೆ. ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು ಮತ್ತು ಆಶೀರ್ವಾದಗಳು’ ಎಂದು ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್​ ಪಂದ್ಯವನ್ನು ಸದ್ಗುರು ಕೂಡ ವೀಕ್ಷಣೆ ಮಾಡಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ 2003ರ ಸೇಡು ತೀರಿಸಿಕೊಳ್ಳಲು ಭಾರತ ಸರ್ವಸನ್ನದ್ಧವಾಗಿದೆ. ಈ ಮೂಲಕ 12 ವರ್ಷಗಳ ಬಳಿಕ ತವರಿನಲ್ಲಿ ವಿಶ್ವಕಪ್ ಗೆಲ್ಲೋದಕ್ಕೆ ಭಾರತ ತಂಡ ಪಣತೊಟ್ಟಿದೆ. ಈ ಸಲ ಕಪ್ ನಮ್ದೇ ಅನ್ನುವ ಕೂಗು ಹಳ್ಳಿಯಿಂದ ದಿಲ್ಲಿವರೆಗೂ ಸದ್ದುಮಾಡುತ್ತಿದೆ. ಭಾರತದ ಗೆಲುವಿಗೆ ಅಭಿಮಾನಿಗಳು ದೇಗುಲಗಳಲ್ಲಿ ಪೂಜೆ, ಹವನ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:23 pm, Sat, 18 November 23

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್