IND vs AUS 1st Test: ಇಂದಿನಿಂದ ಬಹುನಿರೀಕ್ಷಿತ ಭಾರತ-ಆಸ್ಟ್ರೇಲಿಯಾ ಮೊದಲ ಟೆಸ್ಟ್: ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ

India vs Australia 1st Test: ಇಂದಿನಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಈಗಾಗಲೇ ಉಭಯ ತಂಡಗಳು ಭರ್ಜರಿ ಸಿದ್ಧತೆ ನಡೆಸಿದ್ದು ಕಣಕ್ಕಿಳಿಯಲು ಸಜ್ಜಾಗಿ ನಿಂತಿದೆ.

IND vs AUS 1st Test: ಇಂದಿನಿಂದ ಬಹುನಿರೀಕ್ಷಿತ ಭಾರತ-ಆಸ್ಟ್ರೇಲಿಯಾ ಮೊದಲ ಟೆಸ್ಟ್: ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ
IND vs AUS 1st Test
Follow us
Vinay Bhat
|

Updated on:Feb 09, 2023 | 7:01 AM

ಬಹಳಷ್ಟು ರೋಚಕತೆ ಸೃಷ್ಟಿಸಿರುವ ಬಾರ್ಡರ್-ಗವವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಟೆಸ್ಟ್ ಸರಣಿಗೆ ಇಂದು ಚಾಲನೆ ಸಿಗಲಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಈಗಾಗಲೇ ಉಭಯ ತಂಡಗಳು ಭರ್ಜರಿ ಸಿದ್ಧತೆ ನಡೆಸಿದ್ದು ಕಣಕ್ಕಿಳಿಯಲು ಸಜ್ಜಾಗಿ ನಿಂತಿದೆ. ಈ ಸರಣಿಯ ಟೆಸ್ಟ್ ಪಂದ್ಯಗಳು ಟೀಮ್ ಇಂಡಿಯಾ (Team India) ಪಾಲಿಗೆ ತುಂಬಾ ಮಹತ್ವದ್ದಾಗಿದ್ದು, ಸರಣಿ ಜಯಿಸಿದರೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಬಹುದು. ಇತ್ತ ಕಾಂಗರೂ ಪಡೆ ಭಾರತದಲ್ಲಿ 2004 ರಿಂದ ಒಂದುಬಾರಿಯೂ ಬಾರ್ಡರ್-ಗವಾಸ್ಕರ್ ಟ್ರೋಫಿ (Border-Gavaskar Trophy) ಜಯಿಸಿಲ್ಲ. ಹೀಗಾಗಿ ಎರಡೂ ತಂಡಕ್ಕೆ ಈ ಟೆಸ್ಟ್ ಮುಖ್ಯ ಆಗಿರುವುದರಿಂದ ರೋಚಕತೆ ಸೃಷ್ಟಿಸಿದೆ.

ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದೇ ಕುತೂಹಲ. ಓಪನರ್ ಜಾಗಕ್ಕೆ ನಾಯಕ ರೋಹಿತ್ ಶರ್ಮಾ ಫಿಕ್ಸ್ ಆಗಿದ್ದರೆ ಮತ್ತೊಬ್ಬರು ಯಾರೆಂಬ ಗೊಂದಲ ಮೂಡಿದೆ. ಕೆಎಲ್ ರಾಹುಲ್ ಹಾಗೂ ಶುಭ್​ಮನ್ ಗಿಲ್ ಎಂಬ ಎರಡು ಅಯ್ಕೆ ಇದೆ. ಇವರಲ್ಲಿ ಯಾರಿಗೆ ಅವಕಾಶ ನೋಡಬೇಕಿದೆ. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯಕುಮಾರ್ ಯಾದವ್ ಇದೇ ಮೊದಲ ಬಾರಿಗೆ ಆಯ್ಕೆ ಆಗಿದ್ದು ಪದಾರ್ಪಣೆ ಮಾಡುವ ನಿರೀಕ್ಷೆ ಕೂಡ ಇದೆ. ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ಮಧ್ಯಮ ಕ್ರಮಾಂಕದ ಅಸ್ತ್ರವಾಗಿದ್ದಾರೆ.

ವಿಕೆಟ್ ಕೀಪರ್ ಜವಾಬ್ದಾರಿ ಕೆಎಸ್ ಭರತ್​ಗೆ ನೀಡಿದರೆ ಮತ್ತೊಬ್ಬ ಪ್ಲೇಯರ್ ಕೂಡ ಪದಾರ್ಪಣೆ ಮಾಡಿದಂತೆ ಆಗುತ್ತದೆ. ರವೀಂದ್ರ ಜಡೇಜಾ ಸಂಪೂರ್ಣ ಫಿಟ್ ಆಗಿದ್ದು ಇವರ ಕೊಡುಗೆ ಮಹತ್ವದ ಪಾತ್ರವಹಿಸಲಿದೆ. ರವಿಚಂದ್ರನ್ ಅಶ್ವಿನ್ ಕೂಡ ಜಡೇಜಾ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಮೂವರು ಸ್ಪಿನ್ನರ್​ಗಳು ಆಡಲಿದ್ದಾರೆ ಎಂದು ಹೇಳಲಾಗಿದ್ದು, ಹೀಗಾದಲ್ಲಿ ಅಕ್ಷರ್ ಪಟೇಲ್ ಅಥವಾ ಕುಲ್ದೀಪ್ ಯಾದವ್ ಪೈಕಿ ಒಬ್ಬರಿಗೆ ಸ್ಥಾನ ಸಿಗಲಿದೆ. ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಇದ್ದಾರೆ.

ಇದನ್ನೂ ಓದಿ
Image
India vs Australia 1st Test: ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆಯಲು 4 ಆಟಗಾರರ ನಡುವೆ ಪೈಪೋಟಿ
Image
India vs Australia: ಭಾರತ-ಆಸ್ಟ್ರೇಲಿಯಾ ಟೆಸ್ಟ್​ ಸರಣಿಯ ವೇಳಾಪಟ್ಟಿ ಮತ್ತು ತಂಡಗಳು ಹೀಗಿವೆ
Image
India vs Australia: ಮೊದಲ ಟೆಸ್ಟ್​ನಲ್ಲೇ ನಿರ್ಮಾಣವಾಗುತ್ತಾ 5 ವಿಶ್ವ ದಾಖಲೆಗಳು?
Image
Mayank Agarwal: ಸೆಮಿಫೈನಲ್​ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಮಯಾಂಕ್ ಅಗರ್ವಾಲ್

ICC T20 Rankings: ಐಸಿಸಿ ನೂತನ ಟಿ20 ರ‍್ಯಾಂಕಿಂಗ್​ನಲ್ಲಿ ದಾಖಲೆಯ ಜಿಗಿತ ಕಂಡ ಶುಭ್​ಮನ್ ಗಿಲ್

ಇತ್ತ ಆಸ್ಟ್ರೇಲಿಯಾ ತಂಡ ಕೂಡ ಭಾರತದಂತೆ ಬಲಿಷ್ಠವಾಗಿದೆ. ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಓಪನರ್​ಗಳಾದರೆ ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್ ಮಧ್ಯಮ ಕ್ರಮಾಂಕದಲ್ಲಿದ್ದಾರೆ. ಪೀಟರ್ ಹ್ಯಾಂಡ್ಸ್​ಕಾಂಬ್ ಮತ್ತು ಮ್ಯಾಟ್ ರೆನ್ಶಾ ಪೈಕಿ ಯಾರಿಗೆ ಸ್ಥಾನ ನೋಡಬೇಕಿದೆ. ಅಲೆಕ್ಸ್ ಕ್ಯಾರಿ ವಿಕೆಟ್ ಕೀಪರ್ ಜವಾಬ್ದಾರಿ ವಹಿಸಲಿದ್ದಾರೆ. ಹೀಗೆ ಆಸೀಸ್ ಬ್ಯಾಟಿಂಗ್ ಕ್ರಮಾಂಕ ದೊಡ್ಡದಿದೆ. ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲರು. ಆಸ್ಟನ್ ಅಗರ್, ಸ್ಕಾಟ್ ಬೊಲಂಡ್ ಹಾಗೂ ನೇಥನ್ ಲ್ಯಾನ್ ಬೌಲರ್​ಗಳಾಗಿದ್ದಾರೆ.

ಭಾರತ- ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯವು ಇಂದು ಬೆಳಗ್ಗೆ 09:30 ಕ್ಕೆ ಆರಂಭವಾಗಲಿದೆ. ಒಂಬತ್ತು ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರಲಿದೆ. ಮೊದಲ ಪಂದ್ಯದ ಮೊದಲ ದಿನದ ಆಟ ವೀಕ್ಷಿಸಲು ಅಂದಾಜು 40 ಸಾವಿರ ಕ್ರಿಕೆಟ್ ಅಭಿಮಾನಿಗಳು ಟಿಕೆಟ್​ ಖರೀದಿಸಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:01 am, Thu, 9 February 23

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ