ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಯಾವಾಗ ಆರಂಭ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?

IND vs AUS T20I series Squads, Schedule, Live Streaming: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಮುಕ್ತಾಯಗೊಂಡಿದೆ. ಆಸ್ಟ್ರೇಲಿಯಾ ಚಾಂಪಿಯನ್ ಆಗಿದೆ. ಇದರ ಬೆನ್ನಲ್ಲೇ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಆಯೋಜಿಸಲಾಗಿದೆ. ಹಾಗಾದರೆ ಈ ಪಂದ್ಯ ಎಲ್ಲಿ ನಡೆಯಲಿದೆ?, ಎಷ್ಟು ಗಂಟೆಗೆ ಆರಂಭವಾಗುತ್ತದೆ?, ಯಾವುದರಲ್ಲಿ ನೇರಪ್ರಸಾರ ಕಾಣಲಿದೆ ಎಂಬುದನ್ನು ನೋಡೋಣ.

ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಯಾವಾಗ ಆರಂಭ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?
IND vs AUS T20I 1st T20I
Follow us
|

Updated on: Nov 21, 2023 | 7:49 AM

ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್‌ನಲ್ಲಿ (World Cup Final) ಆಸ್ಟ್ರೇಲಿಯಾ ವಿರುದ್ಧದ ಹೃದಯವಿದ್ರಾವಕ ಸೋಲಿನ ನಂತರ ಟೀಮ್ ಇಂಡಿಯಾ ಆಘಾತಕ್ಕೆ ಒಳಗಾಗಿದೆ. ಆದರೆ, ಇದರ ನಡುವೆಯೇ ನವೆಂಬರ್ 23 ರಂದು ವೈಜಾಗ್‌ನಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ತಯಾರಾಗಬೇಕಿದೆ. ಬಿಸಿಸಿಐ ಸೋಮವಾರ 15 ಸದಸ್ಯರ ಭಾರತ ತಂಡವನ್ನು ಕೂಡ ಪ್ರಕಟ ಮಾಡಿದ್ದು, ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಇದು ಎರಡು ಯುವ ತಂಡಗಳ ನಡುವಿನ ಸರಣಿಯಾಗಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಸ್ಟಾರ್ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ.

ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಎಲ್ಲಿ ನಡೆಯಲಿದೆ?, ಎಷ್ಟು ಗಂಟೆಗೆ ಆರಂಭವಾಗುತ್ತದೆ?, ಯಾವುದರಲ್ಲಿ ನೇರಪ್ರಸಾರ ಕಾಣಲಿದೆ ಎಂಬುದನ್ನು ನೋಡೋಣ:

ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಯಾವಾಗ ಪ್ರಾರಂಭವಾಗುತ್ತದೆ?

ನವೆಂಬರ್ 23 ರಂದು ಭಾರತ vs ಆಸ್ಟ್ರೇಲಿಯಾ ಟಿ20 ಸರಣಿ ಆರಂಭವಾಗಲಿದೆ.

ಇದನ್ನೂ ಓದಿ
Image
IND vs AUS T20I Series: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಿರಿಯರಿಗೆ ರೆಸ್ಟ್, ಹೊಸ ಮುಖಗಳಿಗೆ ಮಣೆ
Image
ದುರಂಹಕಾರದಿಂದ ವಿಶ್ವಕಪ್ ಮೇಲೆ ಕಾಲಿಟ್ಟು ಕೂತ ಆಸ್ಟ್ರೇಲಿಯದ ಮಿಚೆಲ್ ಮಾರ್ಷ್ ನೆಟ್ಟಿಗರಿಂದ ಉಗಿಸಿಕೊಂಡ!
Image
Fact Check: ವಿಶ್ವಕಪ್ ಪ್ರೆಸೆಂಟೇಷನ್ ಸಮಾರಂಭದಲ್ಲಿ ಪ್ಯಾಟ್ ಕಮಿನ್ಸ್‌ ಕೈಕುಲುಕದೇ ಹೋದರೆ ಮೋದಿ?
Image
ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್‌ ಗೆದ್ದಿದೆ: ಕಾಂಗ್ರೆಸ್​ ಬೆಂಬಲಿಗ

ಭಾರತ-ಆಸ್ಟ್ರೇಲಿಯಾ ಟಿ20ಸರಣಿಯನ್ನು ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ಟಿ20 ಸರಣಿಯು ಭಾರತದಲ್ಲಿ ನಡೆಯಲಿದೆ.

ಭಾರತ-ಆಸ್ಟ್ರೇಲಿಯಾ ಟಿ20 ಸರಣಿಯ ಸ್ಥಳಗಳು ಯಾವುವು?

5 ಪಂದ್ಯಗಳ ಟಿ20 ಸರಣಿಯ ಸ್ಥಳಗಳು -ವಿಶಾಖಪಟ್ಟಣಂ, ತಿರುವನಂತಪುರಂ, ರಾಯ್​ಪುರ, ಮತ್ತು ಬೆಂಗಳೂರು.

ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾಗಿ ನೈತಿಕ ಸ್ಥೈರ್ಯ ತುಂಬಿದ ಪ್ರಧಾನಿ ಮೋದಿ

ಭಾರತ-ಆಸ್ಟ್ರೇಲಿಯಾ ಟಿ20 ಸರಣಿಯನ್ನು ಎಲ್ಲಿ ವೀಕ್ಷಿಸಬಹುದು?

ಭಾರತ vs ಆಸ್ಟ್ರೇಲಿಯಾ ಟಿ29 ಸರಣಿಯನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್‌ಸ್ಟ್ರೀಮ್ ಮಾಡಲಾಗುತ್ತದೆ. ಅಭಿಮಾನಿಗಳು Sports18 ನೆಟ್‌ವರ್ಕ್‌ ಮೂಲಕ ಟಿವಿಯಲ್ಲಿ ಸರಣಿಯನ್ನು ವೀಕ್ಷಿಸಬಹುದು.

ಭಾರತ-ಆಸ್ಟ್ರೇಲಿಯಾ ಟಿ20ಸರಣಿ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ಆಸ್ಟ್ರೇಲಿಯಾ ಟಿ20ಸರಣಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ:

  • ಗುರುವಾರ, 23 ನವೆಂಬರ್- ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂ, ವಿಶಾಖಪಟ್ಟಣಂ
  • ಭಾನುವಾರ, 26 ನವೆಂಬರ್- ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
  • ಮಂಗಳವಾರ, 28 ನವೆಂಬರ್- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
  • ಶುಕ್ರವಾರ, 1 ಡಿಸೆಂಬರ್- ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣ, ರಾಯ್​ಪುರ
  • ಭಾನುವಾರ, 3 ಡಿಸೆಂಬರ್- ಎಮ್. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಕ್ರೀಡಾಂಗಣ, ಬೆಂಗಳೂರು

ಉಭಯ ತಂಡಗಳು:

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್ (ನಾಯಕ), ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್