IND vs AUS: ಭಾರತ ಮತ್ತು ಆಸ್ಟ್ರೇಲಿಯಾ ಸರಣಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
India vs Australia Schedule 2025: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ವೈಟ್ ಬಾಲ್ ಸರಣಿ ಆಡಲು ಸಜ್ಜಾಗಿದೆ. ಭಾನುವಾರದಿಂದ (ಅ.19) ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎಂಟು ಮ್ಯಾಚ್ಗಳ ಸರಣಿ ಶುರುವಾಗಲಿದ್ದು, ಈ ಸರಣಿಯ ಮೂಲಕ ಶುಭ್ಮನ್ ಗಿಲ್ ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ನಾಳೆಯಿಂದ (ಅ.19) ಶುರುವಾಗಲಿದೆ. 8 ಪಂದ್ಯಗಳ ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳು ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯ ಸಂಪೂರ್ಣ ಮಾಹಿತಿ ಇಲ್ಲಿದೆ…
ಭಾರತ vs ಆಸ್ಟ್ರೇಲಿಯಾ ಸರಣಿ ವೇಳಾಪಟ್ಟಿ:
- ಏಕದಿನ ಸರಣಿ ವೇಳಾಪಟ್ಟಿ:
- ಅಕ್ಟೋಬರ್ 19: ಮೊದಲ ಏಕದಿನ ಪಂದ್ಯ – ಪರ್ತ್ ಕ್ರೀಡಾಂಗಣ, ಪರ್ತ್
- ಅಕ್ಟೋಬರ್ 23: ಎರಡನೇ ಏಕದಿನ ಪಂದ್ಯ – ಅಡಿಲೇಡ್ ಓವಲ್
- ಅಕ್ಟೋಬರ್ 25: ಮೂರನೇ ಏಕದಿನ ಪಂದ್ಯ – ಸಿಡ್ನಿ ಕ್ರಿಕೆಟ್ ಮೈದಾನ, ಸಿಡ್ನಿ
ಇದನ್ನೂ ಓದಿ: ಸತತ ಗೆಲುವುಗಳೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
- ಟಿ20 ಸರಣಿ ವೇಳಾಪಟ್ಟಿ:
- ಅಕ್ಟೋಬರ್ 29: ಮೊದಲ ಟಿ20 ಪಂದ್ಯ – ಮನುಕಾ ಓವಲ್, ಕ್ಯಾನ್‌ಬೆರಾ
- ಅಕ್ಟೋಬರ್ 31: ಎರಡನೇ ಟಿ20 ಪಂದ್ಯ– ಮೆಲ್ಬೋರ್ನ್ ಕ್ರಿಕೆಟ್ ಮೈದಾನ
- ನವೆಂಬರ್ 2,: ಮೂರನೇ ಟಿ20 ಪಂದ್ಯ– ಬೆಲ್ಲೆರಿವ್ ಓವಲ್, ಹೋಬಾರ್ಟ್
- ನವೆಂಬರ್ 6: ನಾಲ್ಕನೇ ಟಿ20 ಪಂದ್ಯ – ಗೋಲ್ಡ್ ಕೋಸ್ಟ್ ಕ್ರೀಡಾಂಗಣ, ಕ್ಯಾರಾರಾ
- ನವೆಂಬರ್ 8: ಐದನೇ ಟಿ20 ಪಂದ್ಯ– ದಿ ಗಬ್ಬಾ, ಬ್ರಿಸ್ಬೇನ್
ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?
- ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಶುರುವಾಗಲಿದೆ.
- ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಟಿ20 ಸರಣಿಯು ಭಾರತೀಯ ಕಾಲಮಾನ ಮಧ್ಯಾಹ್ನ 1.45 ರಿಂದ ಶುರುವಾಗಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.
ಉಭಯ ತಂಡಗಳು:
ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಫಿಲಿಪ್ , ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್,ಮ್ಯಾಥ್ಯೂ ಕುಹ್ನೆಮನ್, ಮಾರ್ನಸ್ ಲಾಬುಶೇನ್.
ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.
ಆಸ್ಟ್ರೇಲಿಯಾ ಟಿ20 ತಂಡ (ಮೊದಲ ಎರಡು ಪಂದ್ಯಗಳಿಗೆ): ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.
Published On - 10:05 am, Sat, 18 October 25
