ಮೊಹಾಲಿಯಲ್ಲಿ ಭಾರತಕ್ಕಿಂತ ಆಸ್ಟ್ರೇಲಿಯಾ ತಂಡವೇ ಬಲಿಷ್ಠ..!

India vs Australia: ಈ ಮೈದಾನದಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ 358 ರನ್ ಬಾರಿಸಿತ್ತು. ಆದರೆ ಈ ಬೃಹತ್ ಮೊತ್ತವನ್ನು ಚೇಸ್ ಮಾಡಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿತ್ತು ಎಂಬುದು ಉಲ್ಲೇಖಾರ್ಹ. ಹೀಗಾಗಿ ಮೊಹಾಲಿ ಮೈದಾನದಲ್ಲಿ ಮತ್ತೊಮ್ಮೆ ಗೆಲ್ಲುವ ವಿಶ್ವಾಸದಲ್ಲಿದೆ ಆಸ್ಟ್ರೇಲಿಯಾ ತಂಡ.

ಮೊಹಾಲಿಯಲ್ಲಿ ಭಾರತಕ್ಕಿಂತ ಆಸ್ಟ್ರೇಲಿಯಾ ತಂಡವೇ ಬಲಿಷ್ಠ..!
India vs Australia
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 21, 2023 | 10:59 PM

ಭಾರತ-ಆಸ್ಟ್ರೇಲಿಯಾ ನಡುವಣ 3 ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಮೊಹಾಲಿಯ ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅತ್ತ ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯುತ್ತಿರುವುದರಿಂದ ಆಸ್ಟ್ರೇಲಿಯಾ ತಂಡ ಕೂಡ ಫುಲ್ ಖುಷಿಯಲ್ಲಿದೆ. ಇದಕ್ಕೆ ಮುಖ್ಯ ಕಾರಣ ಆಸೀಸ್ ಪಾಲಿಗೆ ಪಿಸಿಎ ಪಿಚ್​ ತವರು ಮೈದಾನದಂತಿರುವುದು.

ಅಂದರೆ ಮೊಹಾಲಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇದುವರೆಗೆ 5 ಏಕದಿನ ಪಂದ್ಯಗಳನ್ನಾಡಲಿದೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 1 ಬಾರಿ ಮಾತ್ರ ಎಂದರೆ ನಂಬಲೇಬೇಕು. ಅತ್ತ ತವರಿನ ಹುಲಿಗಳನ್ನು ಪಿಸಿಎ ಪಿಚ್​ನಲ್ಲಿ ಆಸ್ಟ್ರೇಲಿಯಾ 4 ಬಾರಿ ಮಣಿಸಿದೆ.

ಇಲ್ಲಿ ವಿಶೇಷ ಎಂದರೆ ಈ ಪಿಚ್​ನಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಆಸ್ಟ್ರೇಲಿಯಾ ವಿರುದ್ಧ ಗೆದ್ದಿರುವುದು 1996 ರಲ್ಲಿ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಲ್ಲಿ ಭಾರತಕ್ಕೆ ಆಸೀಸ್ ಪಡೆಗೆ ಸೋಲುಣಿಸಿದೆ.

ಇನ್ನು ಈ ಮೈದಾನದಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ 358 ರನ್ ಬಾರಿಸಿತ್ತು. ಆದರೆ ಈ ಬೃಹತ್ ಮೊತ್ತವನ್ನು ಚೇಸ್ ಮಾಡಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿತ್ತು ಎಂಬುದು ಉಲ್ಲೇಖಾರ್ಹ. ಹೀಗಾಗಿ ಮೊಹಾಲಿ ಮೈದಾನದಲ್ಲಿ ಮತ್ತೊಮ್ಮೆ ಗೆಲ್ಲುವ ವಿಶ್ವಾಸದಲ್ಲಿದೆ ಆಸ್ಟ್ರೇಲಿಯಾ ತಂಡ.

ಉಭಯ ತಂಡಗಳ ಅಂಕಿ ಅಂಶಗಳು:

ಮೊಹಾಲಿ ಮೈದಾನದಲ್ಲಿ ಭಾರತ ತಂಡವು ಒಟ್ಟು 16 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆದರೆ ಇಲ್ಲಿ ಸೋತಿರುವ 6 ಪಂದ್ಯಗಳಲ್ಲಿ ನಾಲ್ಕು ಮ್ಯಾಚ್​ಗಳು ಆಸ್ಟ್ರೇಲಿಯಾ ವಿರುದ್ಧ ಎಂಬುದು ವಿಶೇಷ. ಇನ್ನು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ತಂಡವು ಒಟ್ಟು 7 ಪಂದ್ಯಗಳನ್ನಾಡಿದ್ದು, 6 ರಲ್ಲಿ ಜಯ ಸಾಧಿಸಿದೆ. ಹಾಗೆಯೇ 1996 ರಲ್ಲಿ ಮಾತ್ರ ಒಂದು ಪಂದ್ಯದಲ್ಲಿ ಸೋಲನುಭವಿಸಿದೆ.

ಇಲ್ಲಿ ಒಟ್ಟಾರೆ ಪಂದ್ಯಗಳ ಗೆಲುವಿನ ಲೆಕ್ಕಾಚಾರಗಳನ್ನು ಗೆದ್ದುಕೊಂಡರೆ ಮೊಹಾಲಿಯ ಪಿಸಿಎ ಮೈದಾನವು ಭಾರತಕ್ಕಿಂತ ಆಸ್ಟ್ರೇಲಿಯಾ ಪಾಲಿಗೆ ತವರು ಮೈದಾನದಂತಿದೆ. ಇದಕ್ಕೆ ಸಾಕ್ಷಿಯೇ ಈ ಮೈದಾನದಲ್ಲಿ ಆಸೀಸ್ ಪಡೆ ಪಾರುಪತ್ಯ ಮೆರೆದಿರುವುದು. ಇದಾಗ್ಯೂ ಶುಕ್ರವಾರ ನಡೆಯಲಿರುವ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: ಗೆದ್ದ ಟೀಮ್ ಇಂಡಿಯಾ: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  • ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
  • ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  • ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).

Published On - 10:58 pm, Thu, 21 September 23

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ