ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಭಾರತೀಯ ಕಾಲಮಾನ ಬೆಳಿಗ್ಗೆ 5.50 ರಿಂದ ಶುರುವಾದ ಈ ಪಂದ್ಯದ ಮೊದಲ ಸೆಷನ್ನಲ್ಲಿ ಕೇವಲ 13.2 ಓವರ್ಗಳನ್ನು ಆಡಲಾಗಿದೆ. ಇದರ ನಡುವೆ ಎರಡು ಬಾರಿ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.
14ನೇ ಓವರ್ ವೇಳೆ ಜೋರು ಮಳೆಯಾಗಿದ್ದರಿಂದ ಪಂದ್ಯವನ್ನು ಮುಂದುವರೆಸಲು ಸಾಧ್ಯವಾಗಲಿಲ್ಲ. ಇದರಿಂದ ಮೊದಲ ಸೆಷನ್ ಕೇವಲ 13.2 ಓವರ್ಗಳಿಗೆ ಸೀಮಿತವಾಯಿತು. ಇನ್ನು ವರುಣನ ಅವಕೃಪೆಯಿಂದ ದ್ವಿತೀಯ ಸೆಷನ್ ಕೂಡ ನಡೆಯಲಿಲ್ಲ.
ಇನ್ನು ಮೂರನೇ ಸೆಷನ್ ಭಾರತೀಯ ಕಾಲಮಾನ 10.50 ರಿಂದ ಶುರುವಾಗಲಿದೆ. ಹಾಗೆಯೇ ಮಧ್ಯಾಹ್ನ 1.50 ರೊಳಗೆ ಪಂದ್ಯವನ್ನು ಆಯೋಜಿಸುವಂತಹ ಪರಿಸ್ಥಿತಿ ಕಂಡು ಬರದಿದ್ದರೆ ಮೊದಲ ದಿನದಾಟವು ರದ್ದಾಗುವ ಸಾಧ್ಯತೆಯಿದೆ.
ಟಾಸ್ ಸೋತು ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ಪರ ಉಸ್ಮಾನ್ ಖ್ವಾಜಾ ಹಾಗೂ ನಾಥನ್ ಮೆಕ್‌ಸ್ವೀನಿ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. 13.2 ಓವರ್ಗಳವರೆಗೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿರುವ ಆಸ್ಟ್ರೇಲಿಯಾ ಓಪನರ್ಗಳು ಯಾವುದೇ ವಿಕೆಟ್ ಕಳೆದುಕೊಳ್ಳದಂತೆ ನೋಡಿಕೊಂಡರು.
47 ಎಸೆತಗಳನ್ನು ಎದುರಿಸಿದ ಉಸ್ಮಾನ್ ಖ್ವಾಜಾ ಅಜೇಯ 19 ರನ್ ಬಾರಿಸಿದರೆ, ನಾಥನ್ ಮೆಕ್‌ಸ್ವೀನಿ 33 ಎಸೆತಗಳಲ್ಲಿ 4 ರನ್ಗಳಿಸಿ ಕ್ರೀಸ್ನಲ್ಲಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ಯಾವುದೇ ವಿಕೆಟ್ ನಷ್ಟವಿಲ್ಲದೆ 28 ರನ್ ಕಲೆಹಾಕಿದೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: IPL 2025 vs PSL 2025: ಐಪಿಎಲ್ಗೆ ಟಕ್ಕರ್ ಕೊಡಲು ಪಿಎಸ್ಎಲ್ ರೆಡಿ..!
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.
Published On - 10:21 am, Sat, 14 December 24