IND vs AUS Live Score: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಜಯ
India vs Australia Live Score in Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ಕೆ ಮಾಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ (105) ಹಾಗೂ ಶುಭ್ಮನ್ ಗಿಲ್ (105) ಭರ್ಜರಿ ಶತಕ ಸಿಡಿಸಿದರು. ಈ ಶತಕಗಳ ನೆರವಿನಿಂದ ಭಾರತ ತಂಡವು ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 399 ರನ್ ಕಲೆಹಾಕಿತು.
LIVE Cricket Score & Updates
-
IND vs AUS Live Score: ಆಸ್ಟ್ರೇಲಿಯಾ ತಂಡ ಆಲೌಟ್
IND 399/5 (50)
AUS 217 (28.2)
ಮಳೆಯ ಹಿನ್ನಲೆ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಆಸ್ಟ್ರೇಲಿಯಾ 33 ಓವರ್ಗಳಲ್ಲಿ 317 ರನ್ಗಳ ಟಾರ್ಗೆಟ್ ನೀಡಲಾಗಿತ್ತು. ಇದೀಗ 217 ರನ್ಗಳಿಂದ ಆಸ್ಟ್ರೇಲಿಯಾ ಆಲೌಟ್ ಆಗಿದೆ. ಇದರೊಂದಿಗೆ ಟೀಮ್ ಇಂಡಿಯಾ 99 ರನ್ಗಳ ಭರ್ಜರಿ ಜಯ ಸಾಧಿಸಿದೆ.
-
IND vs AUS Live Score: 9ನೇ ವಿಕೆಟ್ಗೆ ಅರ್ಧಶತಕದ ಜೊತೆಯಾಟ
ಮೊಹಮ್ಮದ್ ಶಮಿ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಶಾನ್ ಅಬಾಟ್.
28 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟವಾಡಿದ ಶಾನ್ ಅಬಾಟ್ ಹಾಗೂ ಜೋಶ್ ಹ್ಯಾಝಲ್ವುಡ್.
ಕೊನೆಯ 2 ವಿಕೆಟ್ಗೆ ಟೀಮ್ ಇಂಡಿಯಾ ಬೌಲರ್ಗಳ ಪರದಾಟ.
AUS 194/8 (25.2)
-
IND vs AUS Live Score: ಆಸ್ಟ್ರೇಲಿಯಾ ತಂಡದ 8ನೇ ವಿಕೆಟ್ ಪತನ
ರವೀಂದ್ರ ಜಡೇಜಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ನಿರ್ಗಮಿಸಿದ ಆ್ಯಡಂ ಝಂಪಾ.
ಟೀಮ್ ಇಂಡಿಯಾಗೆ 8ನೇ ಯಶಸ್ಸು. ಕೇವಲ 5 ರನ್ಗಳಿಸಿ ವಿಕೆಟ್ ಒಪ್ಪಿಸಿದ ಝಂಪಾ.
AUS 140/8 (20.4)
IND vs AUS Live Score: ಆಸ್ಟ್ರೇಲಿಯಾ ತಂಡದ 6ನೇ ವಿಕೆಟ್ ಪತನ
ರವೀಂದ್ರ ಜಡೇಜಾ ಎಸೆತದಲ್ಲಿ ಬ್ಯಾಟ್ ಇನ್ ಸೈಡ್ ಎಡ್ಜ್ ಆಗಿ ಬೌಲ್ಡ್ ಆದ ಅಲೆಕ್ಸ್ ಕ್ಯಾರಿ.
ಟೀಮ್ ಇಂಡಿಯಾಗೆ 6ನೇ ಯಶಸ್ಸು…ಗೆಲುವಿನತ್ತ ಭಾರತ.
ಕ್ರೀಸ್ನಲ್ಲಿ ಕ್ಯಾಮರೋನ್ ಗ್ರೀನ್ ಹಾಗೂ ಶಾನ್ ಅಬಾಟ್ ಬ್ಯಾಟಿಂಗ್.
AUS 128/6 (18.2)
IND vs AUS Live Score: ಆಸ್ಟ್ರೇಲಿಯಾ ತಂಡದ 5ನೇ ವಿಕೆಟ್ ಪತನ
ಅಶ್ವಿನ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದ ಜೋಶ್ ಇಂಗ್ಲಿಸ್.
9 ಎಸೆತಗಳಲ್ಲಿ 6 ರನ್ಗಳಿಸಿ ವಿಕೆಟ್ ಒಪ್ಪಿಸಿದ ಇಂಗ್ಲಿಸ್.
ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟ ಅಶ್ವಿನ್.
AUS 101/5 (14.5)
IND vs AUS Live Score: ಆಸ್ಟ್ರೇಲಿಯಾ ತಂಡದ 4ನೇ ವಿಕೆಟ್ ಪತನ
ರವಿಚಂದ್ರನ್ ಅಶ್ವಿನ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರ ನಡೆದ ಡೇವಿಡ್ ವಾರ್ನರ್.
39 ಎಸೆತಗಳಲ್ಲಿ 53 ರನ್ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದ ವಾರ್ನರ್.
ಕ್ರೀಸ್ನಲ್ಲಿ ಜೋಶ್ ಇಂಗ್ಲಿಸ್ ಹಾಗೂ ಅಲೆಕ್ಸ್ ಕ್ಯಾರಿ ಬ್ಯಾಟಿಂಗ್.
AUS 100/4 (14.1)
IND vs AUS Live Score: ಆಸ್ಟ್ರೇಲಿಯಾ ತಂಡದ 3ನೇ ವಿಕೆಟ್ ಪತನ
ಅಶ್ವಿನ್ ಎಸೆತದಲ್ಲಿ ಮಾರ್ನಸ್ ಲಾಬುಶೇನ್ ಕ್ಲೀನ್ ಬೌಲ್ಡ್.
31 ಎಸೆತಗಳಲ್ಲಿ 27 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಲಾವುಶೇನ್.
ಕ್ರೀಸ್ನಲ್ಲಿ ಡೇವಿಡ್ ವಾರ್ನರ್ ಹಾಗೂ ಜೋಶ್ ಇಂಗ್ಲಿಸ್ ಬ್ಯಾಟಿಂಗ್.
AUS 89/3 (12.5)
IND vs AUS Live Score: ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್
ಶಾರ್ದೂಲ್ ಠಾಕೂರ್ ಎಸೆದ 12ನೇ ಓವರ್ನ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸಿದ ಡೇವಿಡ್ ವಾರ್ನರ್.
ನಾಲ್ಕನೇ ಎಸೆತದಲ್ಲಿ ಮಾರ್ನಸ್ ಲಾಬುಶೇನ್ ಬ್ಯಾಟ್ನಿಂದ ಅತ್ಯಾಕರ್ಷಕ ಬೌಂಡರಿ.
AUS 82/2 (12)
IND vs AUS Live Score: 33 ಓವರ್ಗಳಲ್ಲಿ 317 ರನ್ಗಳ ಟಾರ್ಗೆಟ್
ಇಂದೋರ್ನಲ್ಲಿ ಮಳೆ ಸ್ಥಗಿತವಾಗಿದೆ. ಅಲ್ಲದೆ ಶೀಘ್ರದಲ್ಲೇ ಓವರ್ ಕಡಿತಗಳೊಂದಿಗೆ ಪಂದ್ಯ ಶುರುವಾಗಲಿದೆ.
ಅದರಂತೆ 33 ಓವರ್ಗಳಲ್ಲಿ ಆಸ್ಟ್ರೇಲಿಯಾ ತಂಡ 317 ರನ್ಗಳಿಸಿದರೆ ಜಯ ಸಾಧಿಸಬಹುದು.
ಸದ್ಯ ಕ್ರೀಸ್ನಲ್ಲಿ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್ ಮಾಡುತ್ತಿದ್ದಾರೆ.
AUS 56/2 (9)
ಇನ್ನು 24 ಓವರ್ಗಳಲ್ಲಿ ಆಸ್ಟ್ರೇಲಿಯಾ 261 ರನ್ ಕಲೆಹಾಕಬೇಕು.
IND vs AUS Live Score: ಮಳೆಯಿಂದಾಗಿ ಪಂದ್ಯ ಸ್ಥಗಿತ
IND 399/5 (50)
AUS 56/2 (9)
ಕ್ರೀಸ್ನಲ್ಲಿ ಡೇವಿಡ್ ವಾರ್ನರ್ (26) ಹಾಗೂ ಮಾರ್ನಸ್ ಲಾಬುಶೇನ್ (17) ಬ್ಯಾಟಿಂಗ್.
ಮಳೆಯಿಂದಾಗಿ ಪಂದ್ಯ ಸ್ಥಗಿತ
IND vs AUS Live Score: 6 ಓವರ್ಗಳು ಮುಕ್ತಾಯ
ಪ್ರಸಿದ್ಧ್ ಕೃಷ್ಣ ಎಸೆದ 6ನೇ ಓವರ್ನಲ್ಲಿ ಮೂರು ಫೋರ್ಗಳನ್ನು ಬಾರಿಸಿದ ಆಸ್ಟ್ರೇಲಿಯಾ ಬ್ಯಾಟರ್ಗಳು.
ಕ್ರೀಸ್ನಲ್ಲಿ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್.
AUS 40/2 (6)
IND vs AUS Live Score: ಆಸ್ಟ್ರೇಲಿಯಾ ತಂಡದ 2 ವಿಕೆಟ್ ಪತನ
ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ಸ್ಲಿಪ್ನಲ್ಲಿ ಶುಭ್ಮನ್ ಗಿಲ್ಗೆ ಕ್ಯಾಚ್ ನೀಡಿ ನಿರ್ಗಮಿಸಿದ ಸ್ಟೀವ್ ಸ್ಮಿತ್.
ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡಿದ ಪ್ರಸಿದ್ಧ್ ಕೃಷ್ಣ.
AUS 9/2 (1.3)
IND vs AUS Live Score: ಆಸ್ಟ್ರೇಲಿಯಾದ ಮೊದಲ ವಿಕೆಟ್ ಪತನ
ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿದ ಮ್ಯಾಥ್ಯೂ ಶಾರ್ಟ್ (9)…ಬೌಂಡರಿ ಲೈನ್ನಲ್ಲಿ ಅಶ್ವಿನ್ ಉತ್ತಮ ಕ್ಯಾಚ್.
ಆಸ್ಟ್ರೇಲಿಯಾ ತಂಡದ ಮೊದಲ ವಿಕೆಟ್ ಪತನ.
AUS 9/1 (1.2)
IND vs AUS Live Score: ಆಸ್ಟ್ರೇಲಿಯಾ ಉತ್ತಮ ಆರಂಭ
ಮೊಹಮ್ಮದ್ ಶಮಿ ಎಸೆದ ಮೊದಲ ಓವರ್ನಲ್ಲಿ 2 ಫೋರ್ ಬಾರಿಸಿದ ಮ್ಯಾಥ್ಯೂ ಶಾರ್ಟ್.
ಮೊದಲ ಓವರ್ನಲ್ಲಿ 9 ರನ್ ಕಲೆಹಾಕಿದ ಆಸ್ಟ್ರೇಲಿಯಾ.
ಕ್ರೀಸ್ನಲ್ಲಿ ಮ್ಯಾಥ್ಯೂ ಶಾರ್ಟ್ ಹಾಗೂ ಡೇವಿಡ್ ವಾರ್ನರ್ ಬ್ಯಾಟಿಂಗ್.
AUS 9/0 (1)
IND vs AUS Live Score: ಆಸ್ಟ್ರೇಲಿಯಾ ತಂಡಕ್ಕೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ
IND 399/5 (50)
ಆಸ್ಟ್ರೇಲಿಯಾ ತಂಡಕ್ಕೆ 400 ರನ್ಗಳ ಗುರಿ ನೀಡಿದ ಟೀಮ್ ಇಂಡಿಯಾ.
ಟೀಮ್ ಇಂಡಿಯಾ ಪರ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್ (105) ಹಾಗೂ ಶುಭ್ಮನ್ ಗಿಲ್ (104).
ಅರ್ಧಶತಕ ಬಾರಿಸಿದ ಅಬ್ಬರಿಸಿದ ಕೆಎಲ್ ರಾಹುಲ್ (52) ಹಾಗೂ ಸೂರ್ಯಕುಮಾರ್ ಯಾದವ್ (72).
IND vs AUS Live Score: ಅರ್ಧಶತಕ ಪೂರೈಸಿದ ಸೂರ್ಯ
ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯಕುಮಾರ್ ಯಾದವ್.
ಮೊದಲ ಏಕದಿನ ಪಂದ್ಯದಲ್ಲೂ ಹಾಫ್ ಸೆಂಚುರಿ ಸಿಡಿಸಿದ್ದ ಸೂರ್ಯ.
ಬ್ಯಾಕ್ ಟು ಬ್ಯಾಕ್ ಅರ್ಧಶತಕಗಳೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಅಬ್ಬರಿಸಲಾರಂಭಿಸಿದ ಸ್ಕೈ.
IND 364/5 (46.3)
IND vs AUS Live Score: ಟೀಮ್ ಇಂಡಿಯಾದ 5ನೇ ವಿಕೆಟ್ ಪತನ
ಕ್ಯಾಮರೋನ್ ಗ್ರೀನ್ ಎಸೆತದಲ್ಲಿ ಕೆಎಲ್ ರಾಹುಲ್ ಕ್ಲೀನ್ ಬೌಲ್ಡ್.
38 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 52 ರನ್ ಬಾರಿಸಿ ನಿರ್ಗಮಿಸಿದ ರಾಹುಲ್.
IND 355/5 (46)
IND vs AUS Live Score: ಅರ್ಧಶತಕ ಪೂರೈಸಿದ ಕೆಎಲ್ ರಾಹುಲ್
35 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅರ್ಧಶತಕ ಪೂರೈಸಿದ ಕೆಎಲ್ ರಾಹುಲ್.
IND 338/4 (44.1)
IND vs AUS Live Score: ಸೂರ್ಯನ ಹ್ಯಾಟ್ರಿಕ್ ಸಿಕ್ಸ್
ಕ್ಯಾಮರೋನ್ ಗ್ರೀನ್ ಎಸೆತದ 44ನೇ ಓವರ್ನಲ್ಲಿ 4 ಸಿಕ್ಸ್ ಸಿಡಿಸಿದ ಸೂರ್ಯಕುಮಾರ್
ಮೊದಲ ಎಸೆತದಲ್ಲಿ ಲೆಗ್ ಸೈಡ್ನತ್ತ ಅತ್ಯಾಕರ್ಷಕ ಸಿಕ್ಸ್.
ಎರಡನೇ ಎಸೆತದಲ್ಲೂ ಲೆಗ್ ಸೈಡ್ನತ್ತ ಮತ್ತೊಂದು ಸಿಕ್ಸ್ ಸಿಡಿಸಿದ ಸೂರ್ಯ.
ಮೂರನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್.
ನಾಲ್ಕನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಮತ್ತೊಂದು ಸಿಕ್ಸ್.
ಐದನೇ ಎಸೆತದಲ್ಲಿ 1 ರನ್.
ಕೊನೆಯ ಎಸೆತದಲ್ಲಿ ಮತ್ತೊಂದು ರನ್.
IND 337/4 (44)
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್.
IND vs AUS Live Score: ತ್ರಿಶತಕ ಪೂರೈಸಿದ ಟೀಮ್ ಇಂಡಿಯಾ
ಆ್ಯಡಂ ಝಂಪಾ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಇಶಾನ್ ಕಿಶನ್.
ಈ ಸಿಕ್ಸ್ನೊಂದಿಗೆ ತ್ರಿಶತಕ ಪೂರೈಸಿದ ಟೀಮ್ ಇಂಡಿಯಾ.
ಝಂಪಾರ 2ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿ ಕ್ಯಾಚ್ ನೀಡಿದ ಇಶಾನ್ ಕಿಶನ್ (31)
IND 302/4 (40.2)
IND vs AUS Live Score: ಟೀಮ್ ಇಂಡಿಯಾದ 3ನೇ ವಿಕೆಟ್ ಪತನ
ಕ್ಯಾಮರೋನ್ ಗ್ರೀನ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಆಕಾಶದತ್ತ ಚಿಮ್ಮಿದ ಚೆಂಡನ್ನು ಹಿಡಿದ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ…ಶುಭ್ಮನ್ ಗಿಲ್ ಔಟ್.
97 ಎಸೆತಗಳಲ್ಲಿ 6 ಫೋರ್ ಹಾಗೂ 4 ಸಿಕ್ಸ್ಗಳೊಂದಿಗೆ 104 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಶುಭ್ಮನ್ ಗಿಲ್.
IND 243/3 (34.5)
IND vs AUS Live Score: ಶತಕ ಪೂರೈಸಿದ ಶುಭ್ಮನ್ ಗಿಲ್
ಈ ಪಂದ್ಯದಲ್ಲಿ 92 ಎಸೆತಗಳನ್ನು ಎದುರಿಸಿದ ಗಿಲ್ 6 ಫೋರ್ 4 ಸಿಕ್ಸ್ಗಳೊಂದಿಗೆ ಶತಕ ಪೂರೈಸಿದರು.
IND 230/2 (33)
IND vs AUS Live Score: ಟೀಮ್ ಇಂಡಿಯಾದ 2ನೇ ವಿಕೆಟ್ ಪತನ
ಶಾನ್ ಅಬಾಟ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಬೌಂಡರಿ ಬಳಿಯಿಂದ ಓಡಿ ಬಂದು ಅತ್ಯುತ್ತಮ ಕ್ಯಾಚ್ ಹಿಡಿದ ಮ್ಯಾಥ್ಯೂ ಶಾರ್ಟ್…ಶ್ರೇಯಸ್ ಅಯ್ಯರ್ ಔಟ್.
90 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 105 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಶ್ರೇಯಸ್ ಅಯ್ಯರ್.
IND 216/2 (30.5)
IND vs AUS Live Score: ಶತಕ ಪೂರೈಸಿದ ಶ್ರೇಯಸ್ ಅಯ್ಯರ್
86 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ ಶತಕ ಪೂರೈಸಿದ ಶ್ರೇಯಸ್ ಅಯ್ಯರ್.
ಇದು ಏಕದಿನ ಕ್ರಿಕೆಟ್ನಲ್ಲಿ ಅಯ್ಯರ್ ಅವರ ಮೂರನೇ ಶತಕ.
IND 210/1 (29.5)
IND vs AUS Live Score: ಶುಭ್ಮನ್ ಹಾಗೂ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್
ಜೋಶ್ ಹ್ಯಾಝಲ್ವುಡ್ ಎಸೆದ 25ನೇ ಓವರ್ನ ಮೊದಲ ಎಸೆತದಲ್ಲೇ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್.
ಶುಭ್ಮನ್ ಗಿಲ್ (84) ಹಾಗೂ ಶ್ರೇಯಸ್ ಅಯ್ಯರ್ (87) ನಡುವೆ 171 ರನ್ಗಳ ಭರ್ಜರಿ ಜೊತೆಯಾಟ
25 ಓವರ್ಗಳ ಮುಕ್ತಾಯದ ವೇಳೆ 187 ರನ್ ಕಲೆಹಾಕಿರುವ ಟೀಮ್ ಇಂಡಿಯಾ.
IND 187/1 (25)
IND vs AUS Live Score: 20 ಓವರ್ ಮುಕ್ತಾಯ: ಅಯ್ಯರ್ ಅಬ್ಬರ
ಮ್ಯಾಥ್ಯೂ ಶಾರ್ಟ್ ಎಸೆದ 20ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಸಿಡಿಸಿದ ಶ್ರೇಯಸ್ ಅಯ್ಯರ್.
20 ಓವರ್ಗಳ ಮುಕ್ತಾಯದ ವೇಳೆಗೆ 158 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಶುಭ್ಮನ್ ಗಿಲ್ (69) ಹಾಗೂ ಶ್ರೇಯಸ್ ಅಯ್ಯರ್ (74) ಬ್ಯಾಟಿಂಗ್.
IND 158/1 (20)
ರುತುರಾಜ್ ಗಾಯಕ್ವಾಡ್ (8) ಔಟ್.
IND vs AUS Live Score: ಅರ್ಧ ಶತಕ ಪೂರೈಸಿದ ಶ್ರೇಯಸ್ ಅಯ್ಯರ್
ಸ್ಪೆನ್ಸರ್ ಜಾನ್ಸನ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಶ್ರೇಯಸ್ ಅಯ್ಯರ್.
ಈ ಸಿಕ್ಸ್ನೊಂದಿಗೆ 41 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅಯ್ಯರ್.
ಕ್ರೀಸ್ನಲ್ಲಿ ಶುಭ್ಮನ್ ಗಿಲ್ (60) ಹಾಗೂ ಶ್ರೇಯಸ್ ಅಯ್ಯರ್ (53) ಬ್ಯಾಟಿಂಗ್.
IND 128/1 (16)
IND vs AUS Live Score: ಅರ್ಧ ಶತಕ ಪೂರೈಸಿದ ಶುಭ್ಮನ್ ಗಿಲ್
ಕ್ಯಾಮರೋನ್ ಗ್ರೀನ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಶುಭ್ಮನ್ ಗಿಲ್.
37 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಪೋರ್ಗಳೊಂದಿಗೆ ಅರ್ಧಶತಕ ಪೂರೈಸಿದ ಗಿಲ್.
ಟೀಮ್ ಇಂಡಿಯಾದ ಭರ್ಜರಿ ಬ್ಯಾಟಿಂಗ್ ಮುಂದುವರಿಕೆ.
IND 107/1 (13.2)
IND vs AUS Live Score: ಶತಕ ಪೂರೈಸಿದ ಟೀಮ್ ಇಂಡಿಯಾ
13 ಓವರ್ಗಳಲ್ಲಿ ಶತಕ ಪೂರೈಸಿದ ಟೀಮ್ ಇಂಡಿಯಾ.
7.69 ರ ಸರಾಸರಿಯಲ್ಲಿ ರನ್ಗಳಿಸಿರುವ ಭಾರತೀಯ ಬ್ಯಾಟರ್ಗಳು.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ (40) ಹಾಗೂ ಶುಭ್ಮನ್ ಗಿಲ್ (46) ಬ್ಯಾಟಿಂಗ್
IND 100/1 (13)
IND vs AUS Live Score: 10 ಓವರ್ ಮುಕ್ತಾಯ: ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್
ಮೊದಲ 10 ಓವರ್ಗಳಲ್ಲಿ 80 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಶುಭ್ಮನ್ ಗಿಲ್ (33) ಹಾಗೂ ಶ್ರೇಯಸ್ ಅಯ್ಯರ್ (34) ಬ್ಯಾಟಿಂಗ್.
IND 80/1 (10)
ರುತುರಾಜ್ ಗಾಯಕ್ವಾಡ್ (8) ಔಟ್.
IND vs AUS Live Score: ಮಳೆಯಿಂದಾಗಿ ಪಂದ್ಯ ಸ್ಥಗಿತ
ಕ್ಯಾಮರೋನ್ ಗ್ರೀನ್ ಎಸೆದ 10ನೇ ಓವರ್ನ ಮೂರನೇ ಎಸೆತದಲ್ಲಿ ಆಕರ್ಷಕ ಸ್ಟ್ರೈಟ್ ಡ್ರೈವ್ ಫೋರ್ ಬಾರಿಸಿದ ಶುಭ್ಮನ್ ಗಿಲ್.
5ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಗಿಲ್.
ಮಳೆಯಿಂದಾಗಿ ಪಂದ್ಯ ಸ್ಥಗಿತ
IND 79/1 (9.5)
ಕ್ರೀಸ್ನಲ್ಲಿ ಶುಭ್ಮನ್ ಗಿಲ್ (32) ಹಾಗೂ ಶ್ರೇಯಸ್ ಅಯ್ಯರ್ (34) ಬ್ಯಾಟಿಂಗ್.
IND vs AUS Live Score: 8 ಓವರ್ ಮುಕ್ತಾಯ
8 ಓವರ್ ಮುಕ್ತಾಯದ ವೇಳೆಗೆ ಅರ್ಧಶತಕ ಪೂರೈಸಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಶುಭ್ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್
IND 54/1 (8)
ರುತುರಾಜ್ ಗಾಯಕ್ವಾಡ್ (8) ಔಟ್.
Karnataka News Live: ಬೆಂಗಳೂರು ಬಂದ್ಗೆ ಹೋಟೆಲ್ ಮಾಲೀಕರ ಸಂಘ ಬೆಂಬಲ
ಬೆಂಗಳೂರು: ಮಂಗಳವಾರ ಬೆಂಗಳೂರು ಬಂದ್ಗೆ ಹೋಟೆಲ್ ಮಾಲೀಕರ ಸಂಘ ಬೆಂಬಲ ಘೋಷಿಸಿವೆ. ನಗರದ ಬಹುತೇಕ ಹೋಟೆಲ್ ಗಳು ಮುಂಚಾನೆ 6 ರಿಂದ ಸಂಜೆ 6ರವರಗೆ ಬಂದ್ ಇರಲಿವೆ ಎಂದು ರಾಜ್ಯ ಹೋಟೆಲ್ ಮಾಲೀಕರ ಸಂಘಟನೆಯ ರಾಜ್ಯಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಹೇಳಿದರು.
IND vs AUS Live Score: ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್
ಜೋಶ್ ಹ್ಯಾಝಲ್ವುಡ್ ಎಸೆದ 6ನೇ ಓವರ್ನ ಮೊದಲ ಎಸೆತದಲ್ಲೇ ಆಕರ್ಷಕ ಕವರ್ ಡ್ರೈವ್ ಬಾರಿಸಿದ ಶ್ರೇಯಸ್ ಅಯ್ಯರ್.
5ನೇ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಮತ್ತೊಂದು ಫೋರ್ ಬಾರಿಸಿದ ಅಯ್ಯರ್.
12 ಎಸೆತಗಳಲ್ಲಿ 4 ಬೌಂಡರಿಯೊಂದಿಗೆ 21 ರನ್ ಬಾರಿಸಿರುವ ಶ್ರೇಯಸ್ ಅಯ್ಯರ್…ಉತ್ತಮ ಬ್ಯಾಟಿಂಗ್.
IND 37/1 (6)
IND vs AUS Live Score: ಟೀಮ್ ಇಂಡಿಯಾ ಮೊದಲ ವಿಕೆಟ್ ಪತನ
ಜೋಶ್ ಹ್ಯಾಝಲ್ವುಡ್ ಎಸೆತದಲ್ಲಿ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಕ್ಯಾಚ್ ನೀಡಿದ ರುತುರಾಜ್ ಗಾಯಕ್ವಾಡ್ (8). ಟೀಮ್ ಇಂಡಿಯಾದ ಮೊದಲ ವಿಕೆಟ್ ಪತನ.
ಕ್ರೀಸ್ನಲ್ಲಿ ಶುಭ್ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್
IND 16/1 (3.4)
Karnataka News Live: ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ !
ಬೆಂಗಳೂರು: ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕರ್ನಾಟಕ ಬಂದ್ ಬಗ್ಗೆ ನಾಳಿನ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಸೆ.29ರಂದು ಕರ್ನಾಟಕ ಬಂದ್ಗೆ ನಾವು ನಿರ್ಧಾರ ಮಾಡಿದ್ದೇವೆ. ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ಕರೆದಿದ್ದೇವೆ. ಕನ್ನಡಪರ ಸಂಘಟನೆಗಳು ಸೇರಿ ಎಲ್ಲಾ ಸಂಘಟನೆಗಳ ಜೊತೆ ಚರ್ಚೆ ಮಾಡುತ್ತೇವೆ. ಸಭೆ ನಡೆಸಿ ಕರ್ನಾಟಕ ಬಂದ್ ಬಗ್ಗೆ ಅಧಿಕೃವಾಗಿ ಘೋಷಿಸುತ್ತೇವೆ ಎಂದು ಹೇಳಿದರು.
IND vs AUS Live Score: ಟೀಮ್ ಇಂಡಿಯಾ ಇನಿಂಗ್ಸ್ ಆರಂಭ
ಆರಂಭಿಕರು: ಶುಭ್ಮನ್ ಗಿಲ್ ಹಾಗೂ ರುತುರಾಜ್ ಗಾಯಕ್ವಾಡ್
ಮೊದಲ ಓವರ್; ಸ್ಪೆನ್ಸರ್ ಜಾನ್ಸನ್.
ಮೊದಲ ಓವರ್ನ ಮೊದಲ ಎಸೆತದಲ್ಲೇ ಫೋರ್ ಬಾರಿಸಿ ಶುಭಾರಂಭ ಮಾಡಿದ ರುತುರಾಜ್ ಗಾಯಕ್ವಾಡ್.
ಮೂರನೇ ಎಸೆತದಲ್ಲಿ ರುತುರಾಜ್ ಬ್ಯಾಟ್ನಿಂದ ಮತ್ತೊಂದು ಫೋರ್.
ಐದನೇ ಎಸೆತದಲ್ಲಿ ವೈಡ್…ವಿಕೆಟ್ ಕೀಪರ್ನ ವಂಚಿಸಿ ಚೆಂಡು ಬೌಂಡರಿಗೆ…ಫೋರ್.
IND 13/0 (1)
IND vs AUS Live Score: ಆಸ್ಟ್ರೇಲಿಯಾ ಪ್ಲೇಯಿಂಗ್ 11
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೋನ್ ಗ್ರೀನ್, ಶಾನ್ ಅಬಾಟ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್ವುಡ್, ಸ್ಪೆನ್ಸರ್ ಜಾನ್ಸನ್
IND vs AUS Live Score: ಟೀಮ್ ಇಂಡಿಯಾ ಪ್ಲೇಯಿಂಗ್ 11
ಭಾರತ (ಪ್ಲೇಯಿಂಗ್ XI): ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.
IND vs AUS Live Score: ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ
ಇಂದೋರ್ನ ಹೋಲ್ಕರ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.
ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು 99 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ಕೆ ಮಾಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ (105) ಹಾಗೂ ಶುಭ್ಮನ್ ಗಿಲ್ (105) ಭರ್ಜರಿ ಶತಕ ಸಿಡಿಸಿದರು. ಈ ಶತಕಗಳ ನೆರವಿನಿಂದ ಭಾರತ ತಂಡವು ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 399 ರನ್ ಕಲೆಹಾಕಿತು. ಇತ್ತ ಮಳೆಯ ಕಾರಣ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 33 ಓವರ್ಗಳಲ್ಲಿ 317 ರನ್ಗಳ ಗುರಿ ಪಡೆದ ಆಸ್ಟ್ರೇಲಿಯಾ ತಂಡವು 28.2 ಓವರ್ಗಳಲ್ಲಿ 217 ರನ್ಗಳಿಗೆ ಆಲೌಟ್ ಆಗುವ ಮೂಲಕ 99 ರನ್ಗಳಿಂದ ಸೋಲೊಪ್ಪಿಕೊಂಡಿತು.
ಈ ಗೆಲುವಿನೊಂದಿಗೆ 3 ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ. ಇನ್ನು ಮೂರನೇ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ನಡೆಯಲಿದೆ.
ಭಾರತ (ಪ್ಲೇಯಿಂಗ್ XI): ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೋನ್ ಗ್ರೀನ್, ಶಾನ್ ಅಬಾಟ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್ವುಡ್, ಸ್ಪೆನ್ಸರ್ ಜಾನ್ಸನ್
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.
ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.
Published On - Sep 24,2023 1:16 PM