IND vs AUS: ಭಾರತ-ಆಸ್ಟ್ರೇಲಿಯಾ ಪಂದ್ಯ 5 ಚಾನೆಲ್​ಗಳಲ್ಲಿ ನೇರ ಪ್ರಸಾರ

India vs Australia Live Streaming: ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ. ಅಂದರೆ ಅಕ್ಟೋಬರ್ 8 ರಂದು ನಡೆಯಲಿರುವ ಪಂದ್ಯದಲ್ಲಿ ಆಸೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

IND vs AUS:  ಭಾರತ-ಆಸ್ಟ್ರೇಲಿಯಾ ಪಂದ್ಯ 5 ಚಾನೆಲ್​ಗಳಲ್ಲಿ ನೇರ ಪ್ರಸಾರ
India vs Australia
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 21, 2023 | 8:08 PM

ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಸೆಪ್ಟೆಂಬರ್ 22 ರಿಂದ ಶುರುವಾಗಲಿದೆ. ಶುಕ್ರವಾರ ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯವನ್ನು 5 ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಅಂದರೆ ಈ ಸರಣಿಯ ಎಲ್ಲಾ ಪಂದ್ಯಗಳು ಸ್ಪೋರ್ಟ್ಸ್​-18 ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದ್ದು, ಇದರ ಜೊತೆಗೆ ಪ್ರಾದೇಶಿಕ ಭಾಷಾ ಚಾನೆಲ್​ಗಳಲ್ಲೂ ಲೈವ್ ಇರಲಿದೆ. ಇಲ್ಲಿ ಪ್ರಾದೇಶಿಕ ಭಾಷಾ ವಿಭಾಗದಲ್ಲಿ 4 ಚಾನೆಲ್​ಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಕನ್ನಡ ಕೂಡ ಇರುವುದು ವಿಶೇಷ. ಅದರಂತೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಈ ಕೆಳಗಿನ ಐದು ಚಾನೆಲ್​ಗಳಲ್ಲಿ ನೇರ ಪ್ರಸಾರವಾಗಲಿದೆ.

  1. – ಸ್ಪೋರ್ಟ್ಸ್​ 18 (ಇಂಗ್ಲಿಷ್)
  2. – ಕಲರ್ಸ್ ಸಿನಿಮಾ (ಕನ್ನಡ)
  3. – ಕಲರ್ಸ್​ (ತಮಿಳ್)
  4. – ಕಲರ್ಸ್ ಸಿನಿಪ್ಲೆಕ್ಸ್ (ಹಿಂದಿ)
  5. – ಕಲರ್ಸ್ (ಬಾಂಗ್ಲಾ)

ಡಿಜಿಟಲ್​ನಲ್ಲೂ ಉಚಿತ ಪ್ರಸಾರ:

ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ಉಚಿತವಾಗಿ ವೀಕ್ಷಿಸಬಹುದು. ಈ ಸರಣಿಯ ಎಲ್ಲಾ ಪಂದ್ಯಗಳು ಜಿಯೋ ಸಿನಿಮಾ ಆ್ಯಪ್ ಹಾಗೂ ವೆಬ್​ಸೈಟ್​ನಲ್ಲಿ ನೇರ ಪ್ರಸಾರವಾಗಲಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಸರಣಿಯ ಎಲ್ಲಾ ಪಂದ್ಯಗಳು ಮಧ್ಯಾಹ್ನ 1.30 ರಿಂದ ಆರಂಭವಾಗಲಿದೆ. ಇನ್ನು ಮಧ್ಯಾಹ್ನ 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  • ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
  • ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  • ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).

ವಿಶ್ವಕಪ್ ಪೂರ್ವಭಾವಿ ಅಭ್ಯಾಸ:

ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ. ಅಂದರೆ ಅಕ್ಟೋಬರ್ 8 ರಂದು ನಡೆಯಲಿರುವ ಪಂದ್ಯದಲ್ಲಿ ಆಸೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡುತ್ತಿರುವುದು ವಿಶೇಷ. ಅಂದರೆ ಒಂದಾರ್ಥದಲ್ಲಿ ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್​ ಪೂರ್ವಭಾವಿ ಅಭ್ಯಾಸ ಪಂದ್ಯವಾಗಿದೆ.

ಆಸ್ಟ್ರೇಲಿಯಾ ತಂಡ:

ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್​ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಮೊದಲ 2 ಪಂದ್ಯಗಳಿಗೆ ಭಾರತ ತಂಡ:

ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ