India vs Australia: ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ: ಉಭಯ ತಂಡಗಳು ಹೀಗಿವೆ
India vs Australia ODI Schedule 2023: ತಾಯಿಯ ನಿಧನದ ಕಾರಣ ಆಸ್ಟ್ರೇಲಿಯಾ ತಂಡದಿಂದ ಹೊರಗುಳಿದಿರುವ ನಾಯಕ ಪ್ಯಾಟ್ ಕಮಿನ್ಸ್ ಕೂಡ ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ.
India vs Australia: ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಮುಕ್ತಾಯಗೊಂಡಿದೆ. 4 ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಸತತ 4ನೇ ಬಾರಿ ಭಾರತ ತಂಡವು ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮುತ್ತಿಕ್ಕಿದೆ. ಸದ್ಯ ಟೆಸ್ಟ್ ಸರಣಿಯ ಗೆಲುವಿನ ಸಂಭ್ರಮದಲ್ಲಿರುವ ಟೀಮ್ ಇಂಡಿಯಾ ಆಸೀಸ್ ವಿರುದ್ಧದ ಏಕದಿನ ಸರಣಿಗಾಗಿ ಸಜ್ಜಾಗಬೇಕಿದೆ.
ಮಾರ್ಚ್ 17 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ಭಾರತ ತಂಡವು 3 ಪಂದ್ಯಗಳನ್ನು ಆಡಲಿದೆ. ಈ ಪಂದ್ಯಗಳು ಪಂದ್ಯಗಳು ಮುಂಬೈ, ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ನಡೆಯಲಿದೆ. ಈಗಾಗಲೇ ಈ ಸರಣಿಗಾಗಿ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಇದಾಗ್ಯೂ ಅಹಮದಾಬಾದ್ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿರುವ ಶ್ರೇಯಸ್ ಅಯ್ಯರ್ ಬದಲಿಗೆ ಮತ್ತೋರ್ವ ಆಟಗಾರನಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಹಾಗೆಯೇ ತಾಯಿಯ ನಿಧನದ ಕಾರಣ ಆಸ್ಟ್ರೇಲಿಯಾ ತಂಡದಿಂದ ಹೊರಗುಳಿದಿರುವ ನಾಯಕ ಪ್ಯಾಟ್ ಕಮಿನ್ಸ್ ಕೂಡ ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಇನ್ನು ವೈಯುಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯವಾಡುತ್ತಿಲ್ಲ. ಹೀಗಾಗಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಅಲ್ಲದೆ ವಿಶಾಖಪಟ್ಟಣಂದಲ್ಲಿ ನಡೆಯಲಿರುವ 2ನೇ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.
ಆಸ್ಟ್ರೇಲಿಯಾ ಏಕದಿನ ತಂಡ:
ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.
ಇದನ್ನೂ ಓದಿ: Virat Kohli: 40 ವರ್ಷಗಳ ಹಳೆಯ ಸಾಧನೆಯನ್ನು ಪುನರಾವರ್ತಿಸಿದ ವಿರಾಟ್ ಕೊಹ್ಲಿ
ಭಾರತ ಏಕದಿನ ತಂಡ:
ಹಾರ್ದಿಕ್ ಪಾಂಡ್ಯ (ನಾಯಕ-ಮೊದಲ ಏಕದಿನ) ರೋಹಿತ್ ಶರ್ಮಾ (ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.
ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:
- ಮಾರ್ಚ್ 17- ಮೊದಲ ಏಕದಿನ ಪಂದ್ಯ (ವಾಂಖೆಡೆ ಸ್ಟೇಡಿಯಂ, ಮುಂಬೈ)
- ಮಾರ್ಚ್ 19- ಎರಡನೇ ಏಕದಿನ ಪಂದ್ಯ (ವೈಎಸ್ಆರ್ ಸ್ಟೇಡಿಯಂ, ವಿಶಾಖಪಟ್ಟಣಂ)
- ಮಾರ್ಚ್ 22- ಮೂರನೇ ಏಕದಿನ ಪಂದ್ಯ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)