IND vs AUS: ಭಾರತ- ಆಸ್ಟ್ರೇಲಿಯಾ ಕಾಳಗದಲ್ಲಿ ಯಾವ ತಂಡ ಮೇಲುಗೈ ಸಾಧಿಸಿದೆ ಗೊತ್ತಾ?

IND vs AUS Head to Head: ಇನ್ನು ಉಭಯ ತಂಡಗಳ ಮುಖಾಮುಖಿ ವರದಿಯನ್ನು ನೋಡುವುದಾದರೆ.. ಎರಡೂ ತಂಡಗಳು ಇಲ್ಲಿಯವರೆಗೆ 146 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಟೀಂ ಇಂಡಿಯಾ 54 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳನ್ನು ಗೆದ್ದು ಬೀಗಿದೆ.

IND vs AUS: ಭಾರತ- ಆಸ್ಟ್ರೇಲಿಯಾ ಕಾಳಗದಲ್ಲಿ ಯಾವ ತಂಡ ಮೇಲುಗೈ ಸಾಧಿಸಿದೆ ಗೊತ್ತಾ?
ಭಾರತ- ಆಸ್ಟ್ರೇಲಿಯಾImage Credit source: insidesport
Follow us
ಪೃಥ್ವಿಶಂಕರ
|

Updated on: Sep 19, 2023 | 10:28 AM

ರೋಹಿತ್ ಶರ್ಮಾ (Rohit Sharma) ನಾಯಕತ್ವದಲ್ಲಿ ಟೀಂ ಇಂಡಿಯಾ 2023 ರ ಏಷ್ಯಾಕಪ್‌ ಗೆದ್ದು ಬೀಗಿದೆ. ಇದೀಗ ತಂಡವು ತನ್ನದೇ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ (India vs Australia) 3 ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿದೆ. ಇದಕ್ಕಾಗಿ ಬಿಸಿಸಿಐ (BCCI) ಕೂಡ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ನಂತರ ರೋಹಿತ್ ಪಡೆ ತವರಿನಲ್ಲಿ ಏಕದಿನ ವಿಶ್ವಕಪ್ (ODI World Cup 2023) ಅನ್ನು ಆಡಬೇಕಾಗಿದೆ. ಹೀಗಾಗಿ ಟೀಂ ಇಂಡಿಯಾ ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಬೇಕೆಂಬ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ. ಇನ್ನು ಈ ಸರಣಿಗೆ ಬಿಸಿಸಿಐ 2 ತಂಡಗಳನ್ನು ಆಯ್ಕೆ ಮಾಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಕನ್ನಡಿಗ ರಾಹುಲ್ (KL Rahul) ತಂಡವನ್ನು ಮುನ್ನಡೆಸಲಿದ್ದು, ಮೂರನೇ ಪಂದ್ಯದ ನಾಯಕತ್ವವನ್ನು ಎಂದಿನಂತೆ ರೋಹಿತ್ ನಿರ್ವಹಿಸಲಿದ್ದಾರೆ.​

ಕಳೆದ ವಿಶ್ವಕಪ್ ನಂತರ ತಂಡಗಳ ಪ್ರದರ್ಶನ

ವಾಸ್ತವವಾಗಿ, 2019 ರಲ್ಲಿ ನಡೆದ ಕೊನೆಯ ಏಕದಿನ ವಿಶ್ವಕಪ್ ಅನ್ನು ಇಂಗ್ಲೆಂಡ್ ಆಯೋಜಿಸಿತ್ತು. ಆ ವಿಶ್ವಕಪ್‌ನಿಂದ ಇಲ್ಲಿಯವರೆಗೆ ಭಾರತ ತಂಡ ಮತ್ತು ಆಸ್ಟ್ರೇಲಿಯಾ ನಡುವೆ 3 ದ್ವಿಪಕ್ಷೀಯ ಏಕದಿನ ಸರಣಿಗಳು ನಡೆದಿವೆ. ಈ ಮೂರು ಸರಣಿಗಳ ಪೈಕಿ ಭಾರತ ಒಂದು ಸರಣಿಯನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ 2 ಸರಣಿಗಳನ್ನು ವಶಪಡಿಸಿಕೊಂಡಿದೆ.

ಮೂರು ಪಂದ್ಯಗಳಿಗೆ ಎರಡು ತಂಡ: ಟೀಂ ಇಂಡಿಯಾ ಆಯ್ಕೆಯಲ್ಲಿನ 4 ಪ್ರಮುಖ ಮುಖ್ಯಾಂಶಗಳಿವು

ಈ ಹಿನ್ನೆಲೆಯಲ್ಲಿ ಈ ನಾಲ್ಕನೇ ದ್ವಿಪಕ್ಷೀಯ ಏಕದಿನ ಸರಣಿಯನ್ನು ಒಂದು ವೇಳೆ ಭಾರತ ತಂಡ ಗೆದ್ದರೆ ಎರಡು ವಿಶ್ವಕಪ್‌ಗಳ ನಡುವಿನ ಏಕದಿನ ಸರಣಿಯಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಲಿವೆ. ಇದರರ್ಥ 2019 ಮತ್ತು 2023 ರ ವಿಶ್ವಕಪ್ ನಡುವಿನ ಒಟ್ಟು 4 ಏಕದಿನ ಸರಣಿಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಲಾ 2 ಸರಣಿಯನ್ನು ಗೆದ್ದು ಸಮಬಲ ಸಾಧಿಸಿದ್ದಂತ್ತಾಗುತ್ತದೆ.

ಉಭಯ ತಂಡಗಳ ಮುಖಾಮುಖಿ ವರದಿ

ಇನ್ನು ಉಭಯ ತಂಡಗಳ ಮುಖಾಮುಖಿ ವರದಿಯನ್ನು ನೋಡುವುದಾದರೆ.. ಎರಡೂ ತಂಡಗಳು ಇಲ್ಲಿಯವರೆಗೆ 146 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಟೀಂ ಇಂಡಿಯಾ 54 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳನ್ನು ಗೆದ್ದು ಬೀಗಿದೆ. ಉಳಿದಂತೆ 10 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ.

ಹಾಗೆಯೇ ಈ ಎರಡೂ ತಂಡಗಳು ಭಾರತದಲ್ಲಿ ಒಟ್ಟು 67 ಪಂದ್ಯಗಳನ್ನಾಡಿದ್ದು, ಇದರಲ್ಲಿ ಭಾರತ 30 ಪಂದ್ಯಗಳಲ್ಲಿ ಗೆದ್ದಿದ್ದರೆ, ಆಸ್ಟ್ರೇಲಿಯಾ 32 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. 5 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇದರರ್ಥ ಭಾರತದಲ್ಲೂ ಹಾಗೂ ಭಾರತದ ಹೊರಗೂ ಟೀಂ ಇಂಡಿಯಾದೆದುರು ಆಸ್ಟ್ರೇಲಿಯಾ ಮೇಲುಗೈ ಸಾಧಿಸಿರುವುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ಏಕದಿನ ಸರಣಿಯ ವೇಳಾಪಟ್ಟಿ:

  • ಮೊದಲ ಏಕದಿನ ಪಂದ್ಯ – 22 ಸೆಪ್ಟೆಂಬರ್ – ಮೊಹಾಲಿ
  • ಎರಡನೇ ಏಕದಿನ ಪಂದ್ಯ – 24 ಸೆಪ್ಟೆಂಬರ್ – ಇಂದೋರ್
  • ಮೂರನೇ ಏಕದಿನ ಪಂದ್ಯ- 27 ಸೆಪ್ಟೆಂಬರ್ – ರಾಜ್ಕೋಟ್

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ