ಏಷ್ಯಾಕಪ್ (Asia Cup 2023) ಚಾಂಪಿಯನ್ಸ್ ಟೀಮ್ ಇಂಡಿಯಾ, ಆಸ್ಟ್ರೇಲಿಯಾ (India vs Australia) ವಿರುದ್ಧದ ಏಕದಿನ ಸರಣಿಗೆ ಸಿದ್ಧವಾಗಿದೆ. ಕಾಂಗರೂ ಪಡೆ ವಿರುದ್ಧದ ಏಕದಿನ ಸರಣಿಗಾಗಿ ಬಿಸಿಸಿಐ, ಈಗಾಗಲೇ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 5ರಿಂದ ಭಾರತದಲ್ಲಿ ನಡೆಯೋ ಏಕದಿನ ವಿಶ್ವಕಪ್ಗೂ (ODI World Cup 2023) ಮುನ್ನ, ಅಂದರೆ ಸೆಪ್ಟೆಂಬರ್ 22ರಿಂದ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ವಿಶ್ವಕಪ್ ತಯಾರಿಗೆ ಉಭಯ ತಂಡಗಳಿಗೂ ಈ ಸರಣಿ ಅಂತ್ಯತ ಮಹತ್ವದ್ದಾಗಿದೆ. ಏಕೆಂದರೆ ಎರಡೂ ತಂಡಗಳಲ್ಲೂ ಇಂಜುರಿಯಿಂದ ಚೇತರಿಸಿಕೊಂಡು ಬಂದಿರುವ ಆಟಗಾರರ ದಂಡೆ ಇದೆ. ಹೀಗಾಗಿ ವಿಶ್ವಕಪ್ಗೆ ಬಲಿಷ್ಠ ಪಡೆಯನ್ನು ಸಿದ್ದಗೊಳಿಸಿಕೊಳ್ಳಲು ಈ ಸರಣಿ ಸಹಾಯಕವಾಗಲಿದೆ.
IND vs AUS: ಭಾರತ- ಆಸ್ಟ್ರೇಲಿಯಾ ಕಾಳಗದಲ್ಲಿ ಯಾವ ತಂಡ ಮೇಲುಗೈ ಸಾಧಿಸಿದೆ ಗೊತ್ತಾ?
ಭಾರತ
ಮೊದಲ ಎರಡು ಪಂದ್ಯಗಳಿಗೆ: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್.
ಮೂರನೇ ಏಕದಿನ ಪಂದ್ಯಕ್ಕೆ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ (ಫಿಟ್ ಆದರೆ) ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್.
ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:40 am, Tue, 19 September 23