
ಬೆಂಗಳೂರು (ಅ. 17): ಏಕದಿನ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡ (Indian Cricket Team) ಆಸ್ಟ್ರೇಲಿಯಾಕ್ಕೆ ತೆರಳಿದೆ. ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗುವ ಈ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ಸರಣಿಯಲ್ಲಿ ಆಡುವುದನ್ನು ಕಾಣಬಹುದು. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಏಳು ತಿಂಗಳ ವಿರಾಮದ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ. ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯ ಪಂದ್ಯಗಳು ಎಷ್ಟು ಗಂಟೆಗೆ ಪ್ರಾರಂಭವಾಗುತ್ತವೆ ಎಂಬುದು ಅನೇಕರಿಗೆ ತಿಳಿದಿಲ್ಲ. ಈ ಕುರಿತ ಮಾಹಿತಿ ಇಲ್ಲಿದೆ.
ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಭಾನುವಾರ (ಅಕ್ಟೋಬರ್ 19) ನಡೆಯಲಿದೆ.
ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಆಸ್ಟ್ರೇಲಿಯಾದ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.
India vs Australia: ಸ್ಟಾರ್ ಬ್ಯಾಟರ್ ಔಟ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI
ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ನೇರ ಪ್ರಸಾರ ಜಿಯೋಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.
ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಲಭ್ಯವಿರುತ್ತದೆ.
ಈ ಸರಣಿ ಮೂಲಕ ಶುಭ್ಮನ್ ಗಿಲ್ ಮೊದಲ ಬಾರಿಗೆ ಭಾರತದ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ. ಅವರು ಈ ಹಿಂದೆ ಟಿ20 ಮತ್ತು ಟೆಸ್ಟ್‌ಗಳಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿದ್ದಾರೆ, ಆದರೆ ಇದು ಏಕದಿನ ಪಂದ್ಯಗಳಲ್ಲಿ ಅವರಿಗೆ ಮೊದಲ ಅವಕಾಶವಾಗಿದೆ. ಮತ್ತೊಂದು ವಿಶೇಷ ಎಂದರೆ ಗಿಲ್ ನಾಯಕತ್ವದಡಿಯಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಹಿರಿಯ ಆಟಗಾರರು ಹೇಗೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂಬುದನ್ನು ನೋಡುವುದು ಆಸಕ್ತದಾಯಕವಾಗಿದೆ.
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ಸಿಂಗ್ ರಾಣಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕಾನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:14 am, Fri, 17 October 25