
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನಲ್ಲಿ ನಡೆಯುತ್ತಿದೆ. ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಗಿರುವ ಕಾರಣ ಈ ಪಂದ್ಯಕ್ಕೆ ಪಿಂಕ್ ಬಾಲ್ ಬಳಸಲಾಗುತ್ತಿದೆ. ಇನ್ನು ಭಾರತ ತಂಡವು ಪ್ರಸ್ತುತ 5-ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಕಾರಣ ಈಗ ಆ ಮುನ್ನಡೆಯನ್ನು 2-0 ಗೆ ಹೆಚ್ಚಿಸಲು ನೋಡುತ್ತಿದೆ. ಇತ್ತ ಆತಿಥೇಯ ಆಸ್ಟ್ರೇಲಿಯಾ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು 1-1 ರಿಂದ ಸಮಬಲಗೊಳಿಸಲು ಎದುರು ನೋಡುತ್ತಿದೆ. ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇದರ ಜೊತೆಗೆ ಎರಡು ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.
ಈ ಮೊದಲು ನಿರೀಕ್ಷಿಸಿದಂತೆ ಪಿಂಕ್ ಬಾಲ್ ಟೆಸ್ಟ್‌ಗೆ ಭಾರತ ತಂಡದಲ್ಲಿ ಬದಲಾವಣೆಗಳಿವೆ. ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ತಂಡದಲ್ಲಿ ಸ್ಥಾನ ಪಡೆದಿದ್ದರೆ, ದೇವದತ್ ಪಡಿಕ್ಕಲ್ ಹಾಗೂ ಧೃವ್ ಜುರೇಲ್ ತಂಡದಿಂದ ಹೊರಬಿದ್ದಿದ್ದಾರೆ. ರೋಹಿತ್ ತನ್ನ ಎರಡನೇ ಮಗುವಿನ ಜನನದ ಕಾರಣ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದರೆ, ಗಿಲ್ ಬೆರಳಿನ ಗಾಯದಿಂದಾಗಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದರು. ಇದೀಗ ಈ ಇಬ್ಬರು ತಂಡವನ್ನು ಕೂಡಿಕೊಂಡಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದಾರೆ. ಉಳಿದಂತೆ ಭಾರತ ತಂಡದ ಸ್ಪಿನ್ ವಿಭಾಗದಲ್ಲಿ ಮೂರನೇ ಬದಲಾವಣೆಯಾಗಿದ್ದು, ವಾಷಿಂಗ್ಟನ್ ಸುಂದರ್ ಬದಲಿಗೆ ಅಶ್ವಿನ್ ಸ್ಥಾನ ಪಡೆದಿದ್ದಾರೆ.
🚨 Toss Update from Adelaide 🚨
Captain Rohit Sharma has won the toss & #TeamIndia have elected to bat in the Pink-Ball Test in Adelaide.
Live ▶️ https://t.co/upjirQCmiV#AUSvIND pic.twitter.com/m8x4LrG3Nb
— BCCI (@BCCI) December 6, 2024
ಅಡಿಲೇಡ್‌ನಲ್ಲಿ ನಡೆದ ಕೊನೆಯ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಅಶ್ವಿನ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಕಳೆದ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಅಶ್ವಿನ್ 5 ವಿಕೆಟ್ ಪಡೆದಿದ್ದರು. ಅಡಿಲೇಡ್‌ನಲ್ಲಿ ಒಟ್ಟಾರೆಯಾಗಿ ನೋಡುವುದಾದರೆ, ಅಶ್ನಿನ್ 3 ಟೆಸ್ಟ್‌ಗಳನ್ನು ಆಡಿದ್ದು, ಅದರಲ್ಲಿ 16 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಅಂಕಿಅಂಶಗಳನ್ನು ಪರಿಗಣಿಸಿರುವ ತಂಡದ ಮ್ಯಾನೇಜ್ಮೆಂಟ್ ವಾಷಿಂಗ್ಟನ್ ಸುಂದರ್‌ಗಿಂತ ಅಶ್ವಿನ್‌ಗೆ ಆದ್ಯತೆ ನೀಡಿದೆ.
All set to go in Adelaide for the second #AUSvIND Test!
India win the toss and elect to bat 🏏#WTC25 📝 https://t.co/fFUEXlMWLW pic.twitter.com/ol1bvBYCrl
— ICC (@ICC) December 6, 2024
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ರವಿಚಂದ್ರನ್ ಅಶ್ವಿನ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:17 am, Fri, 6 December 24