India vs Australia: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ “ವಿಶೇಷ ಅತಿಥಿ”
India vs Australia: 3ನೇ ಪಂದ್ಯಕ್ಕೆ ಧರ್ಮಶಾಲದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಅಂತಿಮ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
India vs Australia: ಭಾರತ-ಆಸ್ಟ್ರೇಲಿಯಾ ನಡುವಣ 4 ಪಂದ್ಯಗಳ ಟೆಸ್ಟ್ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯವು ನಾಗ್ಪುರದ ವಿಧರ್ಭ ಕ್ರಿಕೆಟ್ ಸ್ಟೇಡಿಯಂ ನಡೆದರೆ, 2ನೇ ಪಂದ್ಯವು ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಜರುಗಲಿದೆ. ಹಾಗೆಯೇ 3ನೇ ಪಂದ್ಯಕ್ಕೆ ಧರ್ಮಶಾಲದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಅಂತಿಮ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ವಿಶೇಷ ಅತಿಥಿಯಾಗಿ ಖುದ್ದು ಪ್ರಧಾನಿ ನರೇಂದ್ರ ಮೋದಿ (PM Modi) ಆಸ್ಟ್ರೇಲಿಯಾ ಪಿಎಂ ಆ್ಯಂಟನಿ ಅಲ್ಬನೀಸ್ (Anthony Albanese) ಆಗಮಿಸಲಿದ್ದಾರೆ.
ಭಾರತ-ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯವು ಮಾರ್ಚ್ 9 ರಿಂದ 13 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಭಾರತದಲ್ಲಿ ಇರಲಿದ್ದಾರೆ. ಅವರೊಂದಿಗೆ ಪಿಎಂ ಮೋದಿ ಪಂದ್ಯ ವೀಕ್ಷಿಸಲು ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: Shubman Gill: 1 ಶತಕದೊಂದಿಗೆ 10 ದಾಖಲೆಗಳನ್ನು ನಿರ್ಮಿಸಿದ ಶುಭ್ಮನ್ ಗಿಲ್
ವಿಶೇಷ ಎಂದರೆ ಅಹಮದಾಬಾದ್ನ ಮೊಟೆರಾ ಸ್ಟೇಡಿಯಂಗೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣವಾದ ಬಳಿಕ ಪ್ರಧಾನಿಯವರು ಇದೇ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 4ನೇ ಪಂದ್ಯವು ರಂಗೇರಲಿದೆ.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:
- ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
- ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
- ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
- ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)
ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
Published On - 10:07 pm, Thu, 2 February 23