India vs Australia: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ “ವಿಶೇಷ ಅತಿಥಿ”

| Updated By: ಝಾಹಿರ್ ಯೂಸುಫ್

Updated on: Feb 02, 2023 | 10:57 PM

India vs Australia: 3ನೇ ಪಂದ್ಯಕ್ಕೆ ಧರ್ಮಶಾಲದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಅಂತಿಮ ಪಂದ್ಯವು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

India vs Australia: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಅತಿಥಿ
PM Modi - Team India
Follow us on

India vs Australia: ಭಾರತ-ಆಸ್ಟ್ರೇಲಿಯಾ ನಡುವಣ 4 ಪಂದ್ಯಗಳ ಟೆಸ್ಟ್ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯವು ನಾಗ್​ಪುರದ ವಿಧರ್ಭ ಕ್ರಿಕೆಟ್​ ಸ್ಟೇಡಿಯಂ ನಡೆದರೆ, 2ನೇ ಪಂದ್ಯವು ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಜರುಗಲಿದೆ. ಹಾಗೆಯೇ 3ನೇ ಪಂದ್ಯಕ್ಕೆ ಧರ್ಮಶಾಲದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಅಂತಿಮ ಪಂದ್ಯವು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ವಿಶೇಷ ಅತಿಥಿಯಾಗಿ ಖುದ್ದು ಪ್ರಧಾನಿ ನರೇಂದ್ರ ಮೋದಿ (PM Modi) ಆಸ್ಟ್ರೇಲಿಯಾ ಪಿಎಂ ಆ್ಯಂಟನಿ ಅಲ್ಬನೀಸ್ (Anthony Albanese) ಆಗಮಿಸಲಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯವು ಮಾರ್ಚ್ 9 ರಿಂದ 13 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಭಾರತದಲ್ಲಿ ಇರಲಿದ್ದಾರೆ. ಅವರೊಂದಿಗೆ ಪಿಎಂ ಮೋದಿ ಪಂದ್ಯ ವೀಕ್ಷಿಸಲು ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Shubman Gill: 1 ಶತಕದೊಂದಿಗೆ 10 ದಾಖಲೆಗಳನ್ನು ನಿರ್ಮಿಸಿದ ಶುಭ್​ಮನ್ ಗಿಲ್

ಇದನ್ನೂ ಓದಿ
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ವಿಶೇಷ ಎಂದರೆ ಅಹಮದಾಬಾದ್​ನ ಮೊಟೆರಾ ಸ್ಟೇಡಿಯಂಗೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣವಾದ ಬಳಿಕ ಪ್ರಧಾನಿಯವರು ಇದೇ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 4ನೇ ಪಂದ್ಯವು ರಂಗೇರಲಿದೆ.

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
  2. ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
  3. ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
  4. ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.

 

 

 

 

Published On - 10:07 pm, Thu, 2 February 23