India vs Australia: ಭಾರತ-ಆಸ್ಟ್ರೇಲಿಯಾ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

India vs Australia Practice Match: ಅಭ್ಯಾಸ ಪಂದ್ಯಗಳಲ್ಲೇ ಮೇಲುಗೈ ಸಾಧಿಸುವ ಮೂಲಕ ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳುವ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

India vs Australia: ಭಾರತ-ಆಸ್ಟ್ರೇಲಿಯಾ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?
India vs Australia
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 16, 2022 | 10:59 PM

T20 World Cup 2022: ಟಿ20 ವಿಶ್ವಕಪ್​ಗಾಗಿ ಭರ್ಜರಿ ಸಿದ್ದತೆಯಲ್ಲಿರುವ ಟೀಮ್ ಇಂಡಿಯಾ (Team India) ಸೋಮವಾರ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಐಸಿಸಿಯು ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಪ್ರತಿ ತಂಡಗಳಿಗೆ 2 ಅಭ್ಯಾಸ ಪಂದ್ಯಗಳನ್ನು ನಿಗದಿಪಡಿಸಿದ್ದು, ಅದರಂತೆ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳನ್ನು ಎದುರಿಸಲಿದೆ.

ಭಾರತ ತಂಡವು ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇದಕ್ಕೂ ಮುನ್ನ ಅಕ್ಟೋಬರ್ 17 ರಂದು ಆಸ್ಟ್ರೇಲಿಯಾ ಹಾಗೂ ಅಕ್ಟೋಬರ್ 19 ರಂದು ನ್ಯೂಜಿಲೆಂಡ್ ವಿರುದ್ದ ಪಂದ್ಯಗಳನ್ನಾಡಬೇಕಿದೆ.

ಈ ಎರಡೂ ತಂಡಗಳು ಟಿ20 ವಿಶ್ವಕಪ್​ನಲ್ಲಿ ಗ್ರೂಪ್-1 ನಲ್ಲಿರುವ ತಂಡಗಳು. ಅಂದರೆ ಟೀಮ್ ಇಂಡಿಯಾ ಗ್ರೂಪ್​-2 ನಲ್ಲಿದ್ದು, ಈ ತಂಡಗಳನ್ನು ಸೂಪರ್-12 ಸುತ್ತಿನಲ್ಲಿ ಎದುರಿಸುವುದಿಲ್ಲ. ಆದರೆ ಈ ತಂಡಗಳು ಸೆಮಿಫೈನಲ್ ಹಂತದಲ್ಲಿ ಟೀಮ್ ಇಂಡಿಯಾಗೆ ಎದುರಾಗಬಹುದು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಹೀಗಾಗಿ ಅಭ್ಯಾಸ ಪಂದ್ಯಗಳಲ್ಲೇ ಮೇಲುಗೈ ಸಾಧಿಸುವ ಮೂಲಕ ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳುವ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಅದರಲ್ಲೂ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ಸೋತಿರುವ ಟೀಮ್ ಇಂಡಿಯಾ ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ರೂಪಿಸಿಕೊಳ್ಳಲು ಈ ಎರಡು ಅಭ್ಯಾಸ ಪಂದ್ಯಗಳು ಸಹಕಾರಿ. ಹಾಗಾಗಿ ಟೀಮ್ ಇಂಡಿಯಾ ಪಾಲಿಗೆ ಮುಂದಿನ 2 ಅಭ್ಯಾಸ ಪಂದ್ಯಗಳು ಮಹತ್ವ ಪಡೆದುಕೊಂಡಿದೆ. ಈ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

  • ಭಾರತ-ಆಸ್ಟ್ರೇಲಿಯಾ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ ಯಾವಾಗ ನಡೆಯಲಿದೆ?

ಈ ಪಂದ್ಯವು ಅಕ್ಟೋಬರ್ 17 ಸೋಮವಾರ ಬ್ರಿಸ್ಬೇನ್​ನ ಗಾಬಾ ಸ್ಟೇಡಿಯಂನಲ್ಲಿ ನಡೆಯಲಿದೆ.

  • ಈ ಅಭ್ಯಾಸ ಪಂದ್ಯವು ಎಷ್ಟು ಗಂಟೆಗೆ ಶುರುವಾಗಲಿದೆ?

ಈ ಪಂದ್ಯವು ಸೋಮವಾರ ಬೆಳಿಗ್ಗೆ 9:30 (IST) ಕ್ಕೆ ಪ್ರಾರಂಭವಾಗುತ್ತದೆ.

  • ಈ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಈ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಚಾನೆಲ್​ಗಳಲ್ಲಿ ಇರಲಿದೆ. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ Dinsey+Hotstar ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.

ಟಿ20 ವಿಶ್ವಕಪ್ ಟೀಮ್ ಇಂಡಿಯಾ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ:

  • ಅಕ್ಟೋಬರ್-17: ಭಾರತ vs ಆಸ್ಟ್ರೇಲಿಯಾ- ಗಾಬಾ ಸ್ಟೇಡಿಯಂ
  • ಅಕ್ಟೋಬರ್-19: ಭಾರತ vs ನ್ಯೂಜಿಲೆಂಡ್- ಗಾಬಾ ಸ್ಟೇಡಿಯಂ

ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಆಸ್ಟ್ರೇಲಿಯಾ ತಂಡ ಹೀಗಿದೆ:

ಆರೋನ್ ಫಿಂಚ್ (ನಾಯಕ), ಪ್ಯಾಟ್ ಕಮ್ಮಿನ್ಸ್ (ಉಪನಾಯಕ), ಆಷ್ಟನ್ ಅಗರ್, ಟಿಮ್ ಡೇವಿಡ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಆ್ಯಡಂ ಝಂಪಾ

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ