AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹಿಟ್​ಮ್ಯಾನ್ ಇಸ್ ಬ್ಯಾಕ್: ಆಸ್ಟ್ರೇಲಿಯಾ ವಿರುದ್ದ ಅಬ್ಬರಿಸಿದ ರೋಹಿತ್ ಶರ್ಮಾ

T20 World Cup 2021: ಆಸ್ಟ್ರೇಲಿಯಾ 8 ಬೌಲರುಗಳನ್ನು ಬಳಸಿದರೂ ಹಿಟ್​ಮ್ಯಾನ್​ನನ್ನು ಔಟ್ ಮಾಡಲಾಗಲಿಲ್ಲ ಎಂಬುದು ವಿಶೇಷ. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾದ ಆರಂಭಿಕರ ಚಿಂತೆ ದೂರವಾಗಿದೆ.

Rohit Sharma: ಹಿಟ್​ಮ್ಯಾನ್ ಇಸ್ ಬ್ಯಾಕ್: ಆಸ್ಟ್ರೇಲಿಯಾ ವಿರುದ್ದ ಅಬ್ಬರಿಸಿದ ರೋಹಿತ್ ಶರ್ಮಾ
ಭಾರತದ ಪರ ಅತೀ ಹೆಚ್ಚು ಟಿ20 ಪಂದ್ಯಗಳನ್ನಾಡಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್​ಮ್ಯಾನ್​ 111 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಅಷ್ಟೇ ಅಲ್ಲದೆ ಭಾರತದ ಪರ 100 ಟಿ20 ಆಡಿದ ಏಕೈಕ ಆಟಗಾರ ಎಂಬ ದಾಖಲೆ ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿದೆ.
TV9 Web
| Updated By: ಝಾಹಿರ್ ಯೂಸುಫ್|

Updated on: Oct 20, 2021 | 7:03 PM

Share

ಟಿ20 ವಿಶ್ವಕಪ್​ನಲ್ಲಿ (T20 World Cup 2021) ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಬುಧವಾರ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ಮುಖಾಮುಖಿಯಾಗಿತ್ತು. ಹಂಗಾಮಿ ನಾಯಕ ರೋಹಿತ್ ಶರ್ಮಾ (Rohit Sharma) ಮುನ್ನಡೆಸಿದ ಈ ಪಂದ್ಯದಲ್ಲಿ ಭಾರತ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಆಸೀಸ್ ನಾಯಕ ಆರೋನ್ ಫಿಂಚ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್​ನಲ್ಲಿ 5 ವಿಕೆಟ್​ ನಷ್ಟಕ್ಕೆ 152 ರನ್​ಗಳಿಸಿತು. ಈ ಸಾಧಾರಣ ಸವಾಲನ್ನು ಬೆನ್ನತ್ತುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಹಿಟ್​ಮ್ಯಾನ್ ರೋಹಿತ್ ಶರ್ಮಾ ಎಂಬುದು ವಿಶೇಷ.

ಹೌದು, ಐಪಿಎಲ್​ನ ದ್ವಿತಿಯಾರ್ಧದಲ್ಲಿ ರನ್​ ಬರ ಎದುರಿಸಿದ್ದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ದದ ಪಂದ್ಯದ ಮೂಲಕ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಅದರಲ್ಲೂ ಅಬ್ಬರ ಬ್ಯಾಟಿಂಗ್ ಝಲಕ್ ತೋರಿಸುವ ಪರೋಕ್ಷವಾಗಿ ಎದುರಾಳಿ ತಂಡಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ. ಮಿಚೆಲ್ ಸ್ಟಾರ್ಕ್​, ಪ್ಯಾಟ್ ಕಮಿನ್ಸ್​, ಆ್ಯಡಂ ಝಂಪಾ, ಕೇನ್​ ರಿಚರ್ಡ್ಸನ್​ ಸೇರಿದಂತೆ ಪ್ರಮುಖ ಬೌಲರುಗಳನ್ನು ನಿರಾಯಾಸವಾಗಿ ಎದುರಿಸಿದ ರೋಹಿತ್ ಶರ್ಮಾ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕ ಕೂಡ ಆರ್ಭಟ ಮುಂದುವರೆಸಿದ ಹಿಟ್​ಮ್ಯಾನ್ 3 ಭರ್ಜರಿ ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 41 ಎಸೆತಗಳಲ್ಲಿ 60 ರನ್​ ಬಾರಿಸಿದರು.

146.34 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸುವ ಮೂಲಕ ಹಳೆಯ ಖದರ್ ತೋರಿಸಿದ ರೋಹಿತ್ ಶರ್ಮಾ 60 ರನ್​ಗಳಿಸಿ ರಿಟೆರ್ಡ್​ ಆಗಿ ಹೊರನಡೆದರು. ಅಂದರೆ ಆಸ್ಟ್ರೇಲಿಯಾ 8 ಬೌಲರುಗಳನ್ನು ಬಳಸಿದರೂ ಹಿಟ್​ಮ್ಯಾನ್​ನನ್ನು ಔಟ್ ಮಾಡಲಾಗಲಿಲ್ಲ ಎಂಬುದು ವಿಶೇಷ. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾದ ಆರಂಭಿಕರ ಚಿಂತೆ ದೂರವಾಗಿದೆ. ಒಂದೆಡೆ ಕೆಎಲ್ ರಾಹುಲ್ ಭರ್ಜರಿ ಫಾರ್ಮ್​ನಲ್ಲಿದ್ದು, ಮತ್ತೊಂದು ರೋಹಿತ್ ಶರ್ಮಾ ಕೂಡ ಭರ್ಜರಿ ಬ್ಯಾಟಿಂಗ್ ಮೂಲಕ ಫಾರ್ಮ್​ಗೆ ಮರಳುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಅಕ್ಟೋಬರ್ 24 ರಂದು ನಡೆಯಲಿರುವ ಪಾಕ್​ ವಿರುದ್ದದ ಮೊದಲ ಪಂದ್ಯದಲ್ಲಿ ರೋಹಿತ್-ರಾಹುಲ್ ಜೋಡಿ ಅಬ್ಬರಿಸುವುದನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: T20 World Cup 2021: ಟಿ20 ಕ್ರಿಕೆಟ್​ನಲ್ಲಿ ನಂಬರ್ 1 ಬ್ಯಾಟರ್ ಯಾರು ಗೊತ್ತಾ​?

ಇದನ್ನೂ ಓದಿ:T20 World Cup 2021: ಟಿ20 ವಿಶ್ವಕಪ್ ಗೆದ್ದವರಿಗೆ ಸಿಗೋ ಹಣವೆಷ್ಟು? ಸೋತರೆ ಸಿಗೋದೆಷ್ಟು? 

ಇದನ್ನೂ ಓದಿ: T20 World Cup Winners: ಟಿ20 ವಿಶ್ವಕಪ್​ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ

(India vs Australia: Rohit Sharma brings up quickfire fifty)

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು