ಟಿ20 ವಿಶ್ವಕಪ್ನಲ್ಲಿ (T20 World Cup 2021) ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಬುಧವಾರ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ಮುಖಾಮುಖಿಯಾಗಿತ್ತು. ಹಂಗಾಮಿ ನಾಯಕ ರೋಹಿತ್ ಶರ್ಮಾ (Rohit Sharma) ಮುನ್ನಡೆಸಿದ ಈ ಪಂದ್ಯದಲ್ಲಿ ಭಾರತ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಆಸೀಸ್ ನಾಯಕ ಆರೋನ್ ಫಿಂಚ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ಗಳಿಸಿತು. ಈ ಸಾಧಾರಣ ಸವಾಲನ್ನು ಬೆನ್ನತ್ತುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಹಿಟ್ಮ್ಯಾನ್ ರೋಹಿತ್ ಶರ್ಮಾ ಎಂಬುದು ವಿಶೇಷ.
ಹೌದು, ಐಪಿಎಲ್ನ ದ್ವಿತಿಯಾರ್ಧದಲ್ಲಿ ರನ್ ಬರ ಎದುರಿಸಿದ್ದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ದದ ಪಂದ್ಯದ ಮೂಲಕ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಅದರಲ್ಲೂ ಅಬ್ಬರ ಬ್ಯಾಟಿಂಗ್ ಝಲಕ್ ತೋರಿಸುವ ಪರೋಕ್ಷವಾಗಿ ಎದುರಾಳಿ ತಂಡಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ. ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ಆ್ಯಡಂ ಝಂಪಾ, ಕೇನ್ ರಿಚರ್ಡ್ಸನ್ ಸೇರಿದಂತೆ ಪ್ರಮುಖ ಬೌಲರುಗಳನ್ನು ನಿರಾಯಾಸವಾಗಿ ಎದುರಿಸಿದ ರೋಹಿತ್ ಶರ್ಮಾ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕ ಕೂಡ ಆರ್ಭಟ ಮುಂದುವರೆಸಿದ ಹಿಟ್ಮ್ಯಾನ್ 3 ಭರ್ಜರಿ ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 41 ಎಸೆತಗಳಲ್ಲಿ 60 ರನ್ ಬಾರಿಸಿದರು.
146.34 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸುವ ಮೂಲಕ ಹಳೆಯ ಖದರ್ ತೋರಿಸಿದ ರೋಹಿತ್ ಶರ್ಮಾ 60 ರನ್ಗಳಿಸಿ ರಿಟೆರ್ಡ್ ಆಗಿ ಹೊರನಡೆದರು. ಅಂದರೆ ಆಸ್ಟ್ರೇಲಿಯಾ 8 ಬೌಲರುಗಳನ್ನು ಬಳಸಿದರೂ ಹಿಟ್ಮ್ಯಾನ್ನನ್ನು ಔಟ್ ಮಾಡಲಾಗಲಿಲ್ಲ ಎಂಬುದು ವಿಶೇಷ. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಟೀಮ್ ಇಂಡಿಯಾದ ಆರಂಭಿಕರ ಚಿಂತೆ ದೂರವಾಗಿದೆ. ಒಂದೆಡೆ ಕೆಎಲ್ ರಾಹುಲ್ ಭರ್ಜರಿ ಫಾರ್ಮ್ನಲ್ಲಿದ್ದು, ಮತ್ತೊಂದು ರೋಹಿತ್ ಶರ್ಮಾ ಕೂಡ ಭರ್ಜರಿ ಬ್ಯಾಟಿಂಗ್ ಮೂಲಕ ಫಾರ್ಮ್ಗೆ ಮರಳುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಅಕ್ಟೋಬರ್ 24 ರಂದು ನಡೆಯಲಿರುವ ಪಾಕ್ ವಿರುದ್ದದ ಮೊದಲ ಪಂದ್ಯದಲ್ಲಿ ರೋಹಿತ್-ರಾಹುಲ್ ಜೋಡಿ ಅಬ್ಬರಿಸುವುದನ್ನು ನಿರೀಕ್ಷಿಸಬಹುದು.
ಇದನ್ನೂ ಓದಿ: T20 World Cup 2021: ಟಿ20 ಕ್ರಿಕೆಟ್ನಲ್ಲಿ ನಂಬರ್ 1 ಬ್ಯಾಟರ್ ಯಾರು ಗೊತ್ತಾ?
ಇದನ್ನೂ ಓದಿ:T20 World Cup 2021: ಟಿ20 ವಿಶ್ವಕಪ್ ಗೆದ್ದವರಿಗೆ ಸಿಗೋ ಹಣವೆಷ್ಟು? ಸೋತರೆ ಸಿಗೋದೆಷ್ಟು?
ಇದನ್ನೂ ಓದಿ: T20 World Cup Winners: ಟಿ20 ವಿಶ್ವಕಪ್ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ
(India vs Australia: Rohit Sharma brings up quickfire fifty)