AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸೆಮಿಫೈನಲ್ ಕಾಳಗಕ್ಕೆ ಮಳೆ ಅಡ್ಡಿ? ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

India vs Australia Semifinal: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ ಮಾರ್ಚ್ 4 ರಂದು ದುಬೈನಲ್ಲಿ ನಡೆಯಲಿದೆ. ದುಬೈ ಪಿಚ್ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿದೆ. ಪಂದ್ಯದ ದಿನದಂದು ಶೇ. 10 ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

IND vs AUS: ಸೆಮಿಫೈನಲ್ ಕಾಳಗಕ್ಕೆ ಮಳೆ ಅಡ್ಡಿ? ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
ಭಾರತ- ಆಸ್ಟ್ರೇಲಿಯಾ
ಪೃಥ್ವಿಶಂಕರ
|

Updated on: Mar 03, 2025 | 10:52 PM

Share

ಚಾಂಪಿಯನ್ಸ್ ಟ್ರೋಫಿಯ (Champions Trophy 2025)  ಸೆಮಿಫೈನಲ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವೆ ನಡೆಯಲಿದೆ. ಎರಡೂ ತಂಡಗಳು ಇಲ್ಲಿಯವರೆಗೆ ಟೂರ್ನಿಯಲ್ಲಿ ಅಜೇಯವಾಗಿವೆ. ಭಾರತ ಆಡಿದ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆಸ್ಟ್ರೇಲಿಯಾ ಒಂದು ಪಂದ್ಯ ಗೆದ್ದಿದ್ದು, ಎರಡು ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಗುಂಪು ಹಂತದಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿದರೂ, ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ದಾಖಲೆ ಉತ್ತಮವಾಗಿಲ್ಲದಿರುವುದು ಅಭಿಮಾನಿಗಳ ಅತಂಕಕ್ಕೆ ಕಾರಣವಾಗಿದೆ. ಆದಾಗ್ಯೂ, ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ, ಆಸ್ಟ್ರೇಲಿಯಾವನ್ನು ಸೋಲಿಸಿರುವುದು ತಂಡದ ಆತ್ಮಸ್ಥೈರ್ಯವನ್ನು ಇಮ್ಮಡಿಗೊಳಿಸಿದೆ.

ಪಿಚ್ ವರದಿ

ಚಾಂಪಿಯನ್ಸ್ ಟ್ರೋಫಿಯಲ್ಲಿ ದುಬೈನಲ್ಲಿ ನಡೆದ ಕಳೆದ 3 ಪಂದ್ಯಗಳಲ್ಲಿ ಸ್ಪಿನ್ನರ್‌ಗಳ ಪ್ರಾಬಲ್ಯ ಕಂಡುಬಂದಿದೆ. ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಆಟದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದಾಗ್ಯೂ, ತಂಡಗಳು ಗುರಿಗಳನ್ನು ಬೆನ್ನಟ್ಟುವಾಗ ಪರಿಸ್ಥಿತಿ ಸ್ವಲ್ಪ ಉತ್ತಮವಾಗಿ ಕಾಣುತ್ತದೆ. ನ್ಯೂಜಿಲೆಂಡ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಭಾರತದ ಸ್ಪಿನ್ನರ್‌ಗಳು ಇಲ್ಲಿ 9 ವಿಕೆಟ್‌ಗಳನ್ನು ಕಬಳಿಸಿದ್ದರು. ಹೀಗಾಗಿ ಸೆಮಿಫೈನಲ್‌ನಲ್ಲೂ ಸ್ಪಿನ್ನರ್‌ಗಳ ಪ್ರಾಬಲ್ಯವನ್ನು ಕಾಣಬಹುದು. ದುಬೈನಲ್ಲಿ 270 ಕ್ಕಿಂತ ಹೆಚ್ಚು ರನ್​ಗಳನ್ನು ಬೆನ್ನಟ್ಟುವುದು ಸುಲಭವಲ್ಲ. ಈ ಮೈದಾನವು ರನ್ ಚೇಸ್‌ಗೆ ಹೆಸರುವಾಸಿಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ದುಬೈನಲ್ಲಿ ಟಾಸ್ ಗೆದ್ದ ತಂಡವು ಮೊದಲು ಫೀಲ್ಡಿಂಗ್ ಮಾಡಲು ಬಯಸುತ್ತದೆ.

ಹವಾಮಾನ ವರದಿ

ಹವಾಮಾನ ವರದಿಯ ಪ್ರಕಾರ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ತೀರ ಕಡಿಮೆ. ಆದರೆ ಮಂಗಳವಾರ ಶೇ. 10 ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಗಂಟೆಗೆ 27 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು, ಹವಾಮಾನದಲ್ಲಿ ಆರ್ದ್ರತೆಯು ಶೇಕಡಾ 34 ರವರೆಗೆ ಇರುತ್ತದೆ.

ಇದನ್ನೂ ಓದಿ: IND vs AUS: ಸೆಮಿಫೈನಲ್‌ ಪಂದ್ಯಕ್ಕೆ ಭಾರತ ತಂಡದಲ್ಲಾಗುತ್ತಾ ಬದಲಾವಣೆ? ಯಾರು ಇನ್, ಯಾರು ಔಟ್?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಯಾವಾಗ ನಡೆಯಲ್ಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಮಾರ್ಚ್​ 4 ರ ಮಂಗಳವಾರದಂದು ನಡೆಯಲ್ಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಎಲ್ಲಿ ನಡೆಯಲ್ಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ದುಬೈನ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. ಪಂದ್ಯದ ಟಾಸ್ 2 ಗಂಟೆಗೆ ನಡೆಯಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬೇಕು?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ