AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ vs ಆಸ್ಟ್ರೇಲಿಯಾ 2ನೇ ಟಿ20 ಪಂದ್ಯ ಯಾವಾಗ?

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಇದೀಗ ಉಭಯ ತಂಡಗಳು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಅತ್ತ ಮೊದಲ ಪಂದ್ಯ ರದ್ದಾದ ಕಾರಣ ಈ ಸರಣಿಯನ್ನು ಗೆಲ್ಲಲು 3 ಮ್ಯಾಚ್​ಗಳಲ್ಲಿ ಜಯ ಸಾಧಿಸಲೇಬೇಕು.

IND vs AUS: ಭಾರತ vs  ಆಸ್ಟ್ರೇಲಿಯಾ 2ನೇ ಟಿ20 ಪಂದ್ಯ ಯಾವಾಗ?
Team India
ಝಾಹಿರ್ ಯೂಸುಫ್
|

Updated on:Oct 30, 2025 | 9:26 AM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟಿ20 ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಕ್ಯಾನ್​ಬೆರಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 9.4 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 97 ರನ್​ ಕಲೆಹಾಕಿತ್ತು. ಈ ವೇಳೆ ಧಾರಾಕಾರವಾಗಿ ಮಳೆ ಸುರಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಇದೀಗ ಉಭಯ ತಂಡಗಳು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಭಾರತ vs ಆಸ್ಟ್ರೇಲಿಯಾ 2ನೇ ಟಿ20 ಪಂದ್ಯ ಯಾವಾಗ?

ಇಂಡೊ-ಆಸೀಸ್ ನಡುವಣ ದ್ವಿತೀಯ ಟಿ20 ಪಂದ್ಯವು ನಾಳೆ (ಅ.31) ನಡೆಯಲಿದೆ. ಈ ಪಂದ್ಯಕ್ಕೆ ಮೆಲ್ಬೋರ್ನ್​ನ ಎಂಸಿಜಿ ಕ್ರಿಕೆಟ್ ಮೈದಾನ ಆತಿಥ್ಯವಹಿಸಲಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.45 ಕ್ಕೆ ಶುರುವಾಗಲಿದೆ. ಇದಕ್ಕೂ ಮುನ್ನ 1.15 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್​ ಹಾಗೂ ವೆಬ್​ಸೈಟ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಇದನ್ನೂ ಓದಿ: ಶ್ರೇಯಸ್ ಅಯ್ಯರ್ ಗಾಯದಿಂದಾಗಿ ಟೀಮ್ ಇಂಡಿಯಾಗೆ ಹಿನ್ನಡೆ..!

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್ (ಮೊದಲ ಮೂರು ಪಂದ್ಯಗಳಿಗೆ ಮಾತ್ರ), ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್ (ಕೊನೆಯ 3 ಪಂದ್ಯಗಳಿಗೆ ಮಾತ್ರ), ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ), ನಾಥನ್ ಎಲ್ಲಿಸ್, ಜೋಶ್ ಹೇಝಲ್​ವುಡ್ (ಮೊದಲೆರಡು ಪಂದ್ಯಗಳಿಗೆ ಮಾತ್ರ), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್ (ಕೊನೆಯ ಮೂರು ಪಂದ್ಯಗಳಿಗೆ ಮಾತ್ರ), ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ತನ್ವೀರ್ ಸಂಘ, ಆ್ಯಡಂ ಝಂಪಾ.

Published On - 9:25 am, Thu, 30 October 25