IND vs AUS: ಭಾರತ vs ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ 2024ರ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

IND vs AUS: ಭಾರತ vs ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ
Ind Vs Aus

Updated on: Oct 26, 2025 | 9:24 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದ್ದಾರೆ. ಅಕ್ಟೋಬರ್ 29 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ…

ಭಾರತ ಮತ್ತು ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ:

  • ಅಕ್ಟೋಬರ್ 29: ಮೊದಲ ಟಿ20 ಪಂದ್ಯ – ಮನುಕಾ ಓವಲ್, ಕ್ಯಾನ್‌ಬೆರಾ
  • ಅಕ್ಟೋಬರ್ 31: ಎರಡನೇ ಟಿ20 ಪಂದ್ಯ– ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ನವೆಂಬರ್ 2,: ಮೂರನೇ ಟಿ20 ಪಂದ್ಯ– ಬೆಲ್ಲೆರಿವ್ ಓವಲ್, ಹೋಬಾರ್ಟ್
  • ನವೆಂಬರ್ 6: ನಾಲ್ಕನೇ ಟಿ20 ಪಂದ್ಯ – ಗೋಲ್ಡ್ ಕೋಸ್ಟ್ ಕ್ರೀಡಾಂಗಣ, ಕ್ಯಾರಾರಾ
  • ನವೆಂಬರ್ 8: ಐದನೇ ಟಿ20 ಪಂದ್ಯ– ದಿ ಗಬ್ಬಾ, ಬ್ರಿಸ್ಬೇನ್

ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಭಾರತೀಯ ಕಾಲಮಾನ ಮಧ್ಯಾಹ್ನ 1.45 ರಿಂದ ಶುರುವಾಗಲಿದೆ. ಇನ್ನು ಟಾಷ್ ಪ್ರಕ್ರಿಯೆ ಮಧ್ಯಾಹ್ನ 1.15 ಕ್ಕೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್​ ಹಾಗೂ ವೆಬ್​ಸೈಟ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಇದನ್ನೂ ಓದಿ: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್ (ಮೊದಲ ಮೂರು ಪಂದ್ಯಗಳಿಗೆ ಮಾತ್ರ), ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್ (ಕೊನೆಯ 3 ಪಂದ್ಯಗಳಿಗೆ ಮಾತ್ರ), ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ), ನಾಥನ್ ಎಲ್ಲಿಸ್, ಜೋಶ್ ಹೇಝಲ್​ವುಡ್ (ಮೊದಲೆರಡು ಪಂದ್ಯಗಳಿಗೆ ಮಾತ್ರ), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್ (ಕೊನೆಯ ಮೂರು ಪಂದ್ಯಗಳಿಗೆ ಮಾತ್ರ), ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.