2023 ರ ಟಿ20 ವಿಶ್ವಕಪ್‌ನ (Women’s T20 World Cup 2023) ಮೊದಲ ಸೆಮಿಫೈನಲ್ ಪಂದ್ಯ ಇಂದು ಅಂದರೆ, ಗುರುವಾರ ನಡೆಯಲಿದ್ದು, ಈ ಬಿಗ್ ಫೈಟ್ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ((India Vs Australia)) ತಂಡಗಳು ಮುಖಾಮುಖಿಯಾಗುತ್ತಿವೆ. ಕಳೆದ ವರ್ಷದ ಫೈನಲ್‌ನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಆಸ್ಟ್ರೇಲಿಯಾ, ಭಾರತವನ್ನು ಸೋಲಿಸಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈಗ ಭಾರತ ತಂಡ ಫೈನಲ್‌ಗೆ ಟಿಕೆಟ್ ಕಾಯ್ದಿರಿಸಬೇಕಾದರೆ ಆಸ್ಟ್ರೇಲಿಯಾದಂತಹ ಪ್ರಬಲ ತಡೆಗೋಡೆಯನ್ನು ದಾಟಬೇಕಾಗಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವು ಗ್ರೂಪ್ ಹಂತದಲ್ಲಿ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿದೆ. ತಂಡಕ್ಕೆ ಸಿಕ್ಕ ಏಕೈಕ ಸೋಲು ಸಿಕ್ಕಿದ್ದು ಇಂಗ್ಲೆಂಡ್‌ನಿಂದ. ಇತ್ತ ಮೆಗ್ ಲ್ಯಾನಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡವು ಟಿ20 ಪಂದ್ಯಗಳಲ್ಲಿ ಸತತ 22 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ತಲುಪಿದೆ. ಹೀಗಾಗಿ ಇಂದಿನ ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.
IND vs AUS: ಗೆದ್ದವರಿಗೆ ಫೈನಲ್ ಟಿಕೆಟ್; ಬಲಿಷ್ಠ ಆಸೀಸ್ ವಿರುದ್ಧ ಭಾರತದ ಸಂಭಾವ್ಯ ತಂಡ ಹೀಗಿದೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ಯಾವಾಗ ನಡೆಯಲಿದೆ?
ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ಫೆಬ್ರವರಿ 23 ಗುರುವಾರ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್ ಪಂದ್ಯ ಸಂಜೆ 6.30ಕ್ಕೆ (ಭಾರತೀಯ ಕಾಲಮಾನ) ಆರಂಭವಾಗಲಿದೆ. ಪಂದ್ಯದ ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ 6 ಗಂಟೆಗೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?
ಉಭಯ ತಂಡಗಳ ನಡುವಿನ ಈ ಸೆಮಿಫೈನಲ್ ಪಂದ್ಯವು ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎಲ್ಲಾ ಟಿ20 ವಿಶ್ವಕಪ್ ಪಂದ್ಯಗಳ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೋಡಬಹುದು.
ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
T20 ವಿಶ್ವಕಪ್ 2023 ರ ಎಲ್ಲಾ ಪಂದ್ಯಗಳ ಲೈವ್ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು Hotstar ನಲ್ಲಿ ವೀಕ್ಷಿಸಬಹುದು.
ಭಾರತ ತಂಡ- ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ರಿಚಾ ಘೋಷ್, ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ರೇಣುಕಾ ಠಾಕೂರ್, ಅಂಜಲಿ ಸರವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್‌ವಾಡ್
ಆಸ್ಟ್ರೇಲಿಯಾ ತಂಡ- ಮೆಗ್ ಲ್ಯಾನಿಂಗ್ (ನಾಯಕಿ), ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಡಾರ್ಸಿ ಬ್ರೌನ್, ಆಶ್ಲೀಗ್ ಗಾರ್ಡ್ನರ್, ಕಿಮ್ ಗಾರ್ತ್, ಹೀದರ್ ಗ್ರಹಾಂ, ಗ್ರೇಸ್ ಹ್ಯಾರಿಸ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ತಾಲಿಯಾ ಮೆಕ್‌ಗ್ರಾತ್, ಬೆತ್ ಮೂನಿ, ಎಲಿಸ್ಸಾ ಪೆರಿ, ಮೇಗನ್ ಶುಟ್, ಅನ್ನಾಬೆಲ್ ಸದರ್ಲ್ಯಾಂಡ್, ಜಾರ್ಜಿಯಾ ವೇರ್ಹ್ಯಾಮ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:20 am, Thu, 23 February 23