IND vs AUS 2nd T20I: ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಮಾಹಿತಿ

When and Where India vs Australia 2nd T20I: ಡಾ. ವೈಎಸ್. ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 2 ವಿಕೆಟ್​ಗಳ ಜಯ ಸಾಧಿಸಿ ಇದೀಗ ಎರಡನೇ ಟಿ20 ಪಂದ್ಯದ ಮೇಲೆ ಕಣ್ಣಿಟ್ಟಿದೆ. ಹಾಗಾದರೆ ದ್ವಿತೀಯ ಟಿ20 ಯಾವಾಗ?, ಎಲ್ಲಿ ನಡೆಯಲಿದೆ?. ಇಲ್ಲಿದೆ ನೋಡಿ ಮಾಹಿತಿ.

IND vs AUS 2nd T20I: ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಮಾಹಿತಿ
IND vs AUS 2nd T20I

Updated on: Nov 24, 2023 | 9:45 AM

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು ಭಾರತ (India vs Australia) ಭರ್ಜರಿ ಆಗಿ ಆರಂಭಿಸಿದೆ. ಡಾ. ವೈಎಸ್. ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಸೂರ್ಯ, ಇಶಾನ್ ಕಿಶನ್ ಹಾಗೂ ರಿಂಕು ಸಿಂಗ್ ಬೊಂಬಾಟ್ ಬ್ಯಾಟಿಂಗ್ ನಡೆಸಿದರು. ಇದೀಗ ಭಾರತ ಎರಡನೇ ಟಿ20 ಪಂದ್ಯದ ಮೇಲೆ ಕಣ್ಣಿಟ್ಟಿದೆ. ಹಾಗಾದರೆ ದ್ವಿತೀಯ ಟಿ20 ಯಾವಾಗ?, ಎಲ್ಲಿ ನಡೆಯಲಿದೆ?. ಇಲ್ಲಿದೆ ನೋಡಿ ಮಾಹಿತಿ.

ಭಾರತ-ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯ ಯಾವಾಗ?

ನವೆಂಬರ್ 26 ಭಾನುವಾರದಂದು ಭಾರತ vs ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ನಡೆಯಲಿದೆ.

ಇದನ್ನೂ ಓದಿ
ಫಿನಿಶರ್ ರಿಂಕು ಸಿಂಗ್ ಸಿಡಿಸಿದ ಸಿಕ್ಸ್ ನೋಡಲು ಮಿಸ್ ಮಾಡಿದ್ರಾ?: VIDEO
ರೋಚಕ ಗೆಲುವಿನ ಬಳಿಕ ನಾಯಕ ಸೂರ್ಯಕುಮಾರ್ ಯಾದವ್ ಆಡಿದ ಮಾತುಗಳೇನು ನೋಡಿ
ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ..!
ಮತ್ತೆ ಐಪಿಎಲ್ ಅಖಾಡಕ್ಕೆ ‘ದಿ ವಾಲ್’? ಯಾವ ತಂಡ ಸೇರ್ತಾರೆ ಗುರು ದ್ರಾವಿಡ್?

ಭಾರತ-ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯ ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯ ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

IPL 2024: ಚೆನ್ನೈ ತಂಡಕ್ಕೆ ಬಿಗ್ ಶಾಕ್; ಐಪಿಎಲ್​ನಿಂದ ಹಿಂದೆ ಸರಿದ 16.25 ಕೋಟಿ ಬೆಲೆಯ ಪ್ಲೇಯರ್..!

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ vs ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್‌ಸ್ಟ್ರೀಮ್ ಮಾಡಲಾಗುತ್ತದೆ. ಅಭಿಮಾನಿಗಳು Sports18 ನೆಟ್‌ವರ್ಕ್‌ ಮೂಲಕ ಟಿವಿಯಲ್ಲಿ ವೀಕ್ಷಿಸಬಹುದು.

ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಉಳಿದ ಪಂದ್ಯ ಯಾವಾಗ?:

  • ಮಂಗಳವಾರ, 28 ನವೆಂಬರ್- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
  • ಶುಕ್ರವಾರ, 1 ಡಿಸೆಂಬರ್- ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣ, ರಾಯ್​ಪುರ
  • ಭಾನುವಾರ, 3 ಡಿಸೆಂಬರ್- ಎಮ್. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಕ್ರೀಡಾಂಗಣ, ಬೆಂಗಳೂರು

ಉಭಯ ತಂಡಗಳು:

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ನಾಯಕ), ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ