AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd T20I: ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಮಾಹಿತಿ

India vs Australia T20I Series: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ 44 ರನ್​ಗಳ ಅಮೋಘ ಜಯದೊಂದಿಗೆ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಇನ್ನೊಂದು ಪಂದ್ಯ ಗೆದ್ದರೆ ಭಾರತ ಸರಣಿ ವಶಪಡಿಸಿಕೊಳ್ಳಲಿದೆ. ಹಾಗಾದರೆ, ತೃತೀಯ ಟಿ20 ಯಾವಾಗ?.

IND vs AUS 3rd T20I: ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಮಾಹಿತಿ
IND vs AUS 3rd T20I
Vinay Bhat
|

Updated on: Nov 27, 2023 | 9:16 AM

Share

ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ (India vs Australia) ಭರ್ಜರಿ ಜಯ ಸಾಧಿಸಿದೆ. ಬ್ಯಾಟಿಂಗ್​ನಲ್ಲಿ ಮಿಂಚಿನ ಪ್ರದರ್ಶನ ನೀಡಿದ ಸೂರ್ಯ ಹುಡುಗರು 235 ರನ್ ಕಲೆಹಾಕಿದರೆ, ಆಸೀಸ್ 191 ರನ್ ಗಳಿಸಲಷ್ಟೇ ಶಕ್ತವಾಯಿತು. 44 ರನ್​ಗಳ ಅಮೋಘ ಜಯದೊಂದಿಗೆ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಇನ್ನೊಂದು ಪಂದ್ಯ ಗೆದ್ದರೆ ಭಾರತ ಸರಣಿ ವಶಪಡಿಸಿಕೊಳ್ಳಲಿದೆ. ಹಾಗಾದರೆ, ಇಂಡೋ-ಆಸೀಸ್ ತೃತೀಯ ಟಿ20 ಯಾವಾಗ?, ಎಲ್ಲಿ ನಡೆಯಲಿದೆ. ಇಲ್ಲಿದೆ ಮಾಹಿತಿ.

ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಯಾವಾಗ?

ನವೆಂಬರ್ 28 ಮಂಗಳವಾರದಂದು ಭಾರತ vs ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ನಡೆಯಲಿದೆ.

ಇದನ್ನೂ ಓದಿ
Image
9 ಎಸೆತಗಳಲ್ಲಿ 31 ರನ್ಸ್: ರಿಂಕು ಸಿಂಗ್ ಸ್ಫೋಟಕ ಬ್ಯಾಟಿಂಗ್ ಹೇಗಿತ್ತು ನೋಡಿ
Image
ಪೋಸ್ಟ್ ಮ್ಯಾಚ್​ನಲ್ಲಿ ರಿಂಕು ಸಿಂಗ್ ಬಗ್ಗೆ ಸೂರ್ಯಕುಮಾರ್ ಏನು ಹೇಳಿದ್ರು?
Image
ದೆಹಲಿ ಕ್ಯಾಪಿಟಲ್ಸ್​ನಲ್ಲಿ ಉಳಿದ, ಹೊರನಡೆದ ಆಟಗಾರರ ಪಟ್ಟಿ ಇಲ್ಲಿದೆ 
Image
ಲಕ್ನೋದಲ್ಲೇ ಉಳಿದ ರಾಹುಲ್: ತಂಡದಿಂದ ಹೊರಬಿದ್ದ ಆಟಗಾರರು ಯಾರ್ಯಾರು ಗೊತ್ತಾ?

ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ vs ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್‌ಸ್ಟ್ರೀಮ್ ಮಾಡಲಾಗುತ್ತದೆ. ಅಭಿಮಾನಿಗಳು Sports18 ನೆಟ್‌ವರ್ಕ್‌ ಮೂಲಕ ಟಿವಿಯಲ್ಲಿ ವೀಕ್ಷಿಸಬಹುದು.

IND vs AUS 2nd T20 Highlights: ಆಸ್ಟ್ರೇಲಿಯಾ ವಿರುದ್ಧ ಸತತ 2ನೇ ಪಂದ್ಯ ಗೆದ್ದ ಭಾರತ

ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಉಳಿದ ಪಂದ್ಯ ಯಾವಾಗ?:

  • ಶುಕ್ರವಾರ, 1 ಡಿಸೆಂಬರ್- ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣ, ರಾಯ್​ಪುರ
  • ಭಾನುವಾರ, 3 ಡಿಸೆಂಬರ್- ಎಮ್. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಕ್ರೀಡಾಂಗಣ, ಬೆಂಗಳೂರು

ಉಭಯ ತಂಡಗಳು:

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ನಾಯಕ), ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​