AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ-ಆಸ್ಟ್ರೇಲಿಯಾ ಸರಣಿಯ ಸಂಪೂರ್ಣ ವೇಳಾಪಟ್ಟಿ, ತಂಡಗಳು ಹೀಗಿವೆ

India vs Australia Full schedule: ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಮೊಹಮ್ಮದ್ ಶಮಿ ಈ ಸರಣಿಯಿಂದ ಹೊರಗುಳಿದಿದ್ದಾರೆ.

IND vs AUS: ಭಾರತ-ಆಸ್ಟ್ರೇಲಿಯಾ ಸರಣಿಯ ಸಂಪೂರ್ಣ ವೇಳಾಪಟ್ಟಿ, ತಂಡಗಳು ಹೀಗಿವೆ
India Vs AusT20 ವಿಶ್ವಕಪ್‌ಗೆ ಮುಂಚಿತವಾಗಿ, ಸೆಪ್ಟೆಂಬರ್ 20 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ T20 ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳು ಕೂಡ ತಮ್ಮ ತಂಡದ ಸಿದ್ಧತೆಯನ್ನು ಪರೀಕ್ಷಿಸಲು ಮುಂದಾಗಿವೆ. ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳು ಕ್ರಿಕೆಟ್ ಜಗತ್ತಿನಲ್ಲಿ ತಮ್ಮ ಪ್ರಾಬಲ್ಯವನ್ನು ತೋರಿಸಿವೆ. ಈ ಹಿಂದೆ, ಈ ಎರಡು ತಂಡಗಳು ಕ್ರಿಕೆಟ್‌ನ ಚಿಕ್ಕ ಸ್ವರೂಪದಲ್ಲಿ ಮುಖಾಮುಖಿಯಾದಾಗಲೆಲ್ಲಾ ತಂಡದ ಪರವಾಗಿ ಅತ್ಯಂತ ಯಶಸ್ವಿ ಜೊತೆಯಾಟ ನಡೆಸಿದ ದಾಖಲೆ ಯಾರ ಹೆಸರಿನಲ್ಲಿದೆ ಎಂಬುದನ್ನು ಈಗ ನೋಡೋಣ.tralia
TV9 Web
| Edited By: |

Updated on: Sep 19, 2022 | 11:25 AM

Share

India vs Australia Schedule 2022: ಏಷ್ಯಾಕಪ್​ನಲ್ಲಿನ ಹೀನಾಯ ಸೋಲಿನ ಬಳಿಕ ಇದೀಗ ಟೀಮ್ ಇಂಡಿಯಾ (Team India) ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗಾಗಿ ಭರ್ಜರಿ ಸಿದ್ಧತೆಗಳನ್ನು ಆರಂಭಿಸಿದೆ. ಮಂಗಳವಾರದಿಂದ (ಸೆ.20) ಶುರುವಾಗಲಿರುವ ಈ ಸರಣಿಯಲ್ಲಿ 3 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಈ ಮೂರು ಪಂದ್ಯಗಳು ಕ್ರಮವಾಗಿ ಮೊಹಾಲಿ, ನಾಗ್ಪುರ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿದೆ. ವಿಶೇಷ ಎಂದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಆಟಗಾರರೇ ಈ ಸರಣಿಯಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ರೂಪಿಸುವ ಸವಾಲು ಟೀಮ್ ಇಂಡಿಯಾ ಮುಂದಿದೆ. ಅದರಂತೆ ಆಸೀಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಕೆಲ ಪ್ರಯೋಗಗಳು ಕಂಡು ಬರುವ ಸಾಧ್ಯತೆ ಹೆಚ್ಚು.

ಅದರಲ್ಲೂ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಮೊಹಮ್ಮದ್ ಶಮಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಕೊರೋನಾ ಸೋಂಕಿಗೆ ಒಳಗಾಗಿರುವ ಶಮಿ ಅವರು ಕ್ವಾರಂಟೈನ್​​ಗೆ ಒಳಗಾಗಿದ್ದು, ಹೀಗಾಗಿ ಆಸೀಸ್ ವಿರುದ್ಧ ಕಣಕ್ಕಿಳಿಯುತ್ತಿಲ್ಲ.

ಇನ್ನು ಮೊಹಮ್ಮದ್ ಶಮಿ ಅವರ ಬದಲಿಗೆ ವೇಗಿ ಉಮೇಶ್ ಯಾದವ್ ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ 3 ವರ್ಷಗಳ ಬಳಿಕ ಉಮೇಶ್ ಯಾದ್ ಇದೇ ಮೊದಲ ಬಾರಿಗೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಂದರೆ ಅವರು ಕೊನೆಯ ಬಾರಿ ಟೀಮ್ ಇಂಡಿಯಾ ಪರ ಟಿ20 ಆಡಿದ್ದು 2019 ರಲ್ಲಿ. ಇದೀಗ ಮೊಹಮ್ಮದ್ ಶಮಿ ಸ್ಥಾನದಲ್ಲಿ ಅವಕಾಶ ಪಡೆದಿರುವ ಉಮೇಶ್ ಯಾದವ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ
Image
T20 Records: ಟಿ20 ಕ್ರಿಕೆಟ್​ನ ಸಿಕ್ಸರ್ ಕಿಂಗ್: ಟಾಪ್-10 ಪಟ್ಟಿಯಲ್ಲಿ ಇಬ್ಬರು ಭಾರತೀಯರು..!
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್

ಹಾಗೆಯೇ ಗಾಯದ ಕಾರಣ ಈ ಸರಣಿಯಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರರಾದ ಮಿಚೆಲ್ ಮಾರ್ಷ್​, ಮಿಚೆಲ್ ಸ್ಟಾರ್ಕ್​ ಹಾಗೂ ಮಾರ್ಕಸ್ ಸ್ಟೋಯಿನಿಸ್ ಹೊರಗುಳಿದಿದ್ದಾರೆ.

ಭಾರತ-ಆಸ್ಟ್ರೇಲಿಯಾ ಸರಣಿಯ ವೇಳಾಪಟ್ಟಿ ಹೀಗಿದೆ:

  1. ಸೆಪ್ಟೆಂಬರ್ 20- ಮೊದಲ ಟಿ20 ಪಂದ್ಯ- ಮೊಹಾಲಿ
  2. ಸೆಪ್ಟೆಂಬರ್ 23- 2ನೇ ಟಿ20 ಪಂದ್ಯ- ನಾಗ್ಪುರ
  3. ಸೆಪ್ಟೆಂಬರ್ 25- 3ನೇ ಟಿ20 ಪಂದ್ಯ- ಹೈದರಾಬಾದ್

ಉಭಯ ತಂಡಗಳು ಹೀಗಿವೆ:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ ತಂಡ: ಆರೋನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ