India vs Australia Schedule 2022: ಏಷ್ಯಾಕಪ್ನಲ್ಲಿನ ಹೀನಾಯ ಸೋಲಿನ ಬಳಿಕ ಇದೀಗ ಟೀಮ್ ಇಂಡಿಯಾ (Team India) ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗಾಗಿ ಭರ್ಜರಿ ಸಿದ್ಧತೆಗಳನ್ನು ಆರಂಭಿಸಿದೆ. ಮಂಗಳವಾರದಿಂದ (ಸೆ.20) ಶುರುವಾಗಲಿರುವ ಈ ಸರಣಿಯಲ್ಲಿ 3 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಈ ಮೂರು ಪಂದ್ಯಗಳು ಕ್ರಮವಾಗಿ ಮೊಹಾಲಿ, ನಾಗ್ಪುರ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿದೆ. ವಿಶೇಷ ಎಂದರೆ ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಆಟಗಾರರೇ ಈ ಸರಣಿಯಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್ಗೂ ಮುನ್ನ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸುವ ಸವಾಲು ಟೀಮ್ ಇಂಡಿಯಾ ಮುಂದಿದೆ. ಅದರಂತೆ ಆಸೀಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಕೆಲ ಪ್ರಯೋಗಗಳು ಕಂಡು ಬರುವ ಸಾಧ್ಯತೆ ಹೆಚ್ಚು.
ಅದರಲ್ಲೂ ಟಿ20 ವಿಶ್ವಕಪ್‌ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಮೊಹಮ್ಮದ್ ಶಮಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಕೊರೋನಾ ಸೋಂಕಿಗೆ ಒಳಗಾಗಿರುವ ಶಮಿ ಅವರು ಕ್ವಾರಂಟೈನ್ಗೆ ಒಳಗಾಗಿದ್ದು, ಹೀಗಾಗಿ ಆಸೀಸ್ ವಿರುದ್ಧ ಕಣಕ್ಕಿಳಿಯುತ್ತಿಲ್ಲ.
ಇನ್ನು ಮೊಹಮ್ಮದ್ ಶಮಿ ಅವರ ಬದಲಿಗೆ ವೇಗಿ ಉಮೇಶ್ ಯಾದವ್ ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ 3 ವರ್ಷಗಳ ಬಳಿಕ ಉಮೇಶ್ ಯಾದ್ ಇದೇ ಮೊದಲ ಬಾರಿಗೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಂದರೆ ಅವರು ಕೊನೆಯ ಬಾರಿ ಟೀಮ್ ಇಂಡಿಯಾ ಪರ ಟಿ20 ಆಡಿದ್ದು 2019 ರಲ್ಲಿ. ಇದೀಗ ಮೊಹಮ್ಮದ್ ಶಮಿ ಸ್ಥಾನದಲ್ಲಿ ಅವಕಾಶ ಪಡೆದಿರುವ ಉಮೇಶ್ ಯಾದವ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.
ಹಾಗೆಯೇ ಗಾಯದ ಕಾರಣ ಈ ಸರಣಿಯಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರರಾದ ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಹೊರಗುಳಿದಿದ್ದಾರೆ.
ಭಾರತ-ಆಸ್ಟ್ರೇಲಿಯಾ ಸರಣಿಯ ವೇಳಾಪಟ್ಟಿ ಹೀಗಿದೆ:
ಉಭಯ ತಂಡಗಳು ಹೀಗಿವೆ:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ ತಂಡ: ಆರೋನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.