
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ನಾಳೆಯಿಂದ (ಅ.29) ಶುರುವಾಗಲಿದೆ. ಐದು ಮ್ಯಾಚ್ಗಳ ಈ ಸರಣಿಯ ಮೊದಲ ಪಂದ್ಯವು ಕ್ಯಾನ್ಬೆರಾದಲ್ಲಿ ನಡೆಯಲಿದ್ದು, ಇದಕ್ಕಾಗಿ ಉಭಯ ತಂಡಗಳು ಕಠಿಣ ತಾಲೀಮಿನೊಂದಿಗೆ ಸಜ್ಜಾಗುತ್ತಿದೆ. ಇನ್ನು ಈ ಸರಣಿ ಕುರಿತಾದ ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ…
ಇಂಡೊ-ಆಸೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಭಾರತೀಯ ಕಾಲಮಾನ ಮಧ್ಯಾಹ್ನ 1.45 ಕ್ಕೆ ಶುರುವಾಗಲಿದೆ. ಇದಕ್ಕೂ ಮುನ್ನ 1.15 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.
ಇದನ್ನೂ ಓದಿ: 89 ರನ್ಗೆ ಆಲೌಟ್: 10 ವಿಕೆಟ್ ಕಬಳಿಸಿದ ಆಖಿಬ್ ನಬಿ
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್ (ಮೊದಲ ಮೂರು ಪಂದ್ಯಗಳಿಗೆ ಮಾತ್ರ), ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್ (ಕೊನೆಯ 3 ಪಂದ್ಯಗಳಿಗೆ ಮಾತ್ರ), ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ), ನಾಥನ್ ಎಲ್ಲಿಸ್, ಜೋಶ್ ಹೇಝಲ್ವುಡ್ (ಮೊದಲೆರಡು ಪಂದ್ಯಗಳಿಗೆ ಮಾತ್ರ), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್ (ಕೊನೆಯ ಮೂರು ಪಂದ್ಯಗಳಿಗೆ ಮಾತ್ರ), ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ತನ್ವೀರ್ ಸಂಘ, ಆ್ಯಡಂ ಝಂಪಾ (ಮೊದಲ ಪಂದ್ಯಕ್ಕೆ ಅಲಭ್ಯ).