IND vs AUS: ಮೊದಲ ಪಂದ್ಯಕ್ಕೆ ನಾನು ರೆಡಿ ಎಂದ ಕನ್ನಡಿಗ ಕೆಎಲ್ ರಾಹುಲ್
India vs Australia Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಶುಕ್ರವಾರದಿಂದ ಆರಂಭವಾಗಲಿದೆ. ಪರ್ತ್ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ.
ನವೆಂಬರ್ 22 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಖಚಿತವಾಗಿದೆ. ಪರ್ತ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಸಂಪೂರ್ಣ ಫಿಟ್ ಆಗಿರುವುದಾಗಿ ರಾಹುಲ್ ತಿಳಿಸಿದ್ದಾರೆ.
ಶುಕ್ರವಾರ ನಡೆದ ಅಭ್ಯಾಸ ಪಂದ್ಯದ ವೇಳೆ ರಾಹುಲ್ ಅವರ ಮೊಣಕೈಗೆ ಗಾಯವಾಗಿತ್ತು. ಇದರಿಂದ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಗಾಯದಿಂದ ಚೇತರಿಸಿಕೊಂಡಿರುವ ರಾಹುಲ್ ಮತ್ತೆ ಅಭ್ಯಾಸಕ್ಕೆ ಇಳಿದಿದ್ದಾರೆ.
ಇದೀಗ ರಾಹುಲ್ ಅವರ ಗಾಯದ ಕುರಿತು ಮಾಹಿತಿ ನೀಡಿರುವ ಟೀಮ್ ಇಂಡಿಯಾ ಫಿಸಿಯೋ ಕಮಲೇಶ್ ಜೈನ್, ಅವರ ಮೂಳೆ ಮುರಿಕ್ಕೊಳಗಾಗಿಲ್ಲ. ಇದೀಗ 2 ದಿನಗಳ ಚಿಕಿತ್ಸೆಯ ಬಳಿಕ ಬ್ಯಾಟಿಂಗ್ ಮಾಡಲು ಸಂಪೂರ್ಣ ಸಿದ್ಧವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಹೀಗಾಗಿ ಪರ್ತ್ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಆಸೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಆದರೆ ಅತ್ತ ಮೊದಲ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ.
ವೈಯುಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಪರ್ತ್ ಟೆಸ್ಟ್ಗೆ ಅಲಭ್ಯರಾಗಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಅಥವಾ ಅಭಿಮನ್ಯು ಈಶ್ವರನ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.
ಅದರಂತೆ ಪರ್ತ್ ಟೆಸ್ಟ್ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಅಥವಾ ಅಭಿಮನ್ಯು ಈಶ್ವರನ್ ಇನಿಂಗ್ಸ್ ಆರಂಭಿಸಬಹುದು. ಅತ್ತ ಶುಭ್ಮನ್ ಗಿಲ್ ಗಾಯಗೊಂಡಿರುವ ಕಾರಣ ಮೊದಲ ಪಂದ್ಯದಲ್ಲಿ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.