India vs Australia Test Series: ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಕಣಕ್ಕಿಳಿಯಲು ಭಾರತ-ಆಸ್ಟ್ರೇಲಿಯಾ ತಂಡಗಳು ಸಜ್ಜಾಗಿವೆ. ನಾಳೆಯಿಂದ (ಫೆ.9) ಶುರುವಾಗಲಿರುವ ಈ ಸರಣಿಯಲ್ಲಿ ಒಟ್ಟು 4 ಪಂದ್ಯಗಳನ್ನು ಆಡಲಾಗುತ್ತದೆ. ಮೊದಲ ಪಂದ್ಯವು ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂ ನಡೆದರೆ, 2ನೇ ಪಂದ್ಯಕ್ಕೆ ದೆಹಲಿ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಪಂದ್ಯವು ಧರ್ಮಶಾಲದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಗೆಯೇ ಅಂತಿಮ ಟೆಸ್ಟ್ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ.
ಈ ಸರಣಿಯು ಉಭಯ ತಂಡಗಳಿಗೂ ಪ್ರತಿಷ್ಠೆಯ ವಿಷಯವಾಗಿದ್ದರೂ, ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದೆನಿಸಿಕೊಂಡಿದೆ. ಏಕೆಂದರೆ ಈ ಸರಣಿ ಜಯಿಸುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರಬಹುದು. ಇಲ್ಲಿ ಮತ್ತೊಂದು ವಿಶೇಷ ಎಂದರೆ ಬಾರ್ಡರ್-ಗವಾಸ್ಕರ್ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.
ಇನ್ನು ಈ ಸರಣಿಯ ಮೊದಲ 2 ಪಂದ್ಯಗಳಿಗೆ ಈಗಾಗಲೇ ಭಾರತ ತಂಡವನ್ನು ಘೋಷಿಸಲಾಗಿದೆ. ಆದರೆ ಈ ತಂಡದಲ್ಲಿ ಸ್ಥಾನ ಪಡೆದಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಮತ್ತೊಂದೆಡೆ ಗಾಯದ ಕಾರಣ ಜಸ್ಪ್ರೀತ್ ಬುಮ್ರಾ ಕೂಡ ಮೊದಲೆರಡು ಟೆಸ್ಟ್ನಲ್ಲಿ ಕಣಕ್ಕಿಳಿಯುತ್ತಿಲ್ಲ.
ಮತ್ತೊಂದೆಡೆ ಗಾಯದಿಂದ ಚೇತರಿಸಿಕೊಂಡಿರುವ ರವೀಂದ್ರ ಜಡೇಜಾ ಈ ಸರಣಿಯ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಹಾಗೆಯೇ ವಿವಾಹದ ನಿಮ್ಮಿತ್ತ ತಂಡದಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಹಾಗೂ ಅಕ್ಷರ್ ಪಟೇಲ್ ಕೂಡ ತಂಡಕ್ಕೆ ಮರಳಿದ್ದಾರೆ. ಅದರಂತೆ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ.
ಭಾರತ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
ಇನ್ನು ಆಸ್ಟ್ರೇಲಿಯಾ ಕೂಡ ಬಲಿಷ್ಠ ಪಡೆಯನ್ನೇ ಹೊಂದಿದ್ದು, ಇದಾಗ್ಯೂ ಮೊದಲ ಪಂದ್ಯಕ್ಕೆ ಇಬ್ಬರು ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ. ಅದರಂತೆ ಬೆರಳಿಗೆ ಗಾಯ ಮಾಡಿಕೊಂಡಿರುವ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಹಾಗೂ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿರುವ ಜೋಶ್ ಹ್ಯಾಝಲ್‌ವುಡ್ ನಾಗ್ಪುರ ಟೆಸ್ಟ್ನಲ್ಲಿ ಕಣಕ್ಕಿಳಿಯುವುದಿಲ್ಲ. ಇನ್ನು ಮಿಚೆಲ್ ಸ್ಟಾರ್ಕ್ ಕೂಡ ಗಾಯಾಳುವಾಗಿದ್ದು, ಇದಾಗ್ಯೂ ಅವರು ಗುರುವಾರ ಆಡಲಿದ್ದಾರಾ ಕಾದು ನೋಡಬೇಕಿದೆ. ಅದರಂತೆ ಆಸ್ಟ್ರೇಲಿಯಾ ಟೆಸ್ಟ್ ಬಳಗ ಈ ಕೆಳಗಿನಂತಿದೆ.
ಆಸ್ಟ್ರೇಲಿಯಾ ಟೆಸ್ಟ್ ತಂಡ:
ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.
ನಾಳೆಯಿಂದ ಶುರುವಾಗಲಿರುವ ನಾಲ್ಕು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ವಿದರ್ಭ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಬೆಳಿಗ್ಗೆ 9.30 ರಿಂದ ಪಂದ್ಯ ಶುರುವಾಗಲಿದೆ. ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ಹಾಗೂ ಡಿಸ್ನಿ ಹಾಟ್ಸ್ಟಾರ್ ಆ್ಯಪ್ನಲ್ಲಿ ಲೈವ್ ವೀಕ್ಷಿಸಬಹುದು. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:
Published On - 9:24 pm, Wed, 8 February 23