AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳಾಪಟ್ಟಿ: ತಂಡಗಳು ಹೀಗಿವೆ

India Test Squad 2023: ಈ ಸರಣಿಯ ಮೊದಲ 2 ಪಂದ್ಯಗಳಿಗೆ ಈಗಾಗಲೇ ಟೀಮ್ ಇಂಡಿಯಾವನ್ನು ಘೋಷಿಸಲಾಗಿದ್ದು, ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.

India vs Australia: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳಾಪಟ್ಟಿ: ತಂಡಗಳು ಹೀಗಿವೆ
Team India
TV9 Web
| Edited By: |

Updated on: Feb 02, 2023 | 10:08 PM

Share

India vs Australia Test Series: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಗೆದ್ದು ಬೀಗಿರುವ ಟೀಮ್ ಇಂಡಿಯಾ (Team India) ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಸಜ್ಜಾಗುತ್ತಿದೆ. ಫೆಬ್ರವರಿ 9 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 4 ಟೆಸ್ಟ್ ಪಂದ್ಯ ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಫೆಬ್ರವರಿ 9 ರಿಂದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಶುರುವಾಗಲಿದ್ದು, ಇದಾದ ಬಳಿಕ ಮಾರ್ಚ್ 17 ರಿಂದ ಏಕದಿನ ಸರಣಿ ನಡೆಯಲಿದೆ. ನಾಲ್ಕು ಪಂದ್ಯಗಳ ಟೆಸ್ಟ್​ ಸರಣಿಗೆ ನಾಗ್​ಪುರದ ವಿಧರ್ಭ ಕ್ರಿಕೆಟ್​ ಸ್ಟೇಡಿಯಂ, ದೆಹಲಿ ಅರುಣ್ ಜೇಟ್ಲಿ ಸ್ಟೇಡಿಯಂ, ಧರ್ಮಶಾಲದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಸ್ಟೇಡಿಯಂ ಹಾಗೂ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಏಕದಿನ ಪಂದ್ಯಗಳು ಮುಂಬೈ, ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ನಡೆಯಲಿದೆ.

ಈ ಸರಣಿಯ ಟೆಸ್ಟ್ ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿದ್ದು, ಇದರಲ್ಲಿ ಸರಣಿ ಜಯಿಸುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಬಹುದು. ವಿಶೇಷ ಎಂದರೆ ಬಾರ್ಡರ್-ಗವಾಸ್ಕರ್ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

ಇನ್ನು ಈ ಸರಣಿಯ ಮೊದಲ 2 ಪಂದ್ಯಗಳಿಗೆ ಈಗಾಗಲೇ ಟೀಮ್ ಇಂಡಿಯಾವನ್ನು ಘೋಷಿಸಲಾಗಿದ್ದು, ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಸ್ಥಾನ ಪಡೆದಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ವಿದರ್ಭ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದ ಮೂಲಕ ಸೂರ್ಯಕುಮಾರ್ ಯಾದವ್ ದೀರ್ಘಾವಧಿ ಕ್ರಿಕೆಟ್​ಗೆ ರಂಗಪ್ರವೇಶ ಮಾಡುವ ನಿರೀಕ್ಷೆಯಿದೆ. ಹಾಗೆಯೇ ಈ ಸರಣಿಯ ಮೂಲಕ ಆಲ್​ರೌಂಡರ್ ರವೀಂದ್ರ ಜಡೇಜಾ ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾ ಹೀಗಿದೆ.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.

ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ:

ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
  2. ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
  3. ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
  4. ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  1. ಮಾರ್ಚ್ 17- ಮೊದಲ ಏಕದಿನ ಪಂದ್ಯ (ವಾಂಖೆಡೆ ಸ್ಟೇಡಿಯಂ, ಮುಂಬೈ)
  2. ಮಾರ್ಚ್ 19- ಎರಡನೇ ಏಕದಿನ ಪಂದ್ಯ (ವೈಎಸ್​ಆರ್ ಸ್ಟೇಡಿಯಂ, ವಿಶಾಖಪಟ್ಟಣಂ)
  3. ಮಾರ್ಚ್ 22- ಮೂರನೇ ಏಕದಿನ ಪಂದ್ಯ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)
Follow Us
Web contact
Web contact

TV9 Kannada

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ