India vs Australia Test Series: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಗೆದ್ದು ಬೀಗಿರುವ ಟೀಮ್ ಇಂಡಿಯಾ (Team India) ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಸಜ್ಜಾಗುತ್ತಿದೆ. ಫೆಬ್ರವರಿ 9 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 4 ಟೆಸ್ಟ್ ಪಂದ್ಯ ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಫೆಬ್ರವರಿ 9 ರಿಂದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಶುರುವಾಗಲಿದ್ದು, ಇದಾದ ಬಳಿಕ ಮಾರ್ಚ್ 17 ರಿಂದ ಏಕದಿನ ಸರಣಿ ನಡೆಯಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ನಾಗ್ಪುರದ ವಿಧರ್ಭ ಕ್ರಿಕೆಟ್ ಸ್ಟೇಡಿಯಂ, ದೆಹಲಿ ಅರುಣ್ ಜೇಟ್ಲಿ ಸ್ಟೇಡಿಯಂ, ಧರ್ಮಶಾಲದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಸ್ಟೇಡಿಯಂ ಹಾಗೂ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಏಕದಿನ ಪಂದ್ಯಗಳು ಮುಂಬೈ, ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ನಡೆಯಲಿದೆ.
ಈ ಸರಣಿಯ ಟೆಸ್ಟ್ ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿದ್ದು, ಇದರಲ್ಲಿ ಸರಣಿ ಜಯಿಸುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರಬಹುದು. ವಿಶೇಷ ಎಂದರೆ ಬಾರ್ಡರ್-ಗವಾಸ್ಕರ್ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.
ಇನ್ನು ಈ ಸರಣಿಯ ಮೊದಲ 2 ಪಂದ್ಯಗಳಿಗೆ ಈಗಾಗಲೇ ಟೀಮ್ ಇಂಡಿಯಾವನ್ನು ಘೋಷಿಸಲಾಗಿದ್ದು, ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಸ್ಥಾನ ಪಡೆದಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ವಿದರ್ಭ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದ ಮೂಲಕ ಸೂರ್ಯಕುಮಾರ್ ಯಾದವ್ ದೀರ್ಘಾವಧಿ ಕ್ರಿಕೆಟ್ಗೆ ರಂಗಪ್ರವೇಶ ಮಾಡುವ ನಿರೀಕ್ಷೆಯಿದೆ. ಹಾಗೆಯೇ ಈ ಸರಣಿಯ ಮೂಲಕ ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾ ಹೀಗಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ:
ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:
ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ: