
ಮಹಿಳಾ ವಿಶ್ವಕಪ್ನ (Women’s World Cup 2025) ತನ್ನ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಇದೀಗ ಆಸ್ಟ್ರೇಲಿಯಾದ (India vs Australia) ಸವಾಲನ್ನು ಎದುರಿಸಲಿದೆ. ಅಕ್ಟೋಬರ್ 12 ರಂದು ವಿಶಾಖಪಟ್ಟಣದ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಆಸ್ಟ್ರೇಲಿಯಾ ಮಹಿಳಾ ತಂಡವು ಹ್ಯಾಟ್ರಿಕ್ ಗೆಲುವಿನ ಗುರಿಯನ್ನು ಹೊಂದಿದ್ದರೆ, ಭಾರತ ತಂಡವು ಗೆಲುವಿನ ಹಾದಿಗೆ ಮರಳಲು ಬಯಸುತ್ತದೆ. ಭಾರತ ಮಹಿಳಾ ತಂಡವು ಶ್ರೀಲಂಕಾ ಮತ್ತು ಪಾಕಿಸ್ತಾನ ವಿರುದ್ಧ ಸತತ ಗೆಲುವು ಸಾಧಿಸುವ ಮೂಲಕ ಉತ್ತಮ ಆರಂಭ ಪಡೆದುಕೊಂಡಿತ್ತು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೂರ್ನಿಯ ಮೊದಲ ಸೋಲನ್ನು ಅನುಭವಿಸಿತು. ಟೀಂ ಇಂಡಿಯಾ ಈಗ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿ ಸೋಲಿನ ಸರಪಳಿಯನ್ನು ಮುರಿಯಲು ಪ್ರಯತ್ನಿಸಲಿದೆ.
ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ, ಭಾರತ ಮತ್ತು ಆಸ್ಟ್ರೇಲಿಯಾ ಇಲ್ಲಿಯವರೆಗೆ 59 ಪಂದ್ಯಗಳನ್ನು ಆಡಿವೆ. ಈ ಪಂದ್ಯಗಳಲ್ಲಿ ಆಸ್ಟ್ರೇಲಿಯಾ 48 ಪಂದ್ಯಗಳನ್ನು ಗೆದ್ದಿದ್ದರೆ, ಭಾರತೀಯ ಮಹಿಳಾ ತಂಡ ಕೇವಲ 11 ಬಾರಿ ಮಾತ್ರ ಗೆದ್ದಿದೆ. ಇತ್ತೀಚಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ 2-1 ಅಂತರದಿಂದ ಗೆದ್ದುಕೊಂಡಿತು. 2017 ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಅತ್ಯಂತ ಐತಿಹಾಸಿಕ ಗೆಲುವು ಸಾಧಿಸಿತು, ಹರ್ಮನ್‌ಪ್ರೀತ್ ಕೌರ್ 115 ಎಸೆತಗಳಲ್ಲಿ 171 ರನ್ ಗಳಿಸಿದ್ದರು.
ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ 13 ಬಾರಿ ಮುಖಾಮುಖಿಯಾಗಿದ್ದು, ಏಳು ಬಾರಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ 10 ಬಾರಿ ಗೆದ್ದಿದ್ದರೆ, ಭಾರತೀಯ ಮಹಿಳಾ ತಂಡವು 2017 ರ ಸೆಮಿಫೈನಲ್ ಸೇರಿದಂತೆ ಮೂರು ಸ್ಮರಣೀಯ ಗೆಲುವುಗಳನ್ನು ದಾಖಲಿಸಿದೆ. 2017 ರಿಂದ ಟೀಂ ಇಂಡಿಯಾ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿಲ್ಲ.
ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಪ್ರಸ್ತುತ, ನ್ಯೂಜಿಲೆಂಡ್‌ನ ಸೋಫಿ ಡಿವೈನ್ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಸೋಫಿ 28 ಪಂದ್ಯಗಳಲ್ಲಿ 23 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ, ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಡಿಯಾಂಡ್ರಾ ಡಾಟಿನ್ 29 ಪಂದ್ಯಗಳಲ್ಲಿ 22 ಸಿಕ್ಸರ್‌ಗಳನ್ನು ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ. 29 ಪಂದ್ಯಗಳಲ್ಲಿ 20 ಸಿಕ್ಸರ್‌ಗಳನ್ನು ಬಾರಿಸಿದ ಹರ್ಮನ್‌ಪ್ರೀತ್ ಕೌರ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರೆ, ಅವರು ಈ ದಾಖಲೆಯನ್ನು ಮುರಿಯಲಿದ್ದಾರೆ.
World Cup 2025: ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ ಭಾರತ? ಎದುರಾಳಿ ಯಾರು?
ಭಾರತ ತಂಡ: ಪ್ರತಿಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್ಪ್ರೀತ್ ಕೌರ್ (ನಾಯಕಿ), ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮನ್‌ಜೋತ್ ಕೌರ್, ಸ್ನೇಹ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ.
ಆಸ್ಟ್ರೇಲಿಯಾ ತಂಡ: ಅಲಿಸಾ ಹೀಲಿ (ವಿಕೆಟ್ ಕೀಪರ್/ನಾಯಕಿ), ಫೋಬೆ ಲಿಚ್‌ಫೀಲ್ಡ್, ಎಲ್ಲಿಸ್ ಪೆರ್ರಿ, ಬೆತ್ ಮೂನಿ, ಅನ್ನಾಬೆಲ್ ಸದರ್ಲ್ಯಾಂಡ್, ಆಶ್ಲೀ ಗಾರ್ಡ್ನರ್, ತಹ್ಲಿಯಾ ಮೆಕ್‌ಗ್ರಾತ್, ಜಾರ್ಜಿಯಾ ವೇರ್‌ಹ್ಯಾಮ್, ಕಿಮ್ ಗಾರ್ತ್, ಎಲಾನಾ ಕಿಂಗ್, ಮೇಗನ್ ಶುಟ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ