ವಿಶ್ವಕಪ್​ನಲ್ಲಿ ಭಾರತಕ್ಕೆ ನಾಳೆ ಮೊದಲ ಪಂದ್ಯ; ಎದುರಾಳಿ ಯಾರು ಗೊತ್ತಾ?

|

Updated on: Oct 07, 2023 | 1:09 PM

ODI World Cup 2023: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ (ಅಕ್ಟೋಬರ್ 8) ಐಸಿಸಿ ವಿಶ್ವಕಪ್ 2023 ರ ಐದನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳಿಗೂ ವಿಶ್ವಕಪ್​ನಲ್ಲಿ ಇದು ಮೊದಲ ಪಂದ್ಯವಾಗಿದ್ದು, ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡುವ ತವಕದಲ್ಲಿವೆ.

ವಿಶ್ವಕಪ್​ನಲ್ಲಿ ಭಾರತಕ್ಕೆ ನಾಳೆ ಮೊದಲ ಪಂದ್ಯ; ಎದುರಾಳಿ ಯಾರು ಗೊತ್ತಾ?
ಭಾರತ- ಆಸ್ಟ್ರೇಲಿಯಾ
Follow us on

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ (ಅಕ್ಟೋಬರ್ 8) ಐಸಿಸಿ ವಿಶ್ವಕಪ್ 2023 ರ (ODI World Cup 2023) ಐದನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳಿಗೂ ವಿಶ್ವಕಪ್​ನಲ್ಲಿ ಇದು ಮೊದಲ ಪಂದ್ಯವಾಗಿದ್ದು, ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡುವ ತವಕದಲ್ಲಿವೆ. ವಿಶ್ವಕಪ್ ಆರಂಭಕ್ಕೂ ಮುನ್ನ ನಡೆದ ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ, ಆಸೀಸ್ ತಂಡವನ್ನು 2-1 ಅಂತರದಿಂದ ಮಣಿಸಿ ಸರಣಿ ಕೈವಶ ಮಾಡಿಕೊಂಡಿತ್ತು. ಹೀಗಾಗಿ ಅದೇ ಗೆಲುವಿನ ಸರಣಿಯನ್ನು ವಿಶ್ವಕಪ್​ನಲ್ಲೂ ಮುಂದುವರಿಸಲು ಭಾರತ ಪ್ರಯತ್ನಿಸಲಿದೆ. ಇತ್ತ ಏಕದಿನ ಸರಣಿ ಸೋತಿರುವ ಆಸ್ಟ್ರೇಲಿಯಾ ತಂಡ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಹೀಗಾಗಿ ಉಭಯ ತಂಡಗಳ ನಡುವೆ ತೀವ್ರ ಹಣಾಹಣಿ ಏರ್ಪಡುವ ಸಾಧ್ಯತೆ ಇದ್ದು, ಎರಡೂ ತಂಡಗಳು ತಮ್ಮ ವಿಶ್ವಕಪ್ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸುವ ನಿರೀಕ್ಷೆಯಲ್ಲಿದ್ದಾರೆ. ಇನ್ನು ಭಾರತ ತಂಡದ ಕಮಾಂಡ್ ರೋಹಿತ್ ಶರ್ಮಾ ಕೈಯಲ್ಲಿದ್ದರೆ, ಆಸ್ಟ್ರೇಲಿಯಾದ ಕಮಾಂಡ್ ಪ್ಯಾಟ್ ಕಮಿನ್ಸ್ ಕೈಯಲ್ಲಿದೆ.

ಟೀಂ ಇಂಡಿಯಾ ಅಲ್ಲ; ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಗವಾಸ್ಕರ್

ಉಭಯ ತಂಡಗಳ ಮುಖಾಮುಖಿ ವರದಿ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇದುವರೆಗೆ 149 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇವುಗಳಲ್ಲಿ ಭಾರತ 56 ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ 83 ಪಂದ್ಯಗಳನ್ನು ಗೆದ್ದಿದೆ. ಇನ್ನು ತವರಿನಲ್ಲಿ ಭಾರತ, ಆಸ್ಟ್ರೇಲಿಯಾ ವಿರುದ್ಧ 70 ಏಕದಿನ ಪಂದ್ಯಗಳನ್ನು ಆಡಿದೆ. ಇದರಲ್ಲಿ 32 ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ 38 ಪಂದ್ಯಗಳನ್ನು ಗೆದ್ದಿದೆ. ಈ ಎರಡು ತಂಡಗಳ ನಡುವೆ ತಟಸ್ಥ ಸ್ಥಳಗಳಲ್ಲಿ ಆಡಿದ 26 ಏಕದಿನ ಪಂದ್ಯಗಳಲ್ಲಿ ಭಾರತ 10 ಪಂದ್ಯಗಳಲ್ಲಿ ಗೆದ್ದಿದ್ದರೆ, ಆಸ್ಟ್ರೇಲಿಯಾ 12 ಪಂದ್ಯಗಳನ್ನು ಗೆದ್ದಿದೆ.

ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 8 ರಂದು (ಭಾನುವಾರ) ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?

ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲಬುಶೇನ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್ ಸ್ಟಾರ್ಕ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Sat, 7 October 23