AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia,1st T20 Match Live Streaming: ಭಾರತ-ಆಸ್ಟ್ರೇಲಿಯಾ ಟಿ20 ಸರಣಿ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ

India vs Australia,1st T20 Match Live Streaming: ಏಷ್ಯಾಕಪ್​ನಲ್ಲಿನ ಸೋಲಿನ ಬಳಿಕ ಟೀಮ್ ಇಂಡಿಯಾ ಸಮತೋಲನದಿಂದ ಕೂಡಿರುವ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸಬೇಕಿದೆ.

India vs Australia,1st T20 Match Live Streaming: ಭಾರತ-ಆಸ್ಟ್ರೇಲಿಯಾ ಟಿ20 ಸರಣಿ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
India vs Australia
TV9 Web
| Edited By: |

Updated on:Sep 19, 2022 | 1:55 PM

Share

India vs Australia,1st T20: ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿ ನಾಳೆ (ಸೆ.20) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಮೊಹಾಲಿಯನ್ನು ನಡೆಯಲಿದ್ದು, ಈಗಾಗಲೇ ಉಭಯ ತಂಡಗಳು ಭರ್ಜರಿ ಅಭ್ಯಾಸವನ್ನು ಆರಂಭಿಸಿದೆ. ಮುಂಬರುವ ಟಿ20 ವಿಶ್ವಕಪ್​ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಪಾಲಿಗೆ ಈ ಸರಣಿಯು ಪೂರ್ವಭ್ಯಾಸ ಎಂದರೆ ತಪ್ಪಾಗಲಾರದು. ಇದೇ ಕಾರಣಕ್ಕಾಗಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಟಿ20 ವಿಶ್ವಕಪ್ ಗೆಲ್ಲಬಹುದು ಎಂದು ಮಾಜಿ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದರು.

ಏಕೆಂದರೆ ಏಷ್ಯಾಕಪ್​ನಲ್ಲಿನ ಸೋಲಿನ ಬಳಿಕ ಟೀಮ್ ಇಂಡಿಯಾ ಸಮತೋಲನದಿಂದ ಕೂಡಿರುವ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸಬೇಕಿದೆ. ಹೀಗಾಗಿ ಆಸೀಸ್ ವಿರುದ್ಧದ ಈ ಸರಣಿಯಲ್ಲಿ ಟೀಮ್ ಇಂಡಿಯಾ ಕೆಲ ಪ್ರಯೋಗಗಳನ್ನು ಮಾಡುವ ಸಾಧ್ಯತೆಯಿದೆ.

ಅದರಂತೆ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿ ಪರೀಕ್ಷಿಸಬಹುದು. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಭಾರತ ತಂಡ ಸೌತ್ ಆಫ್ರಿಕಾ ವಿರುದ್ಧ ಕೂಡ 3 ಪಂದ್ಯಗಳ ಟಿ20 ಸರಣಿ ಆಡಲಿದೆ. ಹೀಗಾಗಿ ಆಸೀಸ್ ವಿರುದ್ಧ ಪ್ರಯೋಗ ನಡೆಸಿ, ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಟಿ20 ವಿಶ್ವಕಪ್​ಗೆ ಸಜ್ಜಾಗಬಹುದು. ಇನ್ನು ಈ ಪಂದ್ಯಗಳ ನೇರ ಪ್ರಸಾರ ಸೇರಿದಂತೆ ಇತರೆ ಮಾಹಿತಿ ಈ ಕೆಳಗಿನಂತಿವೆ.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
  • ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯಲಿದೆ? ಮೊದಲ ಟಿ20 ಪಂದ್ಯವು ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದೆ.
  • ಮೊದಲ ಟಿ20 ಪಂದ್ಯ ಯಾವಾಗ ಶುರು? ಸೆಪ್ಟೆಂಬರ್ 20 ರಂದು ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.
  • ಯಾವ ಚಾನೆಲ್​ನಲ್ಲಿ ನೇರ ಪ್ರಸಾರ ಇರಲಿದೆ? ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದ ನೇರಪ್ರಸಾರವು ಸ್ಟಾರ್ ಸ್ಪೋರ್ಟ್ಸ್​ ಕನ್ನಡ ಸೇರಿದಂತೆ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಲೈವ್ ಇರಲಿದೆ.
  • ಲೈವ್ ಸ್ಟ್ರೀಮಿಂಗ್ ಅನ್ನು ನಾನು ಎಲ್ಲಿ ವೀಕ್ಷಿಸಬಹುದು? ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.

ಭಾರತ-ಆಸ್ಟ್ರೇಲಿಯಾ ಸರಣಿಯ ವೇಳಾಪಟ್ಟಿ ಹೀಗಿದೆ:

  1. ಸೆಪ್ಟೆಂಬರ್ 20- ಮೊದಲ ಟಿ20 ಪಂದ್ಯ- ಮೊಹಾಲಿ
  2. ಸೆಪ್ಟೆಂಬರ್ 23- 2ನೇ ಟಿ20 ಪಂದ್ಯ- ನಾಗ್ಪುರ
  3. ಸೆಪ್ಟೆಂಬರ್ 25- 3ನೇ ಟಿ20 ಪಂದ್ಯ- ಹೈದರಾಬಾದ್

ಉಭಯ ತಂಡಗಳು ಹೀಗಿವೆ:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ ತಂಡ: ಆರೋನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.

Published On - 1:55 pm, Mon, 19 September 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ