India vs Australia,1st T20: ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿ ನಾಳೆ (ಸೆ.20) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಮೊಹಾಲಿಯನ್ನು ನಡೆಯಲಿದ್ದು, ಈಗಾಗಲೇ ಉಭಯ ತಂಡಗಳು ಭರ್ಜರಿ ಅಭ್ಯಾಸವನ್ನು ಆರಂಭಿಸಿದೆ. ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಪಾಲಿಗೆ ಈ ಸರಣಿಯು ಪೂರ್ವಭ್ಯಾಸ ಎಂದರೆ ತಪ್ಪಾಗಲಾರದು. ಇದೇ ಕಾರಣಕ್ಕಾಗಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಟಿ20 ವಿಶ್ವಕಪ್ ಗೆಲ್ಲಬಹುದು ಎಂದು ಮಾಜಿ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದರು.
ಏಕೆಂದರೆ ಏಷ್ಯಾಕಪ್ನಲ್ಲಿನ ಸೋಲಿನ ಬಳಿಕ ಟೀಮ್ ಇಂಡಿಯಾ ಸಮತೋಲನದಿಂದ ಕೂಡಿರುವ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸಬೇಕಿದೆ. ಹೀಗಾಗಿ ಆಸೀಸ್ ವಿರುದ್ಧದ ಈ ಸರಣಿಯಲ್ಲಿ ಟೀಮ್ ಇಂಡಿಯಾ ಕೆಲ ಪ್ರಯೋಗಗಳನ್ನು ಮಾಡುವ ಸಾಧ್ಯತೆಯಿದೆ.
ಅದರಂತೆ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಮಾಡಿ ಪರೀಕ್ಷಿಸಬಹುದು. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಭಾರತ ತಂಡ ಸೌತ್ ಆಫ್ರಿಕಾ ವಿರುದ್ಧ ಕೂಡ 3 ಪಂದ್ಯಗಳ ಟಿ20 ಸರಣಿ ಆಡಲಿದೆ. ಹೀಗಾಗಿ ಆಸೀಸ್ ವಿರುದ್ಧ ಪ್ರಯೋಗ ನಡೆಸಿ, ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಟಿ20 ವಿಶ್ವಕಪ್ಗೆ ಸಜ್ಜಾಗಬಹುದು. ಇನ್ನು ಈ ಪಂದ್ಯಗಳ ನೇರ ಪ್ರಸಾರ ಸೇರಿದಂತೆ ಇತರೆ ಮಾಹಿತಿ ಈ ಕೆಳಗಿನಂತಿವೆ.
ಭಾರತ-ಆಸ್ಟ್ರೇಲಿಯಾ ಸರಣಿಯ ವೇಳಾಪಟ್ಟಿ ಹೀಗಿದೆ:
ಉಭಯ ತಂಡಗಳು ಹೀಗಿವೆ:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ ತಂಡ: ಆರೋನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.
Published On - 1:55 pm, Mon, 19 September 22