IND vs BAN: ಟೀಂ ಇಂಡಿಯಾ ಪರ ಇಬ್ಬರು ಐಪಿಎಲ್ ಸ್ಟಾರ್​ಗಳ ಪದಾರ್ಪಣೆ

IND vs BAN Playing 11: ಎರಡು ಪಂದ್ಯಗಳ ಟೆಸ್ಟ್ ಸರಣಿಯ ನಂತರ ಇದೀಗ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಗ್ವಾಲಿಯರ್‌ನ ಮಾಧವರಾವ್ ಸಿಂಧಿಯಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

IND vs BAN: ಟೀಂ ಇಂಡಿಯಾ ಪರ ಇಬ್ಬರು ಐಪಿಎಲ್ ಸ್ಟಾರ್​ಗಳ ಪದಾರ್ಪಣೆ
ಟೀಂ ಇಂಡಿಯಾ
Follow us
|

Updated on:Oct 06, 2024 | 7:02 PM

ಎರಡು ಪಂದ್ಯಗಳ ಟೆಸ್ಟ್ ಸರಣಿಯ ನಂತರ ಇದೀಗ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಗ್ವಾಲಿಯರ್‌ನ ಮಾಧವರಾವ್ ಸಿಂಧಿಯಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ ಬರೋಬ್ಬರಿ 14 ವರ್ಷಗಳ ನಂತರ ಗ್ವಾಲಿಯರ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿರುವುದು ವಿಶೇಷ ಸಂಗತಿಯಾಗಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಟೀಂ ಇಂಡಿಯಾ ಪರ ಇಬ್ಬರು ಆಟಗಾರರು ಚೊಚ್ಚಲ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ.

ಮಯಾಂಕ್-ನಿತೀಶ್​ಗೆ ಚೊಚ್ಚಲ ಪಂದ್ಯ

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಇದರೊಂದಿಗೆ ಮಯಾಂಕ್ ಯಾದವ್-ನಿತೀಶ್ ರೆಡ್ಡಿಗೆ ಈ ಪಂದ್ಯದಲ್ಲಿ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ. ಅದೇ ಹೊತ್ತಿಗೆ ವರುಣ್ ಚಕ್ರವರ್ತಿ ಕೂಡ ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಈ ಮೂಲಕ ವರುಣ್ ಚಕ್ರವರ್ತಿ 3 ವರ್ಷಗಳ ನಂತರ ಭಾರತ ತಂಡಕ್ಕೆ ಮರಳಿದ್ದಾರೆ. ಇದಕ್ಕೂ ಮೊದಲು, ಅವರು 2021 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು.

ಉಭಯ ತಂಡಗಳು

ಟೀಂ ಇಂಡಿಯಾ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ನಿತೀಶ್ ಕುಮಾರ್ ರೆಡ್ಡಿ, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.

ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಪರ್ವೇಜ್ ಹೊಸೈನ್ ಎಮನ್, ತೌಹಿದ್ ಹೃದಯೋಯ್, ಜೇಕರ್ ಅಲಿ, ಮೆಹಿದಿ ಹಸನ್, ರಿಶಾದ್ ಹೊಸೈನ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Sun, 6 October 24

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?