IND vs BAN, 1st Test: ಟಾಸ್ ಗೆದ್ದ ಭಾರತ; 3 ಸ್ಪಿನ್ನರ್‌, ಇಬ್ಬರು ಬೌಲರ್​ಗಳಿಗೆ ತಂಡದಲ್ಲಿ ಸ್ಥಾನ

IND vs BAN, 1st Test: ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರಾಹುಲ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ಉಭಯ ತಂಡಗಳ ಆಡುವ ಹನ್ನೊಂದರ ಬಳಗದ ಪಟ್ಟಿಯೂ ಹೊರಬಿದ್ದಿದೆ.

IND vs BAN, 1st Test: ಟಾಸ್ ಗೆದ್ದ ಭಾರತ; 3 ಸ್ಪಿನ್ನರ್‌, ಇಬ್ಬರು ಬೌಲರ್​ಗಳಿಗೆ ತಂಡದಲ್ಲಿ ಸ್ಥಾನ
IND vs BAN 2nd Test
Follow us
TV9 Web
| Updated By: ಪೃಥ್ವಿಶಂಕರ

Updated on:Dec 14, 2022 | 8:59 AM

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡ ಬಳಿಕ ಭಾರತ ತಂಡ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವೆ ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಇಂದಿನಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದೆ. ಟೀಮ್ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಇಂಜುರಿಗೆ ತುತ್ತಾದ ಪರಿಣಾಮ ಮೊದಲ ಟೆಸ್ಟ್​ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಉಪ ನಾಯಕನಾಗಿದ್ದ ಕೆಎಲ್ ರಾಹುಲ್ (KL Rahul) ಕ್ಯಾಪ್ಟನ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ರೋಹಿತ್ ಜಾಗಕ್ಕೆ ಬದಲಿ ಆಟಗಾರನಾಗಿ ಅಭಿಮನ್ಯು ಈಶ್ವರನ್ ಆಯ್ಕೆ ಆಗಿದ್ದಾರೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರಾಹುಲ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ಉಭಯ ತಂಡಗಳ ಆಡುವ ಹನ್ನೊಂದರ ಬಳಗದ ಪಟ್ಟಿಯೂ ಹೊರಬಿದ್ದಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ 12 ವರ್ಷಗಳ ನಂತರ ಜಯದೇವ್ ಉನಾದ್ಕಟ್ ಅವಕಾಶ ಪಡೆದಿದ್ದಾರೆ. ಆದರೆ ವೀಸಾ ಪಡೆಯುವಲ್ಲಿ ವಿಳಂಬವಾದ ಕಾರಣ, ಅವರು ಇಲ್ಲಿಯವರೆಗೆ ಬಾಂಗ್ಲಾದೇಶವನ್ನು ತಲುಪಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮೊದಲ ಟೆಸ್ಟ್‌ನ ಆಡುವ ಹನ್ನೊಂದರಿಂದ ಹೊರಗುಳಿದಿದ್ದಾರೆ. ಹೀಗಾಗಿ ಉನಾದ್ಕಟ್ ಅನುಪಸ್ಥಿತಿಯಲ್ಲಿ ವೇಗದ ಬೌಲಿಂಗ್ ಜವಾಬ್ದಾರಿ ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್ ಹೆಗಲ ಮೇಲಿದೆ.

ಬ್ಯಾಟಿಂಗ್ ವಿಭಾಗ ಹೀಗಿದೆ

ರೋಹಿತ್ ಅಲಭ್ಯತೆಯಲ್ಲಿ ಶುಭ್ಮನ್ ಗಿಲ್ ಅವರು ನಾಯಕ ಕೆಎಲ್ ರಾಹುಲ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಒತ್ತಡದಲ್ಲಿರುವ ಗಿಲ್ ಕಳೆದ 11 ಪಂದ್ಯಗಳಲ್ಲಿ 4 ಅರ್ಧಶತಕ ಸಿಡಿಸಿದ್ದಾರಷ್ಟೆ. ಆಸ್ಟ್ರೇಲಿಯಾ ವಿರುದ್ಧ ಗಳಿಸಿದ 91 ರನ್ ಗರಿಷ್ಠ ಸ್ಕೋರ್ ಆಗಿದೆ. ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಗಿಲ್​ಗೆ ಇದೊಂದು ಉತ್ತಮ ಅವಕಾಶ. ಮೂರನೇ ಕ್ರಮಾಂಕದಲ್ಲಿ ಉಪ ನಾಯಕ ಚೇತೇಶ್ವರ್ ಪೂಜಾರ ಆಡಿದರೆ, ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಅಂತೆಯೆ ಐದನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದು, 6ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಡಲಿದ್ದಾರೆ.

3 ಸ್ಪಿನ್ನರ್‌ಗಳಿಗೆ ಅವಕಾಶ

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಕುಲ್ದೀಪ್ ಯಾದವ್ ಟೀಂ ಇಂಡಿಯಾಗೆ ಮರಳಿದ್ದಾರೆ. ವಿಶೇಷವೆಂದರೆ ಇಂದು ಕುಲ್ದೀಪ್ ಯಾದವ್ ಅವರ ಹುಟ್ಟುಹಬ್ಬವೂ ಆಗಿದೆ. ಬರ್ತ್​ಡೇ ಗಿಫ್ಟ್ ರೂಪದಲ್ಲಿ ತಂಡಕ್ಕೆ ಎಂಟ್ರಿಕೊಟ್ಟಿರುವ ಕುಲ್ದೀಪ್ ಯಾವ ರೀತಿಯ ಮ್ಯಾಜಿಕ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ತಂಡದಲ್ಲಿ ಕುಲ್ದೀಪ್ ಹೊರತಾಗಿ ಇನ್ನೂ ಇಬ್ಬರು ಸ್ಪಿನ್ನರ್‌ಗಳಾದ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಇದ್ದಾರೆ.

Pro Kabaddi 2022: ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಯನ್ನು ಮಣಿಸಿ ಸೆಮೀಸ್​ಗೆ ಲಗ್ಗೆ ಇಟ್ಟ ಬೆಂಗಳೂರು ಗೂಳಿಗಳು

ಭಾರತ-ಬಾಂಗ್ಲಾದೇಶ ಟೆಸ್ಟ್ ದಾಖಲೆ

ಭಾರತ ಮತ್ತು ಬಾಂಗ್ಲಾದೇಶ 12ನೇ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗಿವೆ. ಇದಕ್ಕೂ ಮುನ್ನ ಆಡಿದ 11 ಟೆಸ್ಟ್‌ಗಳಲ್ಲಿ ಭಾರತ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, 2 ಟೆಸ್ಟ್ ಪಂದ್ಯಗಳು ಡ್ರಾ ಆಗಿದ್ದವು. ಹೀಗಾಗಿ ಈ ಸರಣಿಯಲ್ಲೂ ಟೀಂ ಇಂಡಿಯಾ ಬಾಂಗ್ಲಾ ವಿರುದ್ಧ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲು ಪ್ರಯತ್ನಿಸಲಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಭಾರತದ ಪ್ಲೇಯಿಂಗ್ XI: ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್.

ಬಾಂಗ್ಲಾದೇಶ ಪ್ಲೇಯಿಂಗ್ XI: ಝಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಯಾಸಿರ್ ಅಲಿ, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್ (ನಾಯಕ), ಲಿಟನ್ ದಾಸ್, ನೂರುಲ್ ಹಸನ್, ಮೆಹಿದಿ ಹಸನ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ಎಬಾದತ್ ಹೊಸೈನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:49 am, Wed, 14 December 22

ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮೆಸ್ಕಾಂ‌ ಸಿಬ್ಬಂದಿಯ ಎಣ್ಣೆ ಪಾರ್ಟಿ, ಧಮ್ಕಿ
ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮೆಸ್ಕಾಂ‌ ಸಿಬ್ಬಂದಿಯ ಎಣ್ಣೆ ಪಾರ್ಟಿ, ಧಮ್ಕಿ
ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!