IND vs BAN: ಬಾಂಗ್ಲಾ ಪಡೆಯನ್ನು ಮಕಾಡೆ ಮಲಗಿಸಿದ ಟೀಮ್ ಇಂಡಿಯಾ

India vs Bangladesh, 1st Test: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಇನ್ನು ಈ ಸರಣಿಯ ಎರಡನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೆ ಕಾನ್ಪುರ ಗ್ರೀನ್ ಪಾರ್ಕ್ ಮೈದಾನ ಆತಿಥ್ಯವಹಿಸಲಿದೆ.

IND vs BAN: ಬಾಂಗ್ಲಾ ಪಡೆಯನ್ನು ಮಕಾಡೆ ಮಲಗಿಸಿದ ಟೀಮ್ ಇಂಡಿಯಾ
Team India
Follow us
|

Updated on:Sep 22, 2024 | 11:29 AM

ಪಾಕಿಸ್ತಾನ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಹುರುಪಿನಲ್ಲಿ ಕಣಕ್ಕಿಳಿದಿದ್ದ ಬಾಂಗ್ಲಾದೇಶ್ ತಂಡವನ್ನು ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮಕಾಡೆ ಮಲಗಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡವು 280 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್‌ ಆಯ್ದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ (113) ಶತಕ ಬಾರಿಸಿದರೆ, ರವೀಂದ್ರ ಜಡೇಜಾ (86) ಹಾಗೂ ಯಶಸ್ವಿ ಜೈಸ್ವಾಲ್ (56) ಅರ್ಧಶತಕ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 371 ರನ್ ಕಲೆಹಾಕಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು ಕೇವಲ 149 ರನ್​ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಜಸ್​​ಪ್ರೀತ್ ಬುಮ್ರಾ 4 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದು ಮಿಂಚಿದರು.

ಇನ್ನು 227 ರನ್​ಗಳ ಪ್ರಥಮ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇದಾಗ್ಯೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ (119) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (109) ಶತಕ ಸಿಡಿಸಿದರು. ಈ ಸೆಂಚುರಿಗಳ ನೆರವಿನಿಂದ ಭಾರತ ತಂಡವು 4 ವಿಕೆಟ್ ಕಳೆದುಕೊಂಡು 287 ರನ್​ ಗಳಿಸಿ ದ್ವಿತೀಯ ಇನಿಂಗ್ಸ್​ ಡಿಕ್ಲೇರ್ ಘೋಷಿಸಿತು.

515 ರನ್​ಗಳ ಕಠಿಣ ಗುರಿ:

ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 515 ರನ್​ಗಳ ಕಠಿಣ ಗುರಿ ಪಡೆದ ಬಾಂಗ್ಲಾದೇಶ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಮೂರನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ್ ತಂಡವು 4 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿತು. ಇನ್ನು ನಾಲ್ಕನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಬಾಂಗ್ಲಾ ತಂಡಕ್ಕೆ ನಾಯಕ ನಜ್ಮುಲ್ ಹೊಸೈನ್ ಶಾಂತೊ (82) ಆಸರೆಯಾಗಿ ನಿಂತರು.

ಆದರೆ ಯಾವಾಗ ಅಶ್ವಿನ್ ಹಾಗೂ ಜಡೇಜಾ ಜೋಡಿ ಸ್ಪಿನ್ ಮೋಡಿ ಶುರು ಮಾಡಿದರೋ, ಬಾಂಗ್ಲಾ ಬ್ಯಾಟರ್​ಗಳ ಪೆವಿಲಿಯನ್ ಪರೇಡ್ ಆರಂಭವಾಯಿತು. ಪರಿಣಾಮ ದ್ವಿತೀಯ ಇನಿಂಗ್ಸ್​ನಲ್ಲಿ ಬಾಂಗ್ಲಾದೇಶ್ ತಂಡವು ಕೇವಲ 234 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 280 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಭಾರತದ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮಾಡಿದ ರವಿಚಂದ್ರನ್ ಅಶ್ವಿನ್ 21 ಓವರ್​ಗಳಲ್ಲಿ 88 ರನ್ ನೀಡಿ 6 ವಿಕೆಟ್ ಪಡೆದರೆ, 15.1 ಓವರ್​ಗಳಲ್ಲಿ 58 ರನ್ ನೀಡಿ ಜಡೇಜಾ 3 ವಿಕೆಟ್ ಕಬಳಿಸಿದರು. ಇನ್ನು ಒಂದು ವಿಕೆಟ್ ಜಸ್​ಪ್ರೀತ್ ಬುಮ್ರಾ ಪಡೆದರು.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್ , ರಿಷಭ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ರವಿಚಂದ್ರನ್ ಅಶ್ವಿನ್ , ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ:  ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಮೊಹಮ್ಮದ್ ನಬಿ

ಬಾಂಗ್ಲಾದೇಶ್ ಪ್ಲೇಯಿಂಗ್ 11: ಶಾದ್ಮನ್ ಇಸ್ಲಾಂ , ಝಾಕಿರ್ ಹಸನ್ , ನಜ್ಮುಲ್ ಹೊಸೈನ್ ಶಾಂತೊ (ನಾಯಕ) , ಮೊಮಿನುಲ್ ಹಕ್ , ಮುಶ್ಫಿಕರ್ ರಹೀಮ್ , ಶಾಕಿಬ್ ಅಲ್ ಹಸನ್ , ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ಮೆಹಿದಿ ಹಸನ್ ಮಿರಾಝ್, ತಸ್ಕಿನ್ ಅಹ್ಮದ್ , ಹಸನ್ ಮಹಮೂದ್ , ನಹಿದ್ ರಾಣಾ.

Published On - 11:18 am, Sun, 22 September 24

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ