AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತ vs ಬಾಂಗ್ಲಾದೇಶ್ ನಡುವಣ ಸರಣಿ ಇಂದಿನಿಂದ ಶುರು

India vs Bangladesh, 1st Test: ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಟೆಸ್ಟ್ ಕ್ರಿಕೆಟ್​ನಲ್ಲಿ ಒಟ್ಟು 13 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅತ್ತ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗದ ಬಾಂಗ್ಲಾದೇಶ್ ತಂಡವು 2 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದೀಗ 14ನೇ ಬಾರಿಗೆ ಮುಖಾಮುಖಿಯಾಗಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ.

IND vs BAN: ಭಾರತ vs ಬಾಂಗ್ಲಾದೇಶ್ ನಡುವಣ ಸರಣಿ ಇಂದಿನಿಂದ ಶುರು
IND vs BAN
ಝಾಹಿರ್ ಯೂಸುಫ್
|

Updated on: Sep 19, 2024 | 7:41 AM

Share

ಭಾರತ ಮತ್ತು ಬಾಂಗ್ಲಾದೇಶ್ ನಡುವಿನ ಟೆಸ್ಟ್ ಸರಣಿಯು ಇಂದಿನಿಂದ (ಸೆ.19) ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯಲ್ಲಿ ಮೊದಲು ಎರಡು ಟೆಸ್ಟ್ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಗುರುವಾರದಿಂದ ಆರಂಭವಾಗಲಿದ್ದು, ಎರಡನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಜರುಗಲಿದೆ.

ಈ ಎರಡು ಟೆಸ್ಟ್ ಪಂದ್ಯಗಳು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ನ ಭಾಗವಾಗಿರುವ ಕಾರಣ ಉಭಯ ತಂಡಗಳಿಗೆ ಈ ಸರಣಿಯು ತುಂಬಾ ಮಹತ್ವದ್ದು. ಅದರಲ್ಲೂ ಭಾರತ ತಂಡವು ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಜಯ ಸಾಧಿಸುವ ಇರಾದೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

ಮತ್ತೊಂದೆಡೆ ಪಾಕಿಸ್ತಾನ್ ತಂಡದ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದಿರುವ ಬಾಂಗ್ಲಾದೇಶ್ ತಂಡವು ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ರೇಸ್​ನಲ್ಲಿದೆ. ಹೀಗಾಗಿ ಭಾರತದ ವಿರುದ್ಧದ ಸರಣಿಯನ್ನು ಗೆಲ್ಲುವ ಮೂಲಕ ಡಬ್ಲ್ಯೂಟಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರುವ ವಿಶ್ವಾಸದಲ್ಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಪಂದ್ಯಗಳನ್ನು ಸ್ಪೋರ್ಟ್ಸ್​ 18 ಚಾನೆಲ್ ಹಾಗೂ ಜಿಯೋ ಸಿನಿಮಾ ಆ್ಯಪ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಹಾಗೆಯೇ ಕಲರ್ಸ್ ಸಿನಿಪ್ಲೆಕ್ಸ್ ಚಾನೆಲ್​ನಲ್ಲೂ ಈ ಪಂದ್ಯಗಳ ಲೈವ್ ಇರಲಿದೆ.

ಟೆಸ್ಟ್ ಸರಣಿಗಾಗಿ ಉಭಯ ತಂಡಗಳು:

ಬಾಂಗ್ಲಾದೇಶ್ ಟೆಸ್ಟ್ ತಂಡ: ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮಹಮ್ಮದುಲ್ ಹಸನ್ ಜಾಯ್, ಝಾಕಿರ್ ಹಸನ್, ಶದ್ಮಾನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ಕುಮಾರ್ ದಾಸ್, ಮೆಹಿದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹಿದ್ ರಾಣಾ, ಹಸನ್ ಮಹಮ್ಮದ್, ತಸ್ಕಿನ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜಾಕರ್ ಅಲಿ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

ಭಾರತ vs ಬಾಂಗ್ಲಾದೇಶ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಗುರುವಾರ, 19 ಸೆಪ್ಟೆಂಬರ್ 2024 9:30 AM ಚೆನ್ನೈ
2ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಶುಕ್ರವಾರ, 27 ಸೆಪ್ಟೆಂಬರ್ 2024 9:30 AM ಕಾನ್ಪುರ
1ನೇ ಟಿ20, ಭಾರತ vs ಬಾಂಗ್ಲಾದೇಶ ಸೋಮವಾರ, 7 ಅಕ್ಟೋಬರ್ 2024 7 PM ಗ್ವಾಲಿಯರ್
2ನೇ ಟಿ20, ಭಾರತ vs ಬಾಂಗ್ಲಾದೇಶ ಗುರುವಾರ, 10 ಅಕ್ಟೋಬರ್ 2024 7 PM ದೆಹಲಿ
3ನೇ ಟಿ20, ಭಾರತ vs ಬಾಂಗ್ಲಾದೇಶ ಭಾನುವಾರ, 13 ಅಕ್ಟೋಬರ್ 2024 7 PM ಹೈದರಾಬಾದ್