ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ಆರಂಭಿಸಲಿದೆ. ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡವು ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಿದೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಶುಭ್ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಆಡಿದರೆ, ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ 5ನೇ ಮತ್ತು 6ನೇ ಕ್ರಮಾಂಕಗಳಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಜೊತೆ ಆಕಾಶ್ ದೀಪ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಸರ್ಫರಾಝ್ ಖಾನ್, ಧ್ರುವ್ ಜುರೇಲ್, ಕುಲ್ದೀಪ್ ಯಾದವ್, ಯಶ್ ದಯಾಳ್ ಹಾಗೂ ಅಕ್ಷರ್ ಪಟೇಲ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನ ಭಾಗವಾಗಿಲ್ಲ.
ಇದನ್ನೂ ಓದಿ: Travis Head: ಪವರ್ಪ್ಲೇನಲ್ಲಿ ಪವರ್ಫುಲ್ ದಾಖಲೆ ಬರೆದ ಟ್ರಾವಿಸ್ ಹೆಡ್
ಇನ್ನು ಬಾಂಗ್ಲಾದೇಶ್ ತಂಡ ಕೂಡ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಇಲ್ಲೂ ಕೂಡ ಮುಂದುವರೆಸಲಾಗಿದ್ದು, ಈ ಮೂಲಕ ಮೊದಲ ಪಂದ್ಯದಲ್ಲೇ ಜಯ ಸಾಧಿಸುವ ವಿಶ್ವಾಸದಲ್ಲಿದೆ. ಅದರಂತೆ ಬಾಂಗ್ಲಾದೇಶ್ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಬಾಂಗ್ಲಾದೇಶ್ ಟೆಸ್ಟ್ ತಂಡ:
ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮಹಮ್ಮದುಲ್ ಹಸನ್ ಜಾಯ್, ಝಾಕಿರ್ ಹಸನ್, ಶದ್ಮಾನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ಕುಮಾರ್ ದಾಸ್, ಮೆಹಿದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹಿದ್ ರಾಣಾ, ಹಸನ್ ಮಹಮ್ಮದ್, ತಸ್ಕಿನ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜಾಕರ್ ಅಲಿ.
ಭಾರತ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.
Published On - 9:06 am, Thu, 19 September 24