Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 20 ಓವರ್ ಆಗುವಷ್ಟರಲ್ಲೇ ತಮ್ಮ ಇನ್ನಿಂಗ್ಸ್ ಮುಗಿಸಿದ ಗಿಲ್, ರಾಹುಲ್, ಕೊಹ್ಲಿ!

IND vs BAN: ಟೀಂ ಇಂಡಿಯಾದ ಅಗ್ರ ಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಶುಭಮನ್ ಗಿಲ್, ನಾಯಕ ಕೆಎಲ್ ರಾಹುಲ್ ಮತ್ತು ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್​ನಲ್ಲಿ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದಾರೆ.

IND vs BAN: 20 ಓವರ್ ಆಗುವಷ್ಟರಲ್ಲೇ ತಮ್ಮ ಇನ್ನಿಂಗ್ಸ್ ಮುಗಿಸಿದ ಗಿಲ್, ರಾಹುಲ್, ಕೊಹ್ಲಿ!
ಗಿಲ್, ಕೊಹ್ಲಿ, ರಾಹುಲ್
Follow us
TV9 Web
| Updated By: ಪೃಥ್ವಿಶಂಕರ

Updated on:Dec 14, 2022 | 4:53 PM

ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿ ಸೋತಿದ್ದ ಟೀಂ ಇಂಡಿಯಾ (India Vs Bangladesh) ಇಂದಿನಿಂದ ಟೆಸ್ಟ್ ಸರಣಿಯನ್ನು ಆರಂಭಿಸಿದೆ. ಏಕದಿನ ಸರಣಿಯ ಸೋಲಿಗೆ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳಲಿದೆ ಎಂದು ಈ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಹೇಳಲಾಗುತ್ತಿತ್ತು. ಆದರೆ ಚಟ್ಟೋಗ್ರಾಮ್ ಟೆಸ್ಟ್‌ನ ಮೊದಲ ದಿನದ ಮೊದಲ ಸೆಷನ್‌ನಲ್ಲಿಯೇ ಎಲ್ಲ ನಿರೀಕ್ಷೆಗಳು ಹುಸಿಯಾಗಿವೆ. ಟೀಂ ಇಂಡಿಯಾದ ಅಗ್ರ ಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಶುಭಮನ್ ಗಿಲ್ (Shubman Gill), ನಾಯಕ ಕೆಎಲ್ ರಾಹುಲ್ (KL Rahul) ಮತ್ತು ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಮೊದಲ ಇನ್ನಿಂಗ್ಸ್​ನಲ್ಲಿ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದಾರೆ. ಅತ್ಯಂತ ಅಸಡ್ಡೆ ಆಟಕ್ಕೆ ಬಲಿಯಾದ ಈ ಮೂವರು ಆಟಗಾರರು ತಂಡದ 20 ಓವರ್‌ಗಳು ಮುಗಿಯುವುದರೊಳಗೆ ತಮ್ಮ ಇನ್ನಿಂಗ್ಸ್ ಮುಗಿಸಿ ಡ್ರೆಸಿಂಗ್ ಕೋಣೆ ಸೇರಿಕೊಂಡಿದ್ದಾರೆ.

ರಾಹುಲ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಶುಭಮನ್ ಗಿಲ್ ಸ್ವೀಪ್ ಶಾಟ್ ಆಡುವ ಯತ್ನದಲ್ಲಿ ತಮ್ಮ ವಿಕೆಟ್ ಒಪ್ಪಿಸಿದರು. ತೈಜುಲ್ ಇಸ್ಲಾಂ ಅವರ ಚೆಂಡನ್ನು ಪೆಡಲ್ ಸ್ವೀಪ್ ಮಾಡಲು ಯತ್ನಿಸುತ್ತಿದ್ದಾಗ ಗಿಲ್ ವಿಕೆಟ್ ಕಳೆದುಕೊಂಡರು. ಟೆಸ್ಟ್ ಕ್ರಿಕೆಟ್‌ನಲ್ಲಿ ಟಿ20 ಫಾರ್ಮ್ಯಾಟ್ ಶಾಟ್‌ಗಳನ್ನು ಆಡಲು ಪ್ರಯತ್ನಿಸಿದ ಗಿಲ್ ಬಹುಬೇಗನೇ ತಮ್ಮ ವಿಕೆಟ್ ಕಳೆದುಕೊಂಡರು.

1. ರಾಹುಲ್-ಕೊಹ್ಲಿ ಕೂಡ ವಿಫಲ

ಖಾಯಂ ನಾಯಕ ರೋಹಿತ್ ಅನುಪಸ್ಥಿತಿಯಲ್ಲಿ ತಂಡದ ಜವಬ್ದಾರಿವಹಿಸಿಕೊಂಡಿದ್ದ ಕೆಎಲ್ ರಾಹುಲ್ ಖಾಲಿದ್ ಅಹ್ಮದ್ ಅವರ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ರಾಹುಲ್​ ಬ್ಯಾಟ್​ನ ಒಳ ಅಂಚಿಗೆ ಬಡಿದ ಖಾಲಿದ್ ಚೆಂಡು, ಬಳಿಕ ಸೀದಾ ವಿಕೆಟ್​ಗೆ ಹೋಯಿತು. ಇದರೊಂದಿಗೆ ನಾಯಕನ ಇನ್ನಿಂಗ್ಸ್​ ಕೇವಲ 22 ರನ್​ಗಳಿಗೆ ಅಂತ್ಯಗೊಂಡಿತು.

IND vs BAN, 1st Test: ಟಾಸ್ ಗೆದ್ದ ಭಾರತ; 3 ಸ್ಪಿನ್ನರ್‌, ಇಬ್ಬರು ಬೌಲರ್​ಗಳಿಗೆ ತಂಡದಲ್ಲಿ ಸ್ಥಾನ

2. ಒಂದು ರನ್ನಿಗೆ ಸುಸ್ತಾದ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಬಹುಬೇಗನೇ ಆರಂಭಿಕರಿಬ್ಬರನ್ನು ಕಳೆದುಕೊಂಡಿದ್ದರಿಂದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಮೇಲೆ ಹೆಚ್ಚಿನ ನಿರೀಕ್ಷೆಗಳಿದ್ದವು. ಹಾಗೆಯೇ ಕೊಹ್ಲಿ ಕೂಡ ಎಲ್ಲಾ ಜವಬ್ದಾರಿಗಳನ್ನು ತಮ್ಮ ಹೆಗಲ ಮೇಲೆ ಹಾಕಿಕೊಂಡು ತಂಡವನ್ನು ಮುನ್ನಡೆಸುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ರಾಹುಲ್ ವಿಕೆಟ್ ಬಳಿಕ ಬ್ಯಾಟಿಂಗ್​ಗೆ ಬಂದ ಕೊಹ್ಲಿ ಕೇವಲ 1 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ತೈಜುಲ್ ಇಸ್ಲಾಂ ಎಸೆತದಲ್ಲಿ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದ ವಿರಾಟ್, ರಿವ್ಯೂ ತೆಗೆದುಕೊಂಡರು ಬದುಕುಳಿಯಲು ಸಾಧ್ಯವಾಗಲಿಲ್ಲ.

ಕೊಹ್ಲಿ ವಿಕೆಟ್ ಬಳಿಕ ನಾಲ್ಕನೇ ವಿಕೆಟ್​ಗೆ ಪೂಜಾರ ಜೊತೆಗೂಡಿದ ಪಂತ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಪಂತ್​ಗೆ ಸಾಥ್ ನೀಡುವ ಸಲುವಾಗಿ ಪಾಜಾರ ತಾಳ್ಮೆಯ ಆಟಕ್ಕೆ ಮುಂದಾದರೆ, ಇತ್ತ ಪಂತ್ ಹೊಡಿಬಡಿ ಆಟಕ್ಕೆ ಮುಂದಾಗಿ ಅರ್ಧಶತಕದಂಚಿನಲ್ಲಿ ಎಡವಿದರು. ಈ ಇನ್ನಿಂಗ್ಸ್​ನಲ್ಲಿ 46 ಎಸೆತಗಳನ್ನು ಎದುರಿಸಿದ ಪಂತ್ 2 ಸಿಕ್ಸರ್ ಹಾಗೂ 6 ಬೌಂಡರಿ ಸಹಿತ 45 ರನ್ ಚಚ್ಚಿದರು. ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿದೆ. ಪೂಜಾರ ಹಾಗೂ ಶ್ರೇಯಸ್ ಬ್ಯಾಟಿಂಗ್​ನಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Wed, 14 December 22

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ