IND vs BAN: ಭಾರತ- ಬಾಂಗ್ಲಾ ಟೆಸ್ಟ್ ಪಂದ್ಯಕ್ಕೆ ಮಳೆಯ ಆತಂಕ; ಪಿಚ್ ಯಾರಿಗೆ ಸಹಕಾರಿ? ಇಲ್ಲಿದೆ ವರದಿ

IND vs BAN: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗುವ ಸಾಧ್ಯತೆಯಿದೆ. ಅಕ್ಯುವೆದರ್ ವರದಿ ಪ್ರಕಾರ, ಪಂದ್ಯದ ಮೊದಲ ಎರಡು ದಿನಗಳಲ್ಲಿ ಶೇ.40 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ದಿನದ ತಾಪಮಾನವು 36 ಡಿಗ್ರಿ ಇರುತ್ತದೆ. ಮೂರನೇ ದಿನ ಮಳೆಯ ಸಂಭವನೀಯತೆ ಶೇ.25 ಆಗಲಿದೆ.

IND vs BAN: ಭಾರತ- ಬಾಂಗ್ಲಾ ಟೆಸ್ಟ್ ಪಂದ್ಯಕ್ಕೆ ಮಳೆಯ ಆತಂಕ; ಪಿಚ್ ಯಾರಿಗೆ ಸಹಕಾರಿ? ಇಲ್ಲಿದೆ ವರದಿ
ಚೆಪಾಕ್ ಮೈದಾನ
Follow us
ಪೃಥ್ವಿಶಂಕರ
|

Updated on: Sep 18, 2024 | 9:39 PM

ಕಳೆದ ತಿಂಗಳು ಶ್ರೀಲಂಕಾದಲ್ಲಿ ಏಕದಿನ ಸರಣಿಯನ್ನು ಆಡಿ ಮುಗಿಸಿದ ಬಳಿಕ ಕ್ರಿಕೆಟ್​ನಿಂದ ರಜೆ ತೆಗೆದುಕೊಂಡಿದ್ದ ಟೀಂ ಇಂಡಿಯಾ ಇದೀಗ ತಿಂಗಳುಗಳ ಬಳಿಕ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಅದರಂತೆ ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿರುವ ಭಾರತ, ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಒಂದು ವಾರದಿಂದ ಟೀಂ ಇಂಡಿಯಾ ಆಟಗಾರರು ಚೆನ್ನೈನಲ್ಲಿ ಅಭ್ಯಾಸದಲ್ಲಿ ನಿರತವಾಗಿದ್ದರೆ, ಬಾಂಗ್ಲಾದೇಶ ತಂಡ ಕೂಡ ಚೆನ್ನೈಗೆ ಬಂದಿಳಿದಿದೆ. ಹೀಗಾಗಿ ನಾಳೆಯಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ವರುಣನ ಅವಕೃಪೆ ಎದುರಾಗಿದೆ. ಇದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಇದಲ್ಲದೆ ಚಿದಂಬರಂ ಪಿಚ್ ಯಾರಿಗೆ ಹೆಚ್ಚು ಸಹಕಾರಿಯಗಲಿದೆ ಎಂಬುದು ಕೂಡು ಕುತೂಹಲ ಕೆರಳಿಸಿದೆ.

ಪಿಚ್‌ ಯಾರಿಗೆ ಸಹಕಾರಿ?

ಚೆನ್ನೈ ಪಿಚ್ ಸಾಮಾನ್ಯವಾಗಿ ಸ್ಪಿನ್ ಬೌಲರ್‌ಗಳಿಗೆ ನೆರವಾಗುವುದನ್ನು ನಾವು ಈ ಹಿಂದಿನ ಪಂದ್ಯಗಳನ್ನು ಗಮನಿಸಿದರೆ ತಿಳಿಯಲಿದೆ. ಚಿದಂಬರಂ ಮೈದಾನದಲ್ಲಿ 9 ಪಿಚ್‌ಗಳನ್ನು ನಿರ್ಮಿಸಲಾಗಿದ್ದು, ಈ ಪೈಕಿ 3 ಪಿಚ್‌ಗಳನ್ನು ಮುಂಬೈನ ಕೆಂಪು ಮಣ್ಣಿನ ಪಿಚ್‌ನಿಂದ ಸಿದ್ಧಪಡಿಸಲಾಗಿದೆ. ಕೆಂಪು ಮಣ್ಣಿನ ಪಿಚ್ ವೇಗದ ಬೌಲರ್‌ಗಳಿಗೆ ಸಹಾಯಕವಾಗಿದೆ. ಆದರೆ ಉಳಿದ 6 ಪಿಚ್‌ಗಳಲ್ಲಿ ಸ್ಪಿನ್ ಬೌಲರ್‌ಗಳು ಸಹಾಯ ಪಡೆಯುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಪಂದ್ಯದ ಫಲಿತಾಂಶವು ಹೆಚ್ಚಾಗಿ ಪಂದ್ಯವನ್ನು ಯಾವ ಪಿಚ್‌ನಲ್ಲಿ ಆಡಲಾಗುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ಮೈದಾನದ ದಾಖಲೆ ಹೀಗಿದೆ

ಚೆನ್ನೈ ಮೈದಾನದಲ್ಲಿ ಇದುವರೆಗೆ 34 ಟೆಸ್ಟ್ ಪಂದ್ಯಗಳು ನಡೆದಿವೆ. ಈ ಮೈದಾನದಲ್ಲಿ ಭಾರತ 25 ಪಂದ್ಯಗಳನ್ನು ಗೆದ್ದಿದ್ದರೆ, ಎದುರಾಳಿ ತಂಡ 7 ಪಂದ್ಯಗಳನ್ನು ಗೆದ್ದಿದೆ. 11 ಪಂದ್ಯಗಳು ಡ್ರಾ ಆಗಿವೆ. ಈ ಮೈದಾನದಲ್ಲಿ ಕೊನೆಯ ಬಾರಿಗೆ 2021ರಲ್ಲಿ ಪಂದ್ಯ ಆಡಿದ್ದ ಭಾರತ ಈ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು.

ಪಂದ್ಯಕ್ಕೆ ಮಳೆಯ ಆತಂಕ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗುವ ಸಾಧ್ಯತೆಯಿದೆ. ಅಕ್ಯುವೆದರ್ ವರದಿ ಪ್ರಕಾರ, ಪಂದ್ಯದ ಮೊದಲ ಎರಡು ದಿನಗಳಲ್ಲಿ ಶೇ.40 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ದಿನದ ತಾಪಮಾನವು 36 ಡಿಗ್ರಿ ಇರುತ್ತದೆ. ಮೂರನೇ ದಿನ ಮಳೆಯ ಸಂಭವನೀಯತೆ ಶೇ.25 ಆಗಲಿದೆ. ಉಳಿದಂತೆ ಕೊನೆಯ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ. ಆದರೆ, ದಿನವಿಡೀ ಮೋಡ ಕವಿದ ವಾತಾವರಣ ಇರುತ್ತದೆ.

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ