BAN vs IND: ಭಾರತ-ಬಾಂಗ್ಲಾ 2ನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ

| Updated By: ಝಾಹಿರ್ ಯೂಸುಫ್

Updated on: Dec 06, 2022 | 6:55 PM

India vs Bangladesh 2nd ODI: ಈ ಪಂದ್ಯವು ಡಿಸೆಂಬರ್ 7 ರಂದು (ಬುಧವಾರ) ಢಾಕಾದ ಮೀರ್‌ಪುರದ ಶೇರೆ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

BAN vs IND: ಭಾರತ-ಬಾಂಗ್ಲಾ 2ನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ
India vs Bangladesh 2nd ODI
Follow us on

India vs Bangladesh 2nd ODI: ಭಾರತ-ಬಾಂಗ್ಲಾದೇಶ್ ನಡುವಣ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ನಾಳೆ ಶೇರೆ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಸೋತಿರುವ ಟೀಮ್ ಇಂಡಿಯಾಗೆ (Team India) ಇದು ಮಾಡು ಇಲ್ಲವೇ ಮಡಿ ಪಂದ್ಯ. ಏಕೆಂದರೆ ಈ ಪಂದ್ಯದಲ್ಲಿ ಸೋತರೆ ಸರಣಿ ಬಾಂಗ್ಲಾದೇಶ್ ಪಾಲಾಗಲಿದೆ. ಹೀಗಾಗಿ ನಿರ್ಣಾಯಕ ಹೋರಾಟಕ್ಕಾಗಿ ಭಾರತ ತಂಡವು ಕಠಿಣ ಅಭ್ಯಾಸದೊಂದಿಗೆ ಸಜ್ಜಾಗಿದೆ. ಈ ಪಂದ್ಯವು ಎಷ್ಟು ಗಂಟೆಗೆ ಶುರುವಾಗಲಿದೆ? ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು ಎಂಬುದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಭಾರತ-ಬಾಂಗ್ಲಾದೇಶ್ ನಡುವಣ 2ನೇ ಏಕದಿನ ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ?

ಈ ಪಂದ್ಯವು ಡಿಸೆಂಬರ್ 7 ರಂದು (ಬುಧವಾರ) ಢಾಕಾದ ಮೀರ್‌ಪುರದ ಶೇರೆ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದನ್ನೂ ಓದಿ
IPL 2023: RCB ಈ ನಾಲ್ವರು ಆಟಗಾರರ ಖರೀದಿಗೆ ಮುಂದಾಗಬಹುದು..!
IPL 2023: ಈ ಬಾರಿಯ ಐಪಿಎಲ್​ನಿಂದ 5 ಆಟಗಾರರು ಔಟ್..!
IPL 2023 Mini Auction: ಐಪಿಎಲ್ ಮಿನಿ ಹರಾಜು ಲೀಸ್ಟ್ ಔಟ್: ಯಾವ ದೇಶದಿಂದ ಎಷ್ಟು ಆಟಗಾರರು?
New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

ಭಾರತ-ಬಾಂಗ್ಲಾ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ-ಬಾಂಗ್ಲಾದೇಶ್ ನಡುವಣ ಎರಡನೇ ಏಕದಿನ ಪಂದ್ಯವು ಬೆಳಗ್ಗೆ 11:30 IST ಕ್ಕೆ ಶುರುವಾಗಲಿದೆ. ಇನ್ನು ಬೆಳಗ್ಗೆ 11 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಈ ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಬಾಂಗ್ಲಾದೇಶ್ ಮತ್ತು ಭಾರತ ನಡುವಣ 2ನೇ ಏಕದಿನ ಪಂದ್ಯ ಸೋನಿ ಸ್ಪೋರ್ಟ್ಸ್​ ನೆಟ್​ವರ್ಕ್​ನಲ್ಲಿ ನೇರ ಪ್ರಸಾರವಾಗಲಿದೆ. ನೀವು ಸೋನಿಲೈವ್ ಅಪ್ಲಿಕೇಶನ್‌ ಹಾಗೂ ಡಿಡಿ ಸ್ಪೋರ್ಟ್ಸ್ ಚಾನೆಲ್​ನಲ್ಲೂ ಪಂದ್ಯವನ್ನು ವೀಕ್ಷಿಸಬಹುದು.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್, ರಜತ್ ಪಾಟಿದಾರ್, ಇಶಾನ್ ಕಿಶನ್ , ರಾಹುಲ್ ತ್ರಿಪಾಠಿ, ಅಕ್ಷರ್ ಪಟೇಲ್

ಬಾಂಗ್ಲಾದೇಶ ಏಕದಿನ ತಂಡ: ನಜ್ಮುಲ್ ಹೊಸೈನ್ ಶಾಂಟೊ, ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಇಬಾದತ್ ಹೊಸೈನ್, ಹಸನ್ ಮಹ್ಮದ್, ಮುಸ್ತಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್, ನೂರುಲ್ ಹಸನ್.

 

 

 

Published On - 6:55 pm, Tue, 6 December 22