Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 6,6,6,6,6,6,6,.. 34 ಎಸೆತಗಳಲ್ಲಿ 74 ರನ್ ಚಚ್ಚಿದ ನಿತೀಶ್ ಕುಮಾರ್ ರೆಡ್ಡಿ..! ವಿಡಿಯೋ ನೋಡಿ

Nitish Kumar Reddy: 2ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ನಿತೀಶ್ ಆಟಕ್ಕೆ ಬಾಂಗ್ಲಾ ತಂಡವೇ ದಂಗಾಗಿ ಹೋಯಿತು. ನಿತೀಶ್ ಕುಮಾರ್ ರೆಡ್ಡಿ ಅವರು ಕೇವಲ 34 ಎಸೆತಗಳಲ್ಲಿ 74 ರನ್ ಗಳಿಸಿದರು. ನಿತೀಶ್ ರೆಡ್ಡಿ ಅವರ ಇನ್ನಿಂಗ್ಸ್‌ನಲ್ಲಿ 7 ಭರ್ಜರಿ ಸಿಕ್ಸರ್‌ ಹಾಗೂ 4 ಬೌಂಡರಿಗಳು ಸೇರಿದ್ದವು.

IND vs BAN: 6,6,6,6,6,6,6,.. 34 ಎಸೆತಗಳಲ್ಲಿ 74 ರನ್ ಚಚ್ಚಿದ ನಿತೀಶ್ ಕುಮಾರ್ ರೆಡ್ಡಿ..! ವಿಡಿಯೋ ನೋಡಿ
ನಿತೀಶ್ ಕುಮಾರ್
Follow us
ಪೃಥ್ವಿಶಂಕರ
|

Updated on:Oct 09, 2024 | 8:49 PM

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಎರಡನೇ ಟಿ20 ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಆದರೆ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಿಬ್ಬರು ಕೇವಲ 25 ರನ್​​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಸಂಜು ಸ್ಯಾಮ್ಸನ್ ಕೇವಲ 10 ರನ್​ಗಳಿಗೆ ಸುಸ್ತಾದರೆ, ಅಭಿಷೇಕ್ ಶರ್ಮಾ ಅವರ ಇನ್ನಿಂಗ್ಸ್ 16 ರನ್​ಗಳಿಗೆ ಕೊನೆಯಾಯಿತು. ಇದು ಸಾಲದೆಂಬಂತೆ ನಾಯಕ ಸೂರ್ಯ ಕೂಡ 8 ರನ್ ಬಾರಿಸಿ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ತಂಡ ಆರಂಭದಲ್ಲೇ ಒತ್ತಡಕ್ಕೆ ಸಿಲುಕಿದ್ದರಿಂದ 100 ರನ್ ಕಲೆಹಾಕುವುದು ಕಷ್ಟಕರವಾಗಿತ್ತು. ಆದರೆ ಆ ಬಳಿಕ ಜೊತೆಯಾದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹಾಗೂ ರಿಂಕು ಸಿಂಗ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ದಿಕ್ಕನೇ ಬದಲಿಸಿದರು. ಅದರಲ್ಲೂ 2ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ನಿತೀಶ್ ಆಟಕ್ಕೆ ಬಾಂಗ್ಲಾ ತಂಡವೇ ದಂಗಾಗಿ ಹೋಯಿತು.

ನಿತೀಶ್ ಆಟಕ್ಕೆ ಬಾಂಗ್ಲಾ ಸುಸ್ತು

ಮೇಲೆ ಹೇಳಿದಂತೆ ನಿತೀಶ್ ರೆಡ್ಡಿ ಕ್ರೀಸ್‌ಗೆ ಬಂದಾಗ ಟೀಂ ಇಂಡಿಯಾ ಸಂಕಷ್ಟದಲ್ಲಿತ್ತು. ಆದ್ದರಿಂದ ರಿಂಕು ಹಾಗೂ ನಿತೀಶ್ ಆರಂಭದಲ್ಲಿ ನಿದಾನಗತಿಯ ಆಟಕ್ಕೆ ಮುಂದಾದರು. ಹೀಗಾಗಿ ನಿತೀಶ್ ಮೊದಲ 12 ಎಸೆತಗಳಲ್ಲಿ ಕೇವಲ 13 ರನ್ ಗಳಿಸಿದ್ದರು. ಆದರೆ ಇದಾದ ನಂತರ ತಮ್ಮ ನಿಜ ರೂಪ ತೊರಿದ ನಿತೀಶ್ ಮುಂದಿನ 15 ಎಸೆತಗಳಲ್ಲಿ 37 ರನ್ ಚಚ್ಚಿದರು. ಈ ನಡುವೆ ಕೇವಲ 27 ಎಸೆತಗಳಲ್ಲಿ ತಮ್ಮ ಚೊಚ್ಚಲ ಅರ್ಧಶತಕವನ್ನು ಪೂರೈಸಿದರು. ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 34 ಎಸೆತಗಳನ್ನು ಎದುರಿಸಿದ ನಿತೀಶ್, 7 ಭರ್ಜರಿ ಸಿಕ್ಸರ್ ಹಾಗೂ 4 ಬೌಂಡರಿ ಸಹಿತ 74 ರನ್​ ಚಚ್ಚಿದರು. ಇದಲ್ಲದೆ ರಿಂಕು ಜೊತೆಗೂಡಿ ಶತಕದ ಜೊತೆಯಾಟವನ್ನು ನಡೆಸಿದರು.

ನಿತೀಶ್ ಸ್ಫೋಟಕ ಬ್ಯಾಟಿಂಗ್

ನಿತೀಶ್ ಕುಮಾರ್ ರೆಡ್ಡಿ ತಮ್ಮ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 7 ಸಿಕ್ಸರ್ ಬಾರಿಸಿದ್ದರು. ಮಹಮ್ಮದುಲ್ಲಾ ಅವರ 9ನೇ ಓವರ್‌ನಲ್ಲಿ ತಮ್ಮ ಮೊದಲ ಸಿಕ್ಸರ್‌ ಬಾರಿಸಿದ ನಿತೀಶ್ ಇದರ ನಂತರ, ಮುಂದಿನ ಓವರ್‌ ಎಸೆದ ಲೆಗ್ ಸ್ಪಿನ್ನರ್ ರಿಶಾದ್ ಹುಸೇನ್ ಅವರ ಸತತ ಎರಡು ಎಸೆತಗಳಲ್ಲಿ ಎರಡು ಸಿಕ್ಸರ್ ಬಾರಿಸಿದರು. 11ನೇ ಓವರ್ ಬೌಲ್ ಮಾಡಿದ ಮುಸ್ತಫಿಜುರ್ ರೆಹಮಾನ್ ಎಸೆತದಲ್ಲಿಯೂ ನಿತೀಶ್ ಸಿಕ್ಸರ್ ಬಾರಿಸಿದರು. ಇದಾದ ನಂತರ ನಿತೀಶ್, ಮೆಹದಿ ಹಸನ್ ಅವರ ಓವರ್‌ನಲ್ಲಿ ಎರಡು ಸಿಕ್ಸರ್ ಬಾರಿಸಿದರು. ಒಟ್ಟಾರೆ ನಿತೀಶ್ ಬಾರಿಸಿದ 7 ಸಿಕ್ಸರ್‌ಗಳಲ್ಲಿ 6 ಸಿಕ್ಸರ್​ಗಳನ್ನು ಸ್ಪಿನ್ನರ್‌ಗಳ ವಿರುದ್ಧ ಹೊಡೆದರು. ಈ ಮೂಲಕ ನಾನು ಸ್ಪಿನ್ನರ್‌ಗಳ ವಿರುದ್ಧ ಮುಕ್ತವಾಗಿ ಆಡಬಲ್ಲೆ ಎಂಬುದು ನಿತೀಶ್ ಸಾಭೀತುಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Wed, 9 October 24

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್