IND vs BAN: ಬಾಂಗ್ಲಾದೇಶ ವಿರುದ್ಧ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಸೂರ್ಯ
IND vs BAN: ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಶಾಂಟೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟಿ20 ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ ಕೇವಲ 127 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 11.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತ್ತು. ಹೀಗಾಗಿ ಎರಡನೇ ಟಿ20 ಪಂದ್ಯವನ್ನು ಗೆದ್ದು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲು ಟೀಂ ಇಂಡಿಯಾ ಪ್ರಯತ್ನಿಸುತ್ತಿದ್ದರೆ, ಇತ್ತ ಬಾಂಗ್ಲಾದೇಶ ಈ ಪಂದ್ಯವನ್ನು ಗೆದ್ದು ಸರಣಿಯನ್ನು 1-1 ರಲ್ಲಿ ಸಮಬಲಗೊಳಿಸಲು ಬಯಸುತ್ತಿದೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಶಾಂಟೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ
ಟಾಸ್ ಬಳಿಕ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಗ್ವಾಲಿಯರ್ನಲ್ಲಿ ಕಣಕ್ಕಿಳಿದಿದ್ದ ತಂಡವನ್ನೇ ದೆಹಲಿಯಲ್ಲೂ ಕಣಕ್ಕಿಳಿಸುವುದಾಗಿ ಘೋಷಿಸಿದರು. ಅಂದರೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಈ ಮೂಲಕ 2ನೇ ಟಿ20 ಪಂದ್ಯದಲ್ಲಿ ಪಿಚ್ಗೆ ಅನುಗುಣವಾಗಿ ವೇಗಿ ಹರ್ಷಿತ್ ರಾಣಾರನ್ನು ಕಣಕ್ಕಿಳಿಸಬಹುದು ಎಂಬ ವದಂತಿಗೆ ಬ್ರೇಕ್ ಬಿದ್ದಿದೆ.
🚨 Toss Update 🚨
Bangladesh win the toss in the 2nd T20I and elect to bowl in Delhi.
Live – https://t.co/Otw9CpO67y#TeamIndia | #INDvBAN | @IDFCFIRSTBank pic.twitter.com/3OMaARLaQ0
— BCCI (@BCCI) October 9, 2024
ಉಭಯ ತಂಡಗಳು
ಬಾಂಗ್ಲಾದೇಶ ತಂಡ: ಪರ್ವೇಜ್ ಹುಸೇನ್ ಎಮೋನ್, ಲಿಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹುಸೇನ್ ಶಾಂಟೊ (ನಾಯಕ), ತೌಹೀದ್ ಹೃದಯೋಯ್, ಮಹ್ಮುದುಲ್ಲಾ, ಜೆಕರ್ ಅಲಿ, ಮೆಹದಿ ಹಸನ್ ಮಿರಾಜ್, ರಿಶಾದ್ ಹುಸೇನ್, ತಸ್ಕಿನ್ ಅಹ್ಮದ್, ತಂಝೀಮ್ ಹಸನ್ ಸಾಕಿಬ್, ಮುಸ್ತಾಫಿಜುರ್ ರಹಮಾನ್.
#TeamIndia remain unchanged for the 2nd T20I 👌
A look at our Playing XI 🙌
Live – https://t.co/Otw9CpO67y#INDvBAN | @IDFCFIRSTBank pic.twitter.com/bgcJ7M8dJu
— BCCI (@BCCI) October 9, 2024
ಟೀಂ ಇಂಡಿಯಾ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:42 pm, Wed, 9 October 24